Homeಅಂತರಾಷ್ಟ್ರೀಯಭಾರತದೊಂದಿಗೆ ಮೈತ್ರಿ ಮಾಡಿಕೊಂಡಿದ್ದಕ್ಕಾಗಿ ಶಿಕ್ಷೆ: ಭೂತಾನ್

ಭಾರತದೊಂದಿಗೆ ಮೈತ್ರಿ ಮಾಡಿಕೊಂಡಿದ್ದಕ್ಕಾಗಿ ಶಿಕ್ಷೆ: ಭೂತಾನ್

ಕಳೆದ ವಾರ, ಚೀನಾ ಸರ್ಕಾರವು ಭೂತಾನ್‌ನ “ಪೂರ್ವ ವಲಯ” ಗಳನ್ನು ಉಭಯ ದೇಶಗಳ ನಡುವಿನ ವಿವಾದಿತ ಪ್ರದೇಶಗಳ ಭಾಗವಾಗಿ ಸೇರಿಸಿಕೊಂಡಿತು.

- Advertisement -
- Advertisement -

ಭಾರತ – ಚೀನಾ ನಡುವೆ ನಡೆದ ಭೀಕರ ಗಡಿ ಚಕಮಕಿಯ ನಂತರ ಭಾರತೀಯ ಮತ್ತು ಚೀನಾದ ಸೈನಿಕರು ಲಡಾಖ್‌ನಿಂದ ಹಿಂತಿರುಗುತ್ತಿದ್ದಂತೆ ಏಷ್ಯಾದ ಎರಡು ದೈತ್ಯ ರಾಷ್ಟ್ರಗಳ ನಡುವೆ ಸಿಕ್ಕಿಕೊಂಡಂತೆ ಭಾಸವಾಗುತ್ತಿದೆ ಎಂದು ಭೂತಾನ್ ಹೇಳಿದೆ.

ಕಳೆದ ವಾರ, ಚೀನಾ ಸರ್ಕಾರವು ಭೂತಾನ್‌ನ “ಪೂರ್ವ ವಲಯ” ಗಳನ್ನು ಉಭಯ ದೇಶಗಳ ನಡುವಿನ ವಿವಾದಿತ ಪ್ರದೇಶಗಳ ಭಾಗವಾಗಿ ಸೇರಿಸಿಕೊಂಡಿತು. “ಪೂರ್ವ, ಮಧ್ಯ ಮತ್ತು ಪಶ್ಚಿಮ ಕ್ಷೇತ್ರಗಳಲ್ಲಿ ದೀರ್ಘಕಾಲದ ವಿವಾದಗಳಿವೆ” ಎಂದು ಚೀನಾದ ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಯುನೈಟೆಡ್ ನೇಷನ್ಸ್ ಡೆವಲಪ್ಮೆಂಟ್ ಪ್ರೊಗ್ರಾಂನ ಜಾಗತಿಕ ಪರಿಸರ ಸೌಲಭ್ಯದಿಂದ ದೂರದ ಪೂರ್ವ ಭೂತಾನ್ ನಲ್ಲಿರುವ ಸಕ್ಟೆಂಗ್ ವನ್ಯಜೀವಿ ಅಭಯಾರಣ್ಯಕ್ಕೆ ಧನಸಹಾಯವನ್ನು ನಿಲ್ಲಿಸುವ ಪ್ರಯತ್ನವನ್ನು ಚೀನಾ ಅನುಸರಿಸುತ್ತಿದೆ. ಯುನೈಟೆಡ್ ಸ್ಟೇಟ್ಸ್ ಮೂಲದ ಜಾಗತಿಕ ಸಂಸ್ಥೆಯು ಪರಿಸರ ಯೋಜನೆಗಳಿಗೆ ಹಣವನ್ನು ನೀಡುತ್ತದೆ. ಈಗ ಅಭಯಾರಣ್ಯವು “ವಿವಾದಿತ ಪ್ರದೇಶ” ದಲ್ಲಿದೆ ಎಂದು ಚೀನಾ ಹೇಳಿಕೊಂಡಿದೆ.

ಭೂತಾನ್‌ನ ಸುದ್ದಿ ವರದಿಗಳು ಹೇಳುವಂತೆ, ಚೀನಾ ಸರ್ಕಾರವು ಉಭಯ ದೇಶಗಳ ರಾಜತಾಂತ್ರಿಕ ವಿಷಯಗಳನ್ನು ಹಂಚಿಕೊಳ್ಳಲಾಗುವುದಿಲ್ಲ ಎಂಬ ಪ್ರತಿಭಟನಾತ್ಮಕ ಕ್ರಮ ತೆಗೆದುಕೊಳ್ಳಲಾಗಿದೆ. ಆದರೆ ಚೀನಾ ಸರ್ಕಾರ ಇದನ್ನು ನಿರಾಕರಿಸಿದೆ.

ಚೀನಾದ ಈ ಕ್ರಮವು ಭಾರತದೊಂದಿಗಿನ ದ್ವೇಷದೊಂದಿಗೆ ಸಂಬಂಧ ಹೊಂದಿರಬಹುದು ಎಂದು ಹಲವರು ಹೇಳುತ್ತಾರೆ.

“ಸಿನೊ-ಭೂತಾನ್ ಗಡಿ ವಿವಾದವು ಅಷ್ಟೇನೂ ತೀವ್ರವಾಗಿಲ್ಲ. ಭೂತಾನ್ ಭಾರತದೊಂದಿಗೆ ಮೈತ್ರಿ ಮಾಡಿಕೊಂಡಿದ್ದಕ್ಕಾಗಿ ಸೇಡು ತೀರಿಸಿಕೊಳ್ಳಲು ಚೀನಾ ಬಯಸುತ್ತಿದೆ” ಎಂದು ಭೂತಾನ್‌ನ ಒಟ್ಟು ರಾಷ್ಟ್ರೀಯ ಸಂತೋಷ ಅಧ್ಯಯನ ಕೇಂದ್ರದ ಮುಖ್ಯಸ್ಥ ಡೋರ್ಜಿ ಪೆಂಜೋರ್ “Security of Bhutan: Walking Between the Giants” ಎಂಬ ಶೀರ್ಷಿಕೆಯ ಲೇಖನದಲ್ಲಿ ಬರೆದಿದ್ದಾರೆ.

ನಮಗೆ ಚೀನಾದೊಂದಿಗೆ ಯಾವುದೇ ಸಂಬಂಧವಿಲ್ಲ. ಆದರೂ ನಾವು ಚೀನಾದೊಂದಿಗೆ ವಿವಾದಕ್ಕೆ ಸಿಲುಕುತ್ತಿದ್ದೇವೆ. ಏಕೆಂದರೆ ಭಾರತವು ಚೀನಾದೊಂದಿಗೆ ವಿವಾದಗಳನ್ನು ಎದುರಿಸುತ್ತಿದೆ. ಚೀನಾ ಮತ್ತು ಭಾರತದ ನಡುವಿನ ಸಂಬಂಧ ಸುಧಾರಿಸಿದರೆ ನಮಗೆ ತೊಂದರೆಯಿಲ್ಲ ಎಂದು ಅವರು ಹೇಳಿದರು.

ಸಾರ್ವಜನಿಕ ವಲಯದಲ್ಲಿ ವಿಶ್ವಾಸಾರ್ಹ ಮಾಹಿತಿಯ ಕೊರತೆಯಿದೆ. ಸ್ಥಳೀಯ ಮಾಧ್ಯಮಗಳು ಇಲ್ಲಿಯವರೆಗಿನ ಬೆಳವಣಿಗೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿವೆ. ಭೂತಾನಿಯರಲ್ಲಿ ಭಾರತೀಯ ಮಾಧ್ಯಮಗಳ ಮೇಲೆ ನಂಬಿಕೆ ಬಹಳ ಕಡಿಮೆ ಎಂದು ಪತ್ರಕರ್ತರು ಹೇಳಿದ್ದಾರೆ.

ಐತಿಹಾಸಿಕವಾಗಿ ನಡೆದಂತೆ, ಭೂತಾನ್ ಸಹಾನುಭೂತಿ ಭಾರತದೊಂದಿಗೆ ಮುಂದುವರೆದಿದೆ ಎಂದು ಡಕಾಲ್ ಹೇಳಿದರು. “ಒಂದೇ ಸಮಸ್ಯೆ ಎಂದರೆ ನೇಪಾಳದಂತೆಯೇ, ಭಾರತೀಯ ಮಾಧ್ಯಮಗಳು ಭೂತಾನ್ ಬಗ್ಗೆ ತಪ್ಪು ಮಾಹಿತಿಯನ್ನು ಹರಡುತ್ತವೆ. ಇದು ಇಲ್ಲಿಯ ಬಹಳಷ್ಟು ಜನರನ್ನು ಆತಂಕಕ್ಕೆ ತಳ್ಳಿದೆ ಎಂದು ಅವರು ಹೇಳಿದರು.


ಇದನ್ನೂ ಓದಿ: ಭಾರತ-ಚೀನಾ ಗಡಿ ಬಿಕ್ಕಟ್ಟಿಗೆ ಕಾರಣಗಳೇನು? ಈಗಲಾದರೂ ಮೌನ ಮುರಿಯುವರೆ ಮೋದಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...