Homeಕರ್ನಾಟಕಪಂಜಾಬ್‌: ಹಾಲಿ, ಮಾಜಿ ಸಿಎಂಗಳಿಗೆಲ್ಲ ಸೋಲಿನ ರುಚಿ

ಪಂಜಾಬ್‌: ಹಾಲಿ, ಮಾಜಿ ಸಿಎಂಗಳಿಗೆಲ್ಲ ಸೋಲಿನ ರುಚಿ

ಐದು ಬಾರಿ ಮುಖ್ಯಮಂತ್ರಿಯಾಗಿದ್ದ ಪ್ರಕಾಶ್ ಸಿಂಗ್ ಬಾದಲ್ ಸೇರಿದಂತೆ ಹಾಲಿ ಮುಖ್ಯಮಂತ್ರಿ ಚರಂಜಿತ್‌ ಸಿಂಗ್ ಚೆನ್ನಿ, ಹಿಂದಿನ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್ ಸೋಲು ಕಂಡಿದ್ದಾರೆ.

- Advertisement -
- Advertisement -

ಪಂಜಾಬ್‌ ವಿಧಾನಸಭೆಯಲ್ಲಿ ಸ್ಪರ್ಧಿಸಿದ್ದ ಹಾಲಿ ಹಾಗೂ ಮಾಜಿ ಸಿಎಂಗಳಿಗೆಲ್ಲ ಸೋಲಾಗಿದೆ. ಹಾಲಿ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ, ಮಾಜಿ ಸಿಎಂಗಳಾದ ಪ್ರಕಾಶ್‌ ಸಿಂಗ್ ಬಾದಲ್‌ ಹಾಗೂ ಅಮರಿಂದರ್‌ ಸಿಂಗ್ ಸಿಧು ಸೋಲು ಕಂಡಿದ್ದಾರೆ.

ಐದು ಬಾರಿ ಮುಖ್ಯಮಂತ್ರಿಯಾಗಿದ್ದ ಪ್ರಕಾಶ್ ಸಿಂಗ್ ಬಾದಲ್ ಅವರು ತಮ್ಮ ತವರು ಕ್ಷೇತ್ರ ಲಂಬಿಯಿಂದ ಸ್ಪರ್ಧಿಸಿದ್ದರು. ಆದರೆ ಎಎಪಿ ಅಭ್ಯರ್ಥಿ ಗುರ್ಮೀತ್ ಸಿಂಗ್ ಖುಡಿಯಾನ್ ವಿರುದ್ಧ ಸೋಲು ಕಂಡಿದ್ದಾರೆ. ಲಂಬಿಯನ್ನು ಶಿರೋಮಣಿ ಅಕಾಲಿ ದಳದ ಭದ್ರಕೋಟೆಯೆಂದು ಪರಿಗಣಿಸಲಾಗಿದೆ. ಎಸ್‌ಎಡಿ ವರಿಷ್ಠರಾದ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರು 1997ರಿಂದ ಸತತವಾಗಿ ಐದು ಬಾರಿ ಗೆಲುವು ಸಾಧಿಸಿದ್ದರು. ಈ ಚುನಾವಣೆಯಲ್ಲಿ ಆರನೇ ಬಾರಿಗೆ ತಮ್ಮ ಅದೃಷ್ಟ ಪರೀಕ್ಷೆಗಿಳಿದಿದ್ದರು.

ಬಾದಲ್ 2017ರಲ್ಲಿ ಅಮರೀಂದರ್ ಸಿಂಗ್ ಅವರನ್ನು ಸೋಲಿಸಿದ್ದರು. ಬಾದಲ್ ಈ ಕ್ಷೇತ್ರದಿಂದ ಸ್ಪರ್ಧಿಸಿದ ಐದು ಚುನಾವಣೆಗಳಲ್ಲಿ 2007 ರಲ್ಲಿ ಕಾಂಗ್ರೆಸ್ ಅನ್ನು ಒಂಬತ್ತು ಸಾವಿರಕ್ಕೂ ಹೆಚ್ಚು ಮತಗಳಿಂದ ಸೋಲಿಸಿದ್ದನ್ನು ಹೊರತುಪಡಿಸಿ ಪ್ರತಿ ಬಾರಿಯೂ ಅವರ ಗೆಲುವಿನ ಅಂತರ 20 ಸಾವಿರಕ್ಕಿಂತ ಹೆಚ್ಚಿರುತ್ತಿತ್ತು. ಈ ಭಾರಿಯ ಚುನಾವಣೆಯ ವೇಳೆ ಆರೋಗ್ಯ ಸರಿ ಇಲ್ಲದ ಕಾರಣ, ಚುನಾವಣಾ ಪ್ರಚಾರಗಳಲ್ಲಿ ಅವರು ಹಿನ್ನಡೆ ಅನುಭವಿಸಿದ್ದರು.

ಹಾಲಿ ಸಿಎಂಗೆ ಸೋಲು

ಪಂಜಾಬ್ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಚರಂಜಿತ್ ಸಿಂಗ್ ಚನ್ನಿ ಅವರು ಚಮಕೌರ್ ಸಾಹಿಬ್ ಮತ್ತು ಭದೌರ್ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲೂ ಸೋತಿದ್ದಾರೆ.

ಭದೌರ್‌ನಲ್ಲಿ ಆಮ್ ಆದ್ಮಿ ಪಕ್ಷದ ಲಾಭ್ ಸಿಂಗ್ ಉಗೋಕೆ 57,000 ಮತಗಳನ್ನು ಪಡೆದರೆ, ಚನ್ನಿ 23,000 ಮತಗಳನ್ನು ಪಡೆದರು. ಚಮಕೌರ್‌ ಸಾಹಿಬ್‌ನಲ್ಲಿ ಚನ್ನಿ ಸುಮಾರು 50,000 ಮತಗಳನ್ನು ಗಳಿಸಿದರು. ಆದರೆ ಅವರ ಹತ್ತಿರದ ಪ್ರತಿಸ್ಪರ್ಧಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ, ಸಿಎಂ ರೀತಿಯ ಹೆಸರನ್ನೇ ಹೊಂದಿದ್ದ ಚರಂಜಿತ್ ಸಿಂಗ್ 54,000ಗಳಿಗಿಂತ ಹೆಚ್ಚು ಮತಗಳನ್ನು ಗಳಿಸಿದರು.

ಆಮ್ ಆದ್ಮಿ ಪಕ್ಷ ಅಥವಾ ಎಎಪಿ ಪಂಜಾಬ್‌ನಲ್ಲಿ ಉತ್ತಮ ಮುನ್ನಡೆ ಸಾಧಿಸುವ ಮೂಲಕ ಸರ್ಕಾರ ರಚಿಸಲು ಸಿದ್ಧವಾಗಿದೆ. 117 ಸದಸ್ಯ ಬಲದ ಸದನದಲ್ಲಿ ಎಎಪಿ 90 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 18 ಸ್ಥಾನಗಳಲ್ಲಿ ಹಿಂದುಳಿದಿದೆ. ಬಿಜೆಪಿ 2 ಸ್ಥಾನಗಳನ್ನು ಗೆದ್ದರೆ, ಶಿರೋಮಣಿ ಅಕಾಲಿದಳ 6 ಸ್ಥಾನಗಳನ್ನು ಗೆದ್ದಿದೆ ಎಂದು ಆರಂಭಿಕ ಫಲಿತಾಂಶಗಳು ಹೇಳಿವೆ.

ಅಮರಿಂದರ್‌ಸಿಂಗ್‌ ಸೋಲು

ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ತಮ್ಮ ಕುಟುಂಬದ ಭದ್ರಕೋಟೆಯಾದ ಪಟಿಯಾಲ ನಗರ ಕ್ಷೇತ್ರದಲ್ಲಿ ಸೋಲನ್ನಪ್ಪಿದ್ದಾರೆ.

ಪಂಜಾಬ್‌ನಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ ಕ್ಲೀನ್ ಸ್ವೀಪ್ ದೊರೆಯುವ ಸೂಚನೆಗಳು ದೊರೆತಿವೆ. ಮಧ್ಯಾಹ್ನ 1 ಗಂಟೆ ವೇಳೆಗೆ 117 ಸ್ಥಾನಗಳಲ್ಲಿ 91ರಲ್ಲಿ ಎಎಪಿ ಮುನ್ನಡೆ ಸಾಧಿಸಿದೆ ಎಂದು ತಿಳಿಸಿದೆ.

ಪಟಿಯಾಲಾ ಕ್ಷೇತ್ರದಲ್ಲಿ ಅಮರಿಂದರ್ ಸಿಂಗ್ ಅವರನ್ನು ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಅಜಿತ್ ಪಾಲ್ ಸಿಂಗ್ ಅವರು 13,000 ಮತಗಳ ಅಂತರದಿಂದ ಸೋಲಿಸಿದರು.

ಮಧ್ಯಾಹ್ನ 12.30 ರ ಹೊತ್ತಿಗೆ, ಅಜಿತ್ ಪಾಲ್ ಸಿಂಗ್ 36,645 ಮತಗಳೊಂದಿಗೆ ಮುನ್ನಡೆ ಸಾಧಿಸಿದ್ದರು. ಕ್ಯಾಪ್ಟನ್ ಅಮರಿಂದರ್ ಸಿಂಗ್ 22,868 ಮತಗಳನ್ನು ಹೊಂದಿದ್ದರು.

ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಅಮರಿಂದರ್‌‌, ಹಿಂದಿನ ಚುನಾವಣೆಯಲ್ಲಿ 2017ರಲ್ಲಿ ಭಾರಿ ಅಂತರದಿಂದ ಗೆದ್ದಿದ್ದರು ಎಂದು ಎನ್‌‌ಡಿಟಿವಿ ವರದಿ ಮಾಡಿದೆ. ಅವರು ನಾಲ್ಕು ಬಾರಿ ( 2002, 2007, 2012 ಮತ್ತು 2017) ಪಟಿಯಾಲಾ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ.

ನವೆಂಬರ್‌ನಲ್ಲಿ ಅಮರಿಂದರ್ ಸಿಂಗ್ ತಮ್ಮದೇ ಪಕ್ಷವಾದ ಪಂಜಾಬ್ ಲೋಕ ಕಾಂಗ್ರೆಸ್ ಸ್ಥಾಪಿಸಿದ್ದರು. ಪಂಜಾಬ್ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದರು.


ಇದನ್ನೂ ಓದಿರಿ: ಗೋವಾ ಚುನಾವಣಾ ಫಲಿತಾಂಶ: ಪಣಜಿಯಲ್ಲಿ 800 ಮತಗಳ ಅಂತರದಿಂದ ಸೋಲುಂಡ ಉತ್ಪಲ್ ಪರಿಕ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...