Homeಕರ್ನಾಟಕಗೂಂಡಾ ಕಾಯ್ದೆಯಡಿ ಪುನೀತ್ ಕೆರೆಹಳ್ಳಿ ಬಂಧನ

ಗೂಂಡಾ ಕಾಯ್ದೆಯಡಿ ಪುನೀತ್ ಕೆರೆಹಳ್ಳಿ ಬಂಧನ

- Advertisement -
- Advertisement -

ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ವಿರುದ್ಧ ಕರ್ನಾಟಕ ರಾಜ್ಯ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ. ಸಿಸಿಬಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.

”ಪುನೀತ್ ಕೆರೆಹಳ್ಳಿ ವಿರುದ್ಧ 2013 ರಿಂದ 2023 ರವರಗೆ ರಾಜ್ಯದ 11 ಠಾಣೆಗಳಲ್ಲಿ ಎಫ್‌ಐಆರ್ ದಾಖಲಾಗಿತ್ತು. ಕೆಲ ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿತ್ತು. ಅಪರಾಧ ಪ್ರಕರಣಗಳಲ್ಲಿ ಪದೇ ಪದೇ ಭಾಗಿಯಾಗುತ್ತಿರುವುದರಿಂದ ಪುನೀತ್ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ” ಎಂದು ಸಿಸಿಬಿ ಮೂಲಗಳು ಹೇಳಿವೆ.

ಸಮಾಜದಲ್ಲಿ ಶಾಂತಿ‌ ಕದಡುವ ಯತ್ನ, ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಪದೇ ಪದೇ ಭಾಗಿಯಾದ ಹಿನ್ನೆಲೆಯಲ್ಲಿ ಮೇಲಿಂದ‌ ಮೇಲೆ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಸಿಸಿಬಿ ಪೊಲೀಸರು ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪುನೀತ್ ಕೆರೆಹಳ್ಳಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಪುನೀತ್ ಕೆರೆಹಳ್ಳಿ ವಿರುದ್ಧ ಡಿಜೆ ಹಳ್ಳಿ, ಬೇಗೂರು, ಕಗ್ಗಲಿಪುರ, ಹಲಸೂರು ಗೇಟ್, ಚಾಮರಾಜಪೇಟೆ, ಎಲೆಕ್ಟ್ರಾನಿಕ್ ಸಿಟಿ, ಮಳವಳ್ಳಿ ಮತ್ತು ಸಾತನೂರು ಪೊಲೀಸ್​ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ.

”ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕೆರೆಹಳ್ಳಿಯ ಪುನೀತ್, ನಗರದ ಜೆ.ಪಿ.ನಗರ 7ನೇ ಹಂತದಲ್ಲಿ ವಾಸವಿದ್ದನು. ರಾಷ್ಟ್ರ ರಕ್ಷಣಾ ಪಡೆ ಹೆಸರಿನಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುತ್ತಿದ್ದನು. ಎಲ್ಲ ಕೃತ್ಯಗಳ ಬಗ್ಗೆ ವರದಿ ಸಿದ್ಧಪಡಿಸಿ ವಶಕ್ಕೆ ಪಡೆಯಲಾಗಿದೆ” ಎಂದು ಮೂಗಳು ತಿಳಿಸಿವೆ.

ಜಾಮೀನಿನ ಮೇಲೆ ಹೊರಗೆ ಬಂದಿದ್ದ ಪುನೀತ್ ಕೆರೆಹಳ್ಳಿ

ಇತ್ತೀಚೆಗೆ ರಾಮನಗರ ಜಿಲ್ಲೆಯಲ್ಲಿ ಗೋ ಸಾಗಣೆ ಮಾಡುತ್ತಿದ್ದರು ಎಂಬ ಆರೋಪದ ಮೇಲೆ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಕೂಡ ಈ ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ಸಂದರ್ಭದಲ್ಲಿ ಬಂಧನಕ್ಕೆ ಒಳಗಾಗಿ ನ್ಯಾಯಾಲಯದ ಜಾಮೀನಿನ ಮೇಲೆ ಬಿಡುಗಡೆಯಾಗಿತ್ತು.

ಇದನ್ನೂ ಓದಿ: ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿಶೀಟರ್ ತೆರೆಯಲು ಸಿದ್ಧತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...