Homeಮುಖಪುಟಶಿಕ್ಷೆಯಿಂದ ಸಂಸದರ ಸ್ಥಾನ ತನ್ನಿಂದತಾನೇ ಅನರ್ಹ: ತೀರ್ಪು ನೀಡುವಾಗ ನ್ಯಾಯಾಲಯಗಳು ಎಚ್ಚರವಹಿಸಬೇಕು ಎಂದ ಸುಪ್ರೀಂ

ಶಿಕ್ಷೆಯಿಂದ ಸಂಸದರ ಸ್ಥಾನ ತನ್ನಿಂದತಾನೇ ಅನರ್ಹ: ತೀರ್ಪು ನೀಡುವಾಗ ನ್ಯಾಯಾಲಯಗಳು ಎಚ್ಚರವಹಿಸಬೇಕು ಎಂದ ಸುಪ್ರೀಂ

- Advertisement -
- Advertisement -

ಪ್ರಕರಣವೊಂದರಲ್ಲಿ ಜನಪ್ರತಿನಿಧಿಗಳಿಗೆ ಶಿಕ್ಷೆ ನೀಡಿದ ನಂತರ ಸಂಸತ್ತಿನ ಸದಸ್ಯರು ತನ್ನಿಂದತಾನೇ ಅನರ್ಹಗೊಳ್ಳುವುದು “ಅತ್ಯಂತ ಕಠಿಣ” ಕ್ರಮವಾಗಿದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಮೌಖಿಕವಾಗಿ ಹೇಳಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಕೊಲೆ ಪ್ರಕರಣದಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಮೊಹಮ್ಮದ್ ಫೈಜಲ್ ಅವರ ಶಿಕ್ಷೆಯನ್ನು ಕೇರಳ ಹೈಕೋರ್ಟ್ ಜನವರಿ 25ರಂದು ಅಮಾನತ್ತುಗೊಳಿಸಿತ್ತು. ಈ ಆದೇಶದ ವಿರುದ್ಧ ಲಕ್ಷದ್ವೀಪ ಆಡಳಿತವು ಸುಪ್ರೀಂ ಕೋರ್ಟ್‌ಗೆ ಮೇಲ್ಮನ ಸಲ್ಲಿಸಿತ್ತು. ಇಂದು ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರ ಪೀಠವು ಈ ಹೇಳಿಕೆಯನ್ನು ನೀಡಿದೆ.

ಫೈಜಲ್‌ ಅವರು ಕ್ರಿಮಿನಲ್ ಪ್ರಕರಣದಲ್ಲಿ 10 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದರು. ಮೊಹಮ್ಮದ್ ಫೈಝಲ್ ಅವರನ್ನು ಕಳೆದ ಜನವರಿಯಲ್ಲಿ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು.

ಪ್ರಜಾಪ್ರತಿನಿಧಿ ಕಾಯಿದೆ, 1951 ರ ಅಡಿಯಲ್ಲಿ, ಶಾಸಕ/ಸಂಸದರು ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಗೆ ಜೈಲು ಶಿಕ್ಷೆಗೆ ಒಳಗಾದರೆ, ಶಿಕ್ಷೆಯ ದಿನಾಂಕದಿಂದ ಜೈಲು ಶಿಕ್ಷೆಯ ಅವಧಿ ಮುಗಿದ ಆರು ವರ್ಷಗಳವರೆಗೆ ಅನರ್ಹರಾಗುತ್ತಾರೆ. ಯಾವುದೇ ಚುನಾವಣೆಗೂ ಸ್ಫರ್ಧಿಸಲು ಸಾಧ್ಯವಾಗುವುದಿಲ್ಲ.

ಕೇರಳ ಹೈಕೋರ್ಟ್ ಆದೇಶದ ಆಧಾರದ ಮೇಲೆ ಫೈಝಲ್ ಅವರ ಸದಸ್ಯತ್ವವನ್ನು ಮರುಸ್ಥಾಪಿಸುವಂತೆ ಕೋರಿ ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ನಿಗದಿಪಡಿಸುವ ಮುನ್ನವೇ ಬುಧವಾರದಂದು ಫೈಝಲ್ ಅವರ ಅನರ್ಹತೆಯನ್ನು ಹಿಂತೆಗೆದುಕೊಳ್ಳಲಾಯಿತು.

ಇದನ್ನೂ ಓದಿ: ಪ್ರಜಾಸತ್ತಾತ್ಮಕ ತತ್ವಗಳನ್ನು ಅನ್ವಯಿಸಿ: ರಾಹುಲ್ ಅನರ್ಹತೆಗೆ ಜರ್ಮನಿ ಪ್ರತಿಕ್ರಿಯೆ

ಫೈಝಲ್ ಅವರ ಮನವಿಯ ವಿಚಾರಣೆ ನಡೆಸಿದ ಪೀಠವು, ಶಾಸಕರಿಗೆ/ಸಂಸದರಿಗೆ ಶಿಕ್ಷೆ ವಿಧಿಸುವಾಗ ನ್ಯಾಯಾಲಯಗಳು ಎಚ್ಚರಿಕೆ ವಹಿಸಬೇಕು ಎಂದು ಹೇಳಿದೆ.

ಮಾರ್ಚ್ 23ರಂದು ಗುಜರಾತ್‌ನ ನ್ಯಾಯಾಲಯವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು. ಆ ನಂತರ ರಾಹುಲ್ ಗಾಂಧಿ ಅವರು ಸಂಸತ್ತಿನಿಂದ ಅನರ್ಹಗೊಂಡಿದ್ದಾರೆ. ಇದೀಗ ದೇಶದಲ್ಲಿ ರಾಹುಲ್‌ ಗಾಂಧಿ ಅನರ್ಹತೆ ಬಗ್ಗೆ ಚರ್ಚೆಯಾಗುತ್ತಿರುವಾಗ ಈ ಅವಲೋಕನವು ಮಹತ್ವದ್ದಾಗಿದೆ.

ಗುಜರಾತ್‌ನ ನ್ಯಾಯಾಲಯದ ತೀರ್ಪಿನ ಮೇಲೆ ಮೇಲ್ಮನವಿ ಸಲ್ಲಿಸಲು ನ್ಯಾಯಾಲಯವು ಅವರಿಗೆ 30 ದಿನಗಳ ಕಾಲ ಜಾಮೀನು ನೀಡಿದ್ದರೂ, ಲೋಕಸಭೆಯ ಸೆಕ್ರೆಟರಿಯೇಟ್ ಮಾರ್ಚ್ 24 ರಂದು ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Is Supreme Court opinion is lower court should not give 2 years and more conviction punishment to MP MLAs. If such case it is better Supreme Court only handle all MP MLA cases so that final sentence is going to happen.

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...