Homeಕರ್ನಾಟಕಪುನೀತ್ ಕೆರೆಹಳ್ಳಿ ವಿರುದ್ಧದ ಗೂಂಡಾ ಕಾಯ್ದೆ ರದ್ದು: ಜೈಲಿನಿಂದ ಬಿಡುಗಡೆ

ಪುನೀತ್ ಕೆರೆಹಳ್ಳಿ ವಿರುದ್ಧದ ಗೂಂಡಾ ಕಾಯ್ದೆ ರದ್ದು: ಜೈಲಿನಿಂದ ಬಿಡುಗಡೆ

- Advertisement -
- Advertisement -

ಸ್ವಯಂ ಘೋಷಿತ ಗೋ ರಕ್ಷಕ, ಇದ್ರೀಸ್ ಪಾಷಾ ಕೊಲೆ ಪ್ರಕರಣದ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಿಸಲಾಗಿದ್ದ ಗೂಂಡಾ ಕಾಯ್ದೆಯನ್ನು ಸರ್ಕಾರ ರದ್ದುಪಡಿಸಿದ್ದು, ಅವರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಪೊಲೀಸ್ ಇಲಾಖೆಗೆ ಆದೇಶ ಹೊರಡಿಸಿದೆ.

ಕಳೆದ ಆಗಸ್ಟ್‌ನಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ಕರ್ನಾಟಕ ಸರ್ಕಾರವು ಗೂಂಡಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಿತ್ತು ಮತ್ತು ಸಿಸಿಬಿ ಪೊಲೀಸರು ಆತನಿಗೆ ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿತ್ತು.

ತನ್ನ ಬಂಧನ ಅಕ್ರಮವೆಂದು ಆರೋಪಿಸಿ ಪುನೀತ್‌ ಕೆರೆಹಳ್ಳಿ ಕರ್ನಾಟಕ ಹೈಕೋರ್ಟ್‌ ಮೊರೆ ಹೋಗಿದ್ದ. ಈ ಕುರಿತ ವಿಚಾರಣೆಗಾಗಿ ಸರ್ಕಾರವು ಸಲಹಾ ಸಮಿತಿ ರಚಿಸಿತ್ತು. ಸಮಿತಿಯು  ವರದಿಯಲ್ಲಿ ಈ ‘ಬಂಧಿಯನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ’ ಎಂದು ಹೇಳಿದೆ.

ಈ ವರದಿಯ ಅನ್ವಯ ಸೆ.16ರಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಆದೇಶ ಹೊರಡಿಸಿರುವ ಒಳಾಡಳಿತ ಇಲಾಖೆಯ(ಕಾನೂನು & ಸುವ್ಯವಸ್ಥೆ) ಸರ್ಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್, ಪುನೀತ್ ಕೆರೆಹಳ್ಳಿಯನ್ನು ಬಂಧನ ಮುಕ್ತಗೊಳಿಸುವಂತೆ ಸೂಚಿಸಿದ್ದಾರೆ.

ಈ ಆದೇಶದ ಬೆನ್ನಲ್ಲೇ ಪುನೀತ್ ಕೆರೆಹಳ್ಳಿಯನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ.

ಗೂಂಡಾ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಿದ ಮೊದಲ ಪ್ರಕರಣ ಇದಾಗಿದೆ. ಪುನೀತ್‌ ಕೆರೆಹಳ್ಳಿ ಮೇಲೆ 2013 ರಿಂದ 2023 ರವರೆಗೆ 10 ಪ್ರಕರಣಗಳು ದಾಖಲಾಗಿದೆ. ಸಮಾಜ ವಿರೋಧಿ ಕ್ರಿಮಿನಲ್‌ ಚಟುವಟಿಕೆಗಳಲ್ಲಿ ಪದೇ ಪದೇ ಭಾಗಿಯಾದ ಆರೋಪಿಯಾಗಿರುವ ಹಿನ್ನೆಲೆಯಲ್ಲಿ ಕೆರೆಹಳ್ಳಿ ವಿರುದ್ಧ ಸಿಸಿಬಿ ಪೊಲೀಸರು ಗೂಂಡಾ ಕಾಯ್ದೆಯಡಿ ಕೇಸು ದಾಖಲಿಸಿದ್ದರು. ಆದರೆ ಇದೀಗ ಬಂಧನವಾದ ಕೆಲವೇ ದಿನಗಳಲ್ಲಿ ಆತ ಜೈಲಿನಿಂದ ಹೊರಗೆ ಬಂದಿದ್ದಾನೆ.

 

ಇದನ್ನು ಓದಿ: ಸಿಲ್ಚಾರ್‌ನ NITಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ವಿದ್ಯಾರ್ಥಿಗಳಿಂದ ಪ್ರತಿಭಟನೆ, ಲಾಠೀ ಚಾರ್ಜ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...