Homeಮುಖಪುಟಪಂಜಾಬ್‌ ಎಎಪಿ ವಿಭಜನೆಯಾಗಲಿದೆ, 30 ಶಾಸಕರು ಸಂಪರ್ಕದಲ್ಲಿದ್ದಾರೆ : ಕಾಂಗ್ರೆಸ್

ಪಂಜಾಬ್‌ ಎಎಪಿ ವಿಭಜನೆಯಾಗಲಿದೆ, 30 ಶಾಸಕರು ಸಂಪರ್ಕದಲ್ಲಿದ್ದಾರೆ : ಕಾಂಗ್ರೆಸ್

- Advertisement -
- Advertisement -

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ, ಎಎಪಿ ಪಂಜಾಬ್ ಘಟಕ ಆಂತರಿಕ ಕಲಹ ಮತ್ತು ಸಂಭಾವ್ಯ ವಿಭಜನೆ ಎದುರಿಸುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ನಾಯಕ ಹಾಗೂ ಪಂಜಾಬ್ ವಿಧಾನಸಭೆಯ ಪ್ರತಿಪಕ್ಷ ನಾಯಕ ಪ್ರತಾಪ್ ಸಿಂಗ್ ಬಾಜ್ವಾ ಭಾನುವಾರ (ಫೆ.9) ಹೇಳಿದ್ದಾರೆ.

ಕಳೆದ ಒಂದು ವರ್ಷದಿಂದ 30ಕ್ಕೂ ಹೆಚ್ಚು ಎಎಪಿ ಶಾಸಕರು ನಮ್ಮ ಪಕ್ಷದೊಂದಿಗೆ ಸಂಪರ್ಕದಲ್ಲಿದ್ದು, ಪಕ್ಷ ಬದಲಾಯಿಸಲು ಸಿದ್ಧರಾಗಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಹೊಸ ಬಾಂಬ್ ಸಿಡಿಸಿದ್ದಾರೆ.

“ಎಎಪಿಯ ದೆಹಲಿ ನಾಯಕತ್ವ ಭಗವಂತ್ ಮಾನ್ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಬಹುದು. ವಿಶೇಷವಾಗಿ ಪಂಜಾಬ್‌ನ ಎಲ್ಲಾ ಎಎಪಿ ಶಾಸಕರು ಮತ್ತು ಕಾರ್ಯಕರ್ತರು ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಜೊತೆ ಇದ್ದಾರೆ. ಹಾಗಾಗಿ, ಎಎಪಿಯಲ್ಲಿ ನಾಯಕತ್ವದ ಕಲಹ ಸನ್ನಿಹಿತವಾಗಿದೆ. ಲುಧಿಯಾನ (ಪಶ್ಚಿಮ) ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಲಿದೆ. ರಾಜ್ಯ ವಿಧಾನಸಭೆಗೆ ಸೇರಲು ಕೇಜ್ರಿವಾಲ್ ಈ ಕ್ಷೇತ್ರದ ಮೇಲೆ ಕಣ್ಣಿಟ್ಟಿರಬಹುದು” ಎಂದು ಪ್ರತಾಪ್ ಸಿಂಗ್ ಬಜ್ವಾ ಹೇಳಿದ್ದಾರೆ.

“2027ರ ಪಂಜಾಬ್‌ ವಿಧಾನಸಭೆ ಚುನಾವಣೆಗೆ ಎಎಪಿಯನ್ನು ಪ್ರಮುಖ ಪ್ರತಿಸ್ಪರ್ಧಿ ಎಂದು ಪರಿಗಣಿಸಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಪಂಜಾಬ್‌ನಲ್ಲಿ ಎಎಪಿ ವಿಭಜನೆಯಾಗಬೇಕೆಂದು ಬಯಸುತ್ತಿವೆ. ಕೇಜ್ರಿವಾಲ್ ಲುಧಿಯಾನ (ಪಶ್ಚಿಮ) ದಿಂದ ಸ್ಪರ್ಧಿಸಲು ನಿರ್ಧರಿಸಿದರೆ, ಅದು ಪಕ್ಷಕ್ಕೆ ಹಾನಿಕಾರಕವಾಗಬಹುದು ಮತ್ತು ಅವರ ರಾಷ್ಟ್ರೀಯ ಮಹತ್ವಾಕಾಂಕ್ಷೆಗಳ ಅಂತ್ಯವನ್ನು ಸೂಚಿಸಬಹುದು” ಎಂದು ಪ್ರಮುಖ ರಾಜಕೀಯ ವಿಶ್ಲೇಷಕ ಕುಲದೀಪ್ ಸಿಂಗ್ ವಿವರಿಸಿದ್ದಾರೆ.

ಕಾಂಗ್ರೆಸ್ ನಾಯಕನ ಹೇಳಿಕೆಯನ್ನು ತಳ್ಳಿ ಹಾಕಿರುವ ಪಂಜಾಬ್ ಎಎಪಿ ವಕ್ತಾರ ನೀಲ್ ಗರ್ಗ್, “ಕೇಜ್ರಿವಾಲ್ ನಮ್ಮ ರಾಷ್ಟ್ರೀಯ ಸಂಚಾಲಕರು ಮತ್ತು ಮಾನ್ ಪಂಜಾಬ್ ಸಿಎಂ. ಕಾಂಗ್ರೆಸ್‌ನ ಗ್ರಾಫ್ ವೇಗವಾಗಿ ಕುಸಿಯುತ್ತಿದೆ. ದೆಹಲಿಯಲ್ಲಿ, ಅದು ಸತತ ಮೂರನೇ ಬಾರಿಗೆ ಶೂನ್ಯ ಸ್ಥಾನ ಗಳಿಸಿದೆ. 2022ರ ಪಂಜಾಬ್ ಚುನಾವಣೆಯಲ್ಲಿ, ಅದು ಕೇವಲ 18 ಸ್ಥಾನಗಳನ್ನು ಮಾತ್ರ ಗೆದ್ದಿತ್ತು. 2027ರ ಚುನಾವಣೆಯಲ್ಲಿ ಈ ಸಂಖ್ಯೆ ಮತ್ತಷ್ಟು ಕಡಿಮೆಯಾಗಲಿದೆ. ಕಾಂಗ್ರೆಸ್‌ನ ಕಾರ್ಯಕ್ಷಮತೆ ಹೇಗಿದೆ ಎಂಬುವುದಕ್ಕೆ ರಾಜ್ಯದಲ್ಲಿ ಇತ್ತೀಚೆಗೆ ನಡೆದ ಪುರಸಭೆ ಚುನಾವಣೆಗಳನ್ನು ನೋಡಿ” ಎಂದಿದ್ದಾರೆ.

“ದೆಹಲಿಯಲ್ಲಿ ಕಾಂಗ್ರೆಸ್ ಒಂದೇ ಒಂದು ಸ್ಥಾನ ಗೆಲ್ಲದಿರುವುದರ ಬಗ್ಗೆ ಬಾಜ್ವಾ ಕಳವಳ ವ್ಯಕ್ತಪಡಿಸಬೇಕು, ಹೊರತು ಪಂಜಾಬ್‌ನ ಬಗ್ಗೆ ಅಲ್ಲ” ಎಂದು ಗರ್ಗ್ ಹೇಳಿದ್ದಾರೆ.

Biren Singh resigns | ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...