Homeಕರ್ನಾಟಕಪುನೀತ್‌ ನಿಧನ: ಅರ್ಧಕ್ಕೆ ನಿಂತು ಹೋಯಿತು ಸಾಲು ಸಾಲು ಸಿನಿಮಾ

ಪುನೀತ್‌ ನಿಧನ: ಅರ್ಧಕ್ಕೆ ನಿಂತು ಹೋಯಿತು ಸಾಲು ಸಾಲು ಸಿನಿಮಾ

- Advertisement -
- Advertisement -

ಕನ್ನಡದ ಖ್ಯಾತ ನಟ ಪುನೀತ್‌ ರಾಜ್‌ಕುಮಾರ್‌ ಅವರ ಅಕಾಲಿಕ ನಿಧನಕ್ಕೆ ದೇಶದಾದ್ಯಂತ ಸಂತಾಪ ವ್ಯಕ್ತವಾಗಿದೆ. ಅವರು ಶುಕ್ರವಾರದಂದು ಜಿಮ್‌ನಲ್ಲಿ ವರ್ಕೌಟ್‌ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದರು. ಕನ್ನಡ ಸಿನಿಮಾ ರಂಗದಲ್ಲಿ ಫಿಟೆಸ್ಟ್ ನಟರಾಗಿದ್ದ ಪುನೀತ್‌ ಅವರು ಮುಂದಿನ ದಿನಗಳಲ್ಲಿ ಸಾಲು ಸಾಲು ಸಿನಿಮಾಗಳ ಕೆಲಸದಲ್ಲಿ ಬ್ಯುಸಿ ಆಗಿದ್ದರು. ಆದರೆ ಅವೆಲ್ಲವೂ ಈಗ ಅರ್ಧಕ್ಕೆ ಉಳಿದುಹೋಗಿವೆ.

ಪುನೀತ್ ಪ್ರಸ್ತುತ ಜೇಮ್ಸ್ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದರು. ಈ ಸಿನಿಮಾವನ್ನು ನಿರ್ದೇಶಕ ಚೇತನ್ ಕುಮಾರ್ ನಿರ್ದೇಶಿಸುತ್ತಿದ್ದರು. ಇದು ಸಂಪೂರ್ಣ ಆಕ್ಷನ್‌ ಎಂಟರ್‌ಟೈನರ್ ಸಿನಿಮಾ ಆಗಿದ್ದು, ಪುನೀತ್‌ ಈ ಸಿನಿಮಾದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ. ಜೇಮ್ಸ್ ಚಿತ್ರದಲ್ಲಿ ದೊಡ್ಡ ತಾರಾಬಳಗವೇ ಇದ್ದು, ಪ್ರಿಯಾ ಆನಂದ್ ಅವರ ನಾಯಕಿಯಾಗಿ ನಟಿಸಿದ್ದಾರೆ.

ಇದನ್ನೂ ಓದಿ: ಕಂಠೀರವ ಸ್ಟುಡಿಯೊದಲ್ಲಿ ಪುನೀತ್‌ ರಾಜ್‌ಕುಮಾರ್‌ ಅಂತ್ಯ ಸಂಸ್ಕಾರ; ಬಿಗಿ ಬಂದೋಬಸ್ತ್‌‌

ಪುನೀತ್‌‌ ಅವರ ಮುಂದಿನ ಚಿತ್ರ ದ್ವಿತ್ವ ಸಿನಿಮಾ ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ಸೆಟ್ಟೇರಲಿತ್ತು. ಈ ಸಿನಿಮಾವನ್ನು ಹೊಂಬಾಳೆ ಫಿಲ್ಮ್ಸ್‌ನೊಂದಿಗಿನ ಚಿತ್ರೀಕರಿಸಲಾಗುತ್ತಿತ್ತು.

ಅಲ್ಲದೆ, ಪುನೀತ್ ಅವರು ರಾಜಕುಮಾರ ಮತ್ತು ಯುವರತ್ನದಲ್ಲಿ ಕೆಲಸ ಮಾಡಿದ ಸಂತೋಷ್ ಆನಂದ್‌ ರಾಮ್‌ ಅವರೊಂದಿಗೆ ಮತ್ತೊಂದು ಸಿನಿಮಾ ಮಾಡಲು ನಿರ್ಧರಿಸಿದ್ದರು.

ಇಷ್ಟೇ ಅಲ್ಲದೆ ಫೈಲ್ವಾನ್ ನಿರ್ದೇಶಕ ಕೃಷ್ಣ ಅವರು ಪುನೀತ್‌ಗಾಗಿ ಒಂದು ಸಿನಿಮಾ ಘೋಷಿಸಿದ್ದು, ಅದರಲ್ಲಿ ಪುನೀತ್‌ ‘ರಾ’ ಏಜೆಂಟ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ

ಜೊತೆಗೆ ದಿನಕರ್‌ ತೂಗುದೀಪ ನಿರ್ದೇಶನದ ಜಯಣ್ಣ ಬ್ಯಾನರ್‌ ಅಡಿಯಲ್ಲಿ ಮತ್ತೊಂದು ಸಿನಿಮಾ ಘೋಷಣೆಯಾಗಿತ್ತು. ಅಲ್ಲದೆ ಪೃಥ್ವಿ ನಿರ್ದೇಶಕ ಜೇಕಬ್ ವರ್ಗೀಸ್ ಜೊತೆ ಸಿನಿಮಾ ಮಾಡುವುದಾಗಿ ಪುನೀತ್ ಹೇಳಿಕೊಂಡಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ಇಷ್ಟೇ ಅಲ್ಲದೆ, ಪುನೀತ್‌ ರಾಜ್‌ಕುಮಾರ್‌ ಅವರ ಪಿಆರ್‌ಕೆ ಪ್ರೊಡಕ್ಷನ್‌ ಅಡಿಯಲ್ಲಿ ಮೂರು ಚಿತ್ರಗಳು ಬಿಡುಗಡೆಗೆ ಸಿದ್ದವಾಗಿತ್ತು.

ಅವರ ಅಂತ್ಯಕ್ರಿಯೆ ಭಾನುವಾರ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನಡೆಲಿದೆ ಎಂದು ಸರ್ಕಾರ ತಿಳಿಸಿದ್ದು, ಪುನೀತ್ ಅವರ ಗೌರವಾರ್ಥ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ಕೊರೊನ ಮಾರ್ಗಸೂಚಿ ಅನುಸರಿಸಿ ನೆರೆವೇರಿಸಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ

ಆದರೆ ನಿರ್ದೇಶಕ ರಾಕ್‌ಲೈನ್ ವೆಂಕಟೇಶ್‌ ಇಂದು ಸಂಜೆ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಚಿತ್ರರಂಗದ ’ಯುವರತ್ನ’ ಪುನೀತ್ ರಾಜ್‌ಕುಮಾರ್‌ ಅವರ ಅಪರೂಪದ ಚಿತ್ರಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

0
ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯಪತ್ರ'ದ ಕುರಿತು ಪ್ರಧಾನಿ ಮೋದಿ ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದು, ಈ ಹಿನ್ನೆಲೆ ಪ್ರಣಾಳಿಕೆಯ ಕುರಿತು ವಿವರಿಸಲು ಸಮಯ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಖರ್ಗೆ...