ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ವಿರುದ್ಧ ಕರ್ನಾಟಕ ರಾಜ್ಯ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ. ಸಿಸಿಬಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.
”ಪುನೀತ್ ಕೆರೆಹಳ್ಳಿ ವಿರುದ್ಧ 2013 ರಿಂದ 2023 ರವರಗೆ ರಾಜ್ಯದ 11 ಠಾಣೆಗಳಲ್ಲಿ ಎಫ್‌ಐಆರ್ ದಾಖಲಾಗಿತ್ತು. ಕೆಲ ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿತ್ತು. ಅಪರಾಧ ಪ್ರಕರಣಗಳಲ್ಲಿ ಪದೇ ಪದೇ ಭಾಗಿಯಾಗುತ್ತಿರುವುದರಿಂದ ಪುನೀತ್ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ” ಎಂದು ಸಿಸಿಬಿ ಮೂಲಗಳು ಹೇಳಿವೆ.
ಸಮಾಜದಲ್ಲಿ ಶಾಂತಿ ಕದಡುವ ಯತ್ನ, ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಪದೇ ಪದೇ ಭಾಗಿಯಾದ ಹಿನ್ನೆಲೆಯಲ್ಲಿ ಮೇಲಿಂದ ಮೇಲೆ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಸಿಸಿಬಿ ಪೊಲೀಸರು ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪುನೀತ್ ಕೆರೆಹಳ್ಳಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಪುನೀತ್ ಕೆರೆಹಳ್ಳಿ ವಿರುದ್ಧ ಡಿಜೆ ಹಳ್ಳಿ, ಬೇಗೂರು, ಕಗ್ಗಲಿಪುರ, ಹಲಸೂರು ಗೇಟ್, ಚಾಮರಾಜಪೇಟೆ, ಎಲೆಕ್ಟ್ರಾನಿಕ್ ಸಿಟಿ, ಮಳವಳ್ಳಿ ಮತ್ತು ಸಾತನೂರು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ.
”ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕೆರೆಹಳ್ಳಿಯ ಪುನೀತ್, ನಗರದ ಜೆ.ಪಿ.ನಗರ 7ನೇ ಹಂತದಲ್ಲಿ ವಾಸವಿದ್ದನು. ರಾಷ್ಟ್ರ ರಕ್ಷಣಾ ಪಡೆ ಹೆಸರಿನಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುತ್ತಿದ್ದನು. ಎಲ್ಲ ಕೃತ್ಯಗಳ ಬಗ್ಗೆ ವರದಿ ಸಿದ್ಧಪಡಿಸಿ ವಶಕ್ಕೆ ಪಡೆಯಲಾಗಿದೆ” ಎಂದು ಮೂಗಳು ತಿಳಿಸಿವೆ.
ಜಾಮೀನಿನ ಮೇಲೆ ಹೊರಗೆ ಬಂದಿದ್ದ ಪುನೀತ್ ಕೆರೆಹಳ್ಳಿ
ಇತ್ತೀಚೆಗೆ ರಾಮನಗರ ಜಿಲ್ಲೆಯಲ್ಲಿ ಗೋ ಸಾಗಣೆ ಮಾಡುತ್ತಿದ್ದರು ಎಂಬ ಆರೋಪದ ಮೇಲೆ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಕೂಡ ಈ ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ಸಂದರ್ಭದಲ್ಲಿ ಬಂಧನಕ್ಕೆ ಒಳಗಾಗಿ ನ್ಯಾಯಾಲಯದ ಜಾಮೀನಿನ ಮೇಲೆ ಬಿಡುಗಡೆಯಾಗಿತ್ತು.
ಇದನ್ನೂ ಓದಿ: ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿಶೀಟರ್ ತೆರೆಯಲು ಸಿದ್ಧತೆ



How he has been granted bail in murder case?