Homeಮುಖಪುಟಪಂಜಾಬ್‌ | 14,000 ಎಕರೆ ವಕ್ಫ್‌ ಭೂಮಿ ಅಕ್ರಮ ಅತಿಕ್ರಮಣ

ಪಂಜಾಬ್‌ | 14,000 ಎಕರೆ ವಕ್ಫ್‌ ಭೂಮಿ ಅಕ್ರಮ ಅತಿಕ್ರಮಣ

- Advertisement -
- Advertisement -

ಪಂಜಾಬ್‌ ವಕ್ಫ್ ಮಂಡಳಿಯು ರಾಜ್ಯಾದ್ಯಂತ ಒಟ್ಟು 36,625.83 ಎಕರೆ ಭೂಮಿಯನ್ನು ಹೊಂದಿದೆ, ಆದರೆ ಈ ಭೂಮಿಯಲ್ಲಿ 14,000 ಎಕರೆಗೂ ಹೆಚ್ಚು ಭೂಮಿ ಪ್ರಸ್ತುತ ಅಕ್ರಮ ಒತ್ತುವರಿಯಾಗಿದೆ ಎಂದು TNIE ವರದಿ ಮಾಡಿದೆ. ಈ ಅತಿಕ್ರಮಣಗಳ ಕುರಿತು ನಡೆಯುತ್ತಿರುವ ಮೊಕದ್ದಮೆಗಳನ್ನು ಸುಪ್ರೀಂ ಕೋರ್ಟ್ ಸೇರಿದಂತೆ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಅದು ಹೇಳಿದೆ.

ಮಂಡಳಿಯ ಅಂಕಿ ಅಂಶಗಳ ಪ್ರಕಾರ ಪಂಜಾಬ್‌ ವಕ್ಫ್ ಮಂಡಳಿಯು ಒಟ್ಟು 75,965 ನೋಂದಾಯಿತ ಆಸ್ತಿಗಳನ್ನು ಮತ್ತು 25,403 ನೋಂದಾಯಿತ ವಕ್ಫ್ ಎಸ್ಟೇಟ್‌ಗಳನ್ನು ಹೊಂದಿದೆ ಎಂದು ಹೇಳುತ್ತದೆ. ಮಂಡಳಿಯು ರಾಜ್ಯಾದ್ಯಂತ 36,625.83 ಎಕರೆ ಭೂಮಿಯನ್ನು ಹೊಂದಿದ್ದು, ಸರಿಸುಮಾರು 14,085.004 ಎಕರೆ ಅಥವಾ 38.46% ರಷ್ಟು ಪ್ರಸ್ತುತ ಅಕ್ರಮ ಒತ್ತುವರಿಯಾಗಿದೆ. ಉಳಿದ 61.45% ಭೂಮಿಯನ್ನು ಅದರ ಉದ್ದೇಶಿತ ಉದ್ದೇಶಗಳಿಗಾಗಿ ಬಳಸಲಾಗುತ್ತಿದೆ ಎಂದು ವರದಿ ಉಲ್ಲೇಖಿಸಿದೆ.

ಸುಪ್ರೀಂ ಕೋರ್ಟ್‌ನಲ್ಲಿ 18 ಪ್ರಕರಣಗಳು, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ 462 ಪ್ರಕರಣಗಳು, ವಿವಿಧ ನ್ಯಾಯಾಲಯಗಳಲ್ಲಿ ಘೋಷಣೆ, ಸ್ವಾಧೀನ ಅಥವಾ ಹೊರಹಾಕುವಿಕೆಗೆ ಸಂಬಂಧಿಸಿದಂತೆ 1,157 ಸಿವಿಲ್ ಮೊಕದ್ದಮೆಗಳು ಐದು ವಕ್ಫ್ ನ್ಯಾಯಮಂಡಳಿಗಳ ಮುಂದೆ ಬಾಕಿ ಉಳಿದಿವೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ವಕ್ಫ್ ಮಂಡಳಿಯ ಕಾರ್ಯನಿರ್ವಾಹಕ ಅಧಿಕಾರಿ ಲತೀಫ್ ಅಹ್ಮದ್ ಥಿಂಡ್, “ಪಂಜಾಬ್‌ನಲ್ಲಿ ಒಟ್ಟು ವಕ್ಫ್ ಮಂಡಳಿಯ ಆಸ್ತಿಗಳ ಸಂಖ್ಯೆ 75,965. ಪ್ರಮುಖ ಸಮಸ್ಯೆಯೆಂದರೆ ರಾಜ್ಯಾದ್ಯಂತ ಅಕ್ರಮ ಅತಿಕ್ರಮಣಗಳಾಗಿವೆ. ಗರಿಷ್ಠ ಅತಿಕ್ರಮಣಗಳು ಬಟಿಂಡಾದಲ್ಲಿದ್ದು, ನಂತರ ಲುಧಿಯಾನ, ಅಮೃತಸರ, ಜಲಂಧರ್ ಮತ್ತು ಪಟಿಯಾಲದಲ್ಲಿವೆ. ಅನೇಕ ಪ್ರಕರಣಗಳಲ್ಲಿ, ಅಕ್ರಮ ಅತಿಕ್ರಮಣಕಾರರು 1947 ರಿಂದ ಈ ಆಸ್ತಿಗಳನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಇತರ ಹಲವು ಪ್ರಕರಣಗಳಲ್ಲಿ ಮಂಡಳಿಯೊಂದಿಗೆ ಮಾಡಲಾದ ಗುತ್ತಿಗೆ ಮುಗಿದಿದ್ದರೂ, ಅವರು ಆಸ್ತಿಯನ್ನು ತೆರವು ಮಾಡಿಲ್ಲ ಅಥವಾ ಅದರನ್ನು ವಾಪಾಸು ಮಾಡಿಲ್ಲ” ಎಂದು ಹೇಳಿದ್ದಾರೆ.

“ಪ್ರಭಾವಿ ವ್ಯಕ್ತಿಗಳು ಸೇರಿದಂತೆ ಸಾಮಾನ್ಯ ವ್ಯಕ್ತಿಗಳು ಕೂಡಾ ವಕ್ಫ್ ಮಂಡಳಿಯ ಆಸ್ತಿಗಳನ್ನು ಅತಿಕ್ರಮಿಸಿದ್ದಾರೆ. ಪಟಿಯಾಲ ಬಳಿಯ ಸಮನಾದಲ್ಲಿ ಅನೇಕ ಗುಡಿಸಲುಗಳಿದ್ದು, ಆ ಜನರು ಖಾಲಿ ಮಾಡಲು ನಿರಾಕರಿಸುತ್ತಿದ್ದಾರೆ. ಇದರಲ್ಲಿ ಇತರ ಧರ್ಮದ ಜನರು ಕೂಡಾ ಅತಿಕ್ರಮಣ ಮಾಡಿದ್ದಾರೆ. ಜೊತೆಗೆ ಮುಸ್ಲಿಮರು ಕೂಡಾ ಕೆಲವು ಸಂದರ್ಭಗಳಲ್ಲಿ ಮಂಡಳಿಯ ಆಸ್ತಿಗಳನ್ನು ಅಕ್ರಮವಾಗಿ ಅತಿಕ್ರಮಣ ಮಾಡಿದ್ದಾರೆ,” ಎಂದು ಅವರು ಹೇಳಿದ್ದಾರೆ.

“ನಾವು ಕಾನೂನಿನ ಸರಿಯಾದ ಕಾರ್ಯವಿಧಾನವನ್ನು ಅನುಸರಿಸುತ್ತೇವೆ. ಪ್ರಕರಣಗಳು ಸುಪ್ರೀಂ ಕೋರ್ಟ್ ಸೇರಿದಂತೆ ವಿವಿಧ ನ್ಯಾಯಾಲಯಗಳಲ್ಲಿ ನಡೆಯುತ್ತಿವೆ. ತಿದ್ದುಪಡಿ ಬರುವುದರಿಂದ ಈ ಪ್ರಕ್ರಿಯೆಯು ಮತ್ತಷ್ಟು ಕಷ್ಟಕರವಾಗುತ್ತದೆ.” ಅವರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹೈದರಾಬಾದ್ ವಿವಿ ‘ಕಾಂಚ ಗಚಿಬೌಲಿ’ ಅರಣ್ಯ ನಾಶ ವಿವಾದ: ಮರಗಳ ತೆರವಿಗೆ ಸುಪ್ರೀಂ ಕೋರ್ಟ್ ತಡೆ

ಹೈದರಾಬಾದ್ ವಿವಿ ‘ಕಾಂಚ ಗಚಿಬೌಲಿ’ ಅರಣ್ಯ ನಾಶ ವಿವಾದ: ಮರಗಳ ತೆರವಿಗೆ ಸುಪ್ರೀಂ ಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...