Homeಮುಖಪುಟಪಂಜಾಬ್‌ | ಎಎಪಿ ನಾಯಕನ ಮೇಲೆ ಗುಂಡಿನ ದಾಳಿ; ಅಕಾಲಿದಳದ ಮೇಲೆ ಆರೋಪ

ಪಂಜಾಬ್‌ | ಎಎಪಿ ನಾಯಕನ ಮೇಲೆ ಗುಂಡಿನ ದಾಳಿ; ಅಕಾಲಿದಳದ ಮೇಲೆ ಆರೋಪ

- Advertisement -
- Advertisement -

ಪಂಜಾಬ್‌ನ ಫಜಿಲ್ಕಾ ಜಿಲ್ಲೆಯ ಜಲಾಲಾಬಾದ್‌ನಲ್ಲಿ ಶಿರೋಮಣಿ ಅಕಾಲಿದಳ (ಎಸ್‌ಎಡಿ) ಸದಸ್ಯರೊಂದಿಗೆ ಶನಿವಾರ ನಡೆದ ಘರ್ಷಣೆಯ ಸಂದರ್ಭದಲ್ಲಿ ಗುಂಡಿನ ದಾಳಿಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಆಪ್ ಅಭ್ಯರ್ಥಿಯಾಗಿರುವ ಮನದೀಪ್ ಸಿಂಗ್ ಬ್ರಾರ್ ಅವರ ಎದೆಗೆ ಗುಂಡು ತಗುಲಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.ಪಂಜಾಬ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಚುನಾವಣೆ ಸಂಬಂಧ ಸಭೆ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಲೂಧಿಯಾನ ಆಸ್ಪತ್ರೆಯಲ್ಲಿ ಆಪ್ ನಾಯಕನನ್ನು ಭೇಟಿ ಮಾಡಿದ ಪಂಜಾಬ್‌ನ ಪಂಚಾಯತ್ ರಾಜ್ ಸಚಿವ ತರುಣ್‌ಪ್ರೀತ್ ಸಿಂಗ್ ಸೌಂಧ್, “ಮನದೀಪ್ ಬ್ರಾರ್ ಅವರು ಸರಪಂಚ್ ಚುನಾವಣೆಗೆ ಸ್ಪರ್ಧಿಸಿದ್ದರು, ಅವರು ನಾಮಪತ್ರ ಸಲ್ಲಿಸಲು ಬಿಡಿಪಿಒ ಕಚೇರಿಗೆ ಹೋದಾಗ, ಅಕಾಲಿದಳಕ್ಕೆ ಸೇರಿದ ವ್ಯಕ್ತಿ ಅವರ ಪರವಾನಿಗೆ ಹೊಂದಿದ ಬಂದೂಕಿನಿಂದ ಅವರಿಗೆ ಶೂಟ್ ಮಾಡಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ ಮತ್ತು ಇದು ಅತ್ಯಂತ ನಾಚಿಕೆಗೇಡಿನ ಘಟನೆಯಾಗಿದೆ” ಎಂದು ಹೇಳಿದ್ದಾರೆ.ಪಂಜಾಬ್‌

ಇದನ್ನೂಓದಿ: ಮಣಿಪುರ | ಉಖ್ರುಲ್ ಹಿಂಸಾಚಾರದ ವೇಳೆ ಲೂಟಿಯಾದ 80% ಬಂದೂಕುಗಳು ಮತ್ತೆ ಪೊಲೀಸರ ವಶಕ್ಕೆ

ಪಂಜಾಬ್‌ನಲ್ಲಿ ಅಕಾಲಿದಳ ಮತ್ತು ಕಾಂಗ್ರೆಸ್ ಶಾಂತಿಯ ವಾತಾವರಣವನ್ನು ಬಯಸುವುದಿಲ್ಲ ಮತ್ತು ಪಂಚಾಯತ್ ಚುನಾವಣೆಯಲ್ಲಿ ಎಎಪಿಯನ್ನು ಬೆಂಬಲಿಸುವ ಯಾರನ್ನಾದರೂ ಹೆದರಿಸುತ್ತಿವೆ ಎಂದು ಸಚಿವರು ಆರೋಪಿಸಿದ್ದಾರೆ. ಗುಂಡಿನ ದಾಳಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ಆಪ್‌ನ ಜಲಾಲಾಬಾದ್ ಶಾಸಕ ಜಗದೀಪ್ ಕಾಂಬೋಜ್ ಗೋಲ್ಡಿ, ಆರೋಪಿಗಳು ಪಂಚಾಯತ್ ಭೂಮಿಯನ್ನು ವಶಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದು, ಇದನ್ನು ವಿರೋಧಿಸಿದ ಆಪ್ ಅಭ್ಯರ್ಥಿಯ ಮೇಲೆ ಗುಂಡಿನ ದಾಳಿ ಮಾಡಲಾಗಿದೆ ಎಂದು ಹೇಳಿದ್ದಾರೆ.

“ವಿರೋಧಿ ಪಕ್ಷದ ವ್ಯಕ್ತಿಯೊಬ್ಬರು ಪಂಚಾಯತ್ ಭೂಮಿಯನ್ನು ಅಕ್ರಮವಾಗಿ ವಶಪಡಿಸಿಕೊಂಡಿದ್ದಾರೆ. ಈ ವಿಷಯವು ಪಂಚಾಯತ್‌ನಲ್ಲಿ ಆಕ್ಷೇಪಿಸಲ್ಪಟ್ಟಿದ್ದು, ಹೈಕೋರ್ಟ್‌ನಲ್ಲಿ ವಿಚಾರಣೆಯಲ್ಲಿದೆ. ಇದನ್ನು ಉಲ್ಲೇಖಿಸಿ ನಮ್ಮ ನಾಯಕರು ಅಕಾಲಿದಳದ ಅಭ್ಯರ್ಥಿಯ ನಾಮಪತ್ರಕ್ಕೆ ಆಕ್ಷೇಪಣೆಯನ್ನು ಎತ್ತಿದರು. ಅವರು ಅಲ್ಲಿಂದ ಹೊರಬಂದಾಗ ‘ನಮ್ಮ ನಾಮಪತ್ರವನ್ನು ಪ್ರಶ್ನಿಸಲು ನೀವು ಯಾರು?’ ಪ್ರಶ್ನಿಸಿ, ಅವರ ಮೇಲೆ ಗುಂಡು ಹಾರಿಸಿದರು, ”ಎಂದು ಶಾಸಕ ಹೇಳಿದ್ದಾರೆ.

ಘಟನೆಯ ನಂತರ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿತ್ತು. ಪಂಜಾಬ್‌ನಾದ್ಯಂತ 13,229 ಗ್ರಾಮ ಪಂಚಾಯಿತಿಗಳಿಗೆ ಅಕ್ಟೋಬರ್ 15 ರಂದು ಚುನಾವಣೆ ನಡೆಯಲಿದೆ.

ವಿಡಿಯೊ ನೋಡಿ: ‘ಭೂಮಿ- ವಸತಿ ಹಕ್ಕು ವಂಚಿತರ ಪ್ರಾತಿನಿಧ್ಯ ಸಮಾವೇಶ’ದ ಕುರಿತು ಸಂಘಟಕರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...