Homeದಲಿತ್ ಫೈಲ್ಸ್ಪಂಜಾಬ್‌| ದಲಿತ ಯುವಕನ 'ಲಾಕಪ್ ಡೆತ್' ಆರೋಪ: ನ್ಯಾಯಕ್ಕೆ ಆಗ್ರಹಿಸಿ ಕುಟುಂಬಸ್ಥರ ಪ್ರತಿಭಟನೆ

ಪಂಜಾಬ್‌| ದಲಿತ ಯುವಕನ ‘ಲಾಕಪ್ ಡೆತ್’ ಆರೋಪ: ನ್ಯಾಯಕ್ಕೆ ಆಗ್ರಹಿಸಿ ಕುಟುಂಬಸ್ಥರ ಪ್ರತಿಭಟನೆ

- Advertisement -
- Advertisement -

ಪಂಜಾಬ್‌ನ ಫಿರೋಜ್‌ಪುರ ಜಿಲ್ಲೆಯ ಜಿರಾದಲ್ಲಿ 19 ವರ್ಷದ ಜಶನ್‌ದೀಪ್ ಎಂಬ ಯುವಕನ ಸಾವಿನ ಪ್ರಕರಣ ಉದ್ವಿಗ್ನತೆಗೆ ಕಾರಣವಾಗಿದೆ. ಪೊಲೀಸ್ ಕಸ್ಟಡಿಯಲ್ಲಿ ಹಿಂಸೆ ನೀಡಿದ್ದರಿಂದಲೇ ಯುವಕ ಮೃತಪಟ್ಟಿದ್ದಾನೆ ಎಂದು ಆರೋಪಿಸಿರುವ ಕುಟುಂಬಸ್ಥರು, ಶುಕ್ರವಾರ ಶೆರಾವಾಲಾ ಚೌಕ್‌ನಲ್ಲಿ ಮೃತದೇಹವನ್ನಿಟ್ಟು ಪ್ರತಿಭಟನೆ ನಡೆಸಿದರು. ಘಟನೆಗೆ ಸಂಬಂಧಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸ್ಥಳೀಯ ನಿವಾಸಿಗಳು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಫಿರೋಜ್‌ಪುರ ಜಿಲ್ಲೆಯ ಬಸ್ತಿ ಮಚ್ಚಿಯಾನ್‌ವಾಲಾ ಗ್ರಾಮದ ನಿವಾಸಿಯಾಗಿದ್ದ ಜಶನ್‌ದೀಪ್ 12ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಹಾಕಿ ಆಟಗಾರನಾಗುವ ಕನಸು ಕಂಡಿದ್ದ. ನವೆಂಬರ್ 16ರಂದು ಯಾವುದೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಕುಲ್ಗರ್ಹಿ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದರು ಎಂದು ಮೂಲಗಳು ತಿಳಿಸಿವೆ.

ಪೊಲೀಸ್ ಕಸ್ಟಡಿಯಲ್ಲಿದ್ದಾಗ ಜಶನ್‌ದೀಪ್‌ಗೆ ಹಿಂಸೆ ನೀಡಲಾಗಿತ್ತು. ಆತನನ್ನು ಕುಟುಂಬಸ್ಥರಿಗೆ ಹಿಂತಿರುಗಿಸಿದ ಕೆಲವೇ ಸಮಯದಲ್ಲಿ ಆರೋಗ್ಯ ಹದಗೆಟ್ಟಿತ್ತು ಎಂದು ದಲಿತ ಯುವಕನ ಕುಟುಂಬ ಆರೋಪಿಸಿದೆ. ಬಳಿಕ ಆತನನ್ನು ಜಿರಾ ಹಾಗೂ ನಂತರ ಮೋಗಾದ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು. ಸುಮಾರು ಐದು ದಿನಗಳ ಕಾಲ ಚಿಕಿತ್ಸೆ ಪಡೆದರೂ ಆತ ಮೃತಪಟ್ಟಿದ್ದಾನೆ.

ಜಶನ್‌ದೀಪ್‌ನ ತಾಯಿ ಸರಬ್ಜಿತ್ ಕೌರ್ ಮಾತನಾಡಿ, ತನ್ನ ಮಗನಿಗೆ ಈ ಹಿಂದೆ ಯಾವುದೇ ದೈಹಿಕ ಆರೋಗ್ಯ ಸಮಸ್ಯೆಗಳಿರಲಿಲ್ಲ. ಅಂತಾರಾಷ್ಟ್ರೀಯ ಮಟ್ಟದ ಹಾಕಿ ಆಟಗಾರನಾಗಬೇಕೆಂಬ ಕನಸು ಹೊಂದಿದ್ದ ಆತ, ರಾಜ್ಯಮಟ್ಟದ ಕ್ರೀಡಾಕೂಟಗಳಲ್ಲಿಯೂ ಭಾಗವಹಿಸಿ ಹಲವು ಪದಕಗಳನ್ನು ಗೆದ್ದಿದ್ದ ಎಂದು ತಿಳಿಸಿದ್ದಾರೆ.

ಆದರೆ, ಆರೋಪಗಳನ್ನು ನಿರಾಕರಿಸಿರುವ ಜಿರಾ ನಗರ ಪೊಲೀಸ್ ಠಾಣೆಯ ಎಸ್‌ಎಚ್‌ಒ ಜಸ್ವಿಂದರ್ ಸಿಂಗ್ ಬ್ರಾರ್, ಯುವಕ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಎಂದು ಹೇಳಿದ್ದಾರೆ. ವಿಚಾರಣೆ ಬಳಿಕ ಆತನನ್ನು ಬಿಡುಗಡೆ ಮಾಡಲಾಗಿತ್ತು. ಪೊಲೀಸ್ ಕಸ್ಟಡಿಯಲ್ಲಿ ಹಲ್ಲೆ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಮುಂದಿನ ಕ್ರಮ ಕೈಗೊಳ್ಳುವ ಮೊದಲು ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದೂ ತಿಳಿಸಿದ್ದಾರೆ.

ಕ್ರಾಂತಿಕಾರಿ ಗ್ರಾಮೀಣ ಕಾರ್ಮಿಕರ ಸಂಘದ ಸದಸ್ಯರು ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಸಂಘಟನೆಯ ಮುಖಂಡ ದಿಲ್ಬಾಗ್ ಸಿಂಗ್ ಪ್ರತಿಭಟನೆಗೆ ನೇತೃತ್ವ ವಹಿಸಿದ್ದರು.

ಇದೇ ವೇಳೆ, ಪಂಜಾಬ್ ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾದ ಅಧ್ಯಕ್ಷ ಶೀತಲ್ ಅಂಗುರಾಲ್ ಘಟನೆಯನ್ನು ಖಂಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ತಕ್ಷಣವೇ ಕೊಲೆ ಪ್ರಕರಣ ದಾಖಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಬೆಂಬಲ

ನವೆಂಬರ್ 30 ರಿಂದ ಡಿಸೆಂಬರ್ 3 ರವರೆಗೆ ನಡೆಯಲಿರುವ ಮುಂಬರುವ ಸಂಸತ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಪುನರ್‌ವಿಂಗಡಣೆ (ಡಿಲಿಮಿಟೇಶನ್) ಮಸೂದೆಯನ್ನು ಬೆಂಬಲಿಸುವುದಾಗಿ ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ...

ಪಶ್ಚಿಮ ಬಂಗಾಳ: ಎಸ್‌ಐಆರ್ ವಿವಾದದ ಬಳಿಕ ಶಿಶುವಿಗೆ ಜನನ ಪ್ರಮಾಣಪತ್ರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ವೇಳೆ ತಂದೆಯ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲಾಗಿತ್ತು ಎಂಬ ಕಾರಣಕ್ಕೆ ಜನನ ಪ್ರಮಾಣಪತ್ರ ನೀಡಲು ನಿರಾಕರಿಸಿದ್ದ ಪಶ್ಚಿಮ ಬಂಗಾಳ ಸರ್ಕಾರವು, ಅಂತಿಮವಾಗಿ ಎರಡು ತಿಂಗಳ...

ಕ್ಷೇತ್ರ ಪುನರ್ವಿಂಗಡಣೆ ಮಸೂದೆ ವಿರುದ್ಧ ಪ್ರತಿಪಕ್ಷಗಳ ಒಗ್ಗಟ್ಟಿಗೆ ಖರ್ಗೆ ಮನವಿ; ಡಿಎಂಕೆ, ಎಎಪಿ, ಬಿಜೆಡಿಗೂ ಆಹ್ವಾನ

ನವದೆಹಲಿ: ಮಹಿಳಾ ಮೀಸಲಾತಿ ಜಾರಿ ನೆಪದಲ್ಲಿ ಕ್ಷೇತ್ರ ಪುನರ್ವಿಂಗಡಣೆಗೆ ಸಂಬಂಧಿಸಿದ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಮತ್ತೆ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂಬ ಸೂಚನೆಗಳ ಬೆನ್ನಲ್ಲೇ, ಸರ್ಕಾರದ ನಡೆಗೆ ಸಂಘಟಿತ...

ನಿಗದಿತ ಮಿತಿಗಿಂತ ಹೆಚ್ಚಿನ ಎಥೆನಾಲ್ ಮಿಶ್ರಣ: ಕರ್ನಾಟಕ ಸರ್ಕಾರದಿಂದ ಇಂಡಿಯನ್ ಆಯಿಲ್‌ಗೆ ಕಾರಣ ಕೇಳಿ ನೋಟಿಸ್

ಬೆಂಗಳೂರು ಸಮೀಪದ ದೇವನಗೊಂದಿ ಟರ್ಮಿನಲ್‌ನಲ್ಲಿ ಪೆಟ್ರೋಲ್‌ಗೆ ನಿಗದಿತ ಶೇ. 20 ರ ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಮಾಡುತ್ತಿರುವುದು ತಪಾಸಣೆಯ ವೇಳೆ ಪತ್ತೆಯಾದ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರವು ಇಂಡಿಯನ್ ಆಯಿಲ್ ಕಾರ್ಪೊರೇಷನ್...

ಅಸ್ಸಾಂನ ಲಖಿಂಪುರದಲ್ಲಿ ತೆರವು ಕಾರ್ಯಾಚರಣೆ ಬಳಿಕವೂ ನಿಲ್ಲದ ಸಂಕಷ್ಟ: ಸೂರು ಕಳೆದುಕೊಂಡು ಬಯಲಿನಲ್ಲಿ ಕಾಲಕಳೆಯುತ್ತಿರುವ 135 ಬಡ ಮುಸ್ಲಿಂ ಕುಟುಂಬಗಳು, ಧರ್ಮದ ಆಧಾರದ ತಾರತಮ್ಯದ ಗಂಭೀರ ಆರೋಪ!

ಲಖಿಂಪುರ (ಅಸ್ಸಾಂ): ಅಸ್ಸಾಂನ ಲಖಿಂಪುರ ಜಿಲ್ಲೆಯ ಕದಮ್ ಕಂದಾಯ ವೃತ್ತದ ವ್ಯಾಪ್ತಿಯ ಬೋಗಿನದಿ ಪ್ರದೇಶದಲ್ಲಿ ಜಿಲ್ಲಾಡಳಿತ ನಡೆಸಿದ ಬೃಹತ್ ತೆರವು ಕಾರ್ಯಾಚರಣೆಯ ಬೆನ್ನಲ್ಲೇ ಸುಮಾರು 135 ಬಡ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ....

ಪೌರಕಾರ್ಮಿಕರ ಸ್ವಂತ ಮನೆ ಕನಸಿಗೆ ಸರ್ಕಾರದ ಬಲ; ಮೈಸೂರಿನಲ್ಲಿ 158 ಕುಟುಂಬಗಳ ವಸತಿ ಸಮುಚ್ಚಯ ಉದ್ಘಾಟಿಸಿದ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ನಗರದ ಸ್ವಚ್ಛತೆ ಮತ್ತು ಸಾರ್ವಜನಿಕ ಆರೋಗ್ಯವನ್ನು ಕಾಪಾಡಲು ಹಗಲಿರುಳು ಶ್ರಮಿಸುವ ಪೌರಕಾರ್ಮಿಕರಿಗೆ ಸ್ವಂತ ಮನೆಯ ಸೌಲಭ್ಯ ಕಲ್ಪಿಸುವುದು ಸರ್ಕಾರದ ಸಾಮಾಜಿಕ ಹೊಣೆಗಾರಿಕೆಯಾಗಿದೆ. ಪೌರಕಾರ್ಮಿಕರ ಬದುಕಿನಲ್ಲಿ ಗೌರವ, ಸ್ವಾಭಿಮಾನ ಮತ್ತು ಭದ್ರತೆ ತರುವ...

ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಬೆಂಬಲ ನೀಡಲು ನಿರ್ಧರಿಸಿದರೆ ಡಿಎಂಕೆ ತನ್ನ ‘ನಿಲುವು ಬದಲಾವಣೆ’ಗೆ ವಿವರಣೆ ನೀಡಬೇಕು: ಕಾರ್ತಿ ಚಿದಂಬರಂ

ಈ ಹಿಂದೆ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ವಿರೋಧಿಸಿದ್ದ ಡಿಎಂಕೆ, ಇದೀಗ ಅದನ್ನು ಬೆಂಬಲಿಸಲು ನಿರ್ಧರಿಸಿದರೆ ತನ್ನ ನಿಲುವು ಬದಲಾವಣೆಗೆ (ಯು-ಟರ್ನ್) ಕಾರಣವೇನು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರಂ ಶುಕ್ರವಾರ...

ಪಶ್ಚಿಮ ಬಂಗಾಳ ವಿಧಾನಸಭೆಯ ವಿಪಕ್ಷ ನಾಯಕನ ನೇಮಕ ರದ್ದು: 10 ದಿನದಲ್ಲಿ ಹೊಸ ನಿರ್ಧಾರಕ್ಕೆ ಹೈಕೋರ್ಟ್ ಸೂಚನೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ (LoP) ರಿತಬ್ರತ ಬ್ಯಾನರ್ಜಿ ಅವರನ್ನು ನೇಮಿಸಿದ್ದ ಆದೇಶವನ್ನು ಕಲ್ಕತ್ತಾ ಹೈಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿ ಕೃಷ್ಣ ರಾವ್ ಅವರ ಪೀಠವು ಈ ತೀರ್ಪು ನೀಡಿದ್ದು,...

‘ಒಂದು ನಿರ್ದಿಷ್ಟ ವರ್ಗಕ್ಕೆ ಮಣೆ’: ಉನ್ನತ ನ್ಯಾಯಾಂಗದಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ, ಅಲ್ಪಸಂಖ್ಯಾತರ ಕಡಿಮೆ ಪ್ರಾತಿನಿಧ್ಯಕ್ಕೆ ಮಾಜಿ ಸಿಜೆಐ ಗವಾಯಿ ಆಕ್ಷೇಪ

ನವದೆಹಲಿ: ದೇಶದ ಉನ್ನತ ನ್ಯಾಯಾಂಗದಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡ (ಎಸ್‌ಟಿ), ಇತರೆ ಹಿಂದುಳಿದ ವರ್ಗ (ಒಬಿಸಿ) ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ ಸಮರ್ಪಕ ಪ್ರಾತಿನಿಧ್ಯ ಸಿಗುತ್ತಿಲ್ಲ ಎಂದು ಭಾರತದ ಮಾಜಿ ಮುಖ್ಯ...

ಕ್ಷೇತ್ರ ಮರುವಿಂಗಡಣೆಗೆ ಸಂಬಂಧಿಸಿದ ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅಸ್ತು!

ಕ್ಷೇತ್ರ ಮರುವಿಂಗಡಣೆಗೆ ಸಂಬಂಧಿಸಿದ ಮಹಿಳಾ ಮೀಸಲಾತಿಯ ಹೊಸ ಮಸೂದೆಗೆ ಕೇಂದ್ರ ಸಚಿವ ಸಂಪುಟ ಶುಕ್ರವಾರ (ನವೆಂಬರ್ 27) ಅನುಮೋದನೆ ನೀಡಿದೆ ಎಂದು ತಿಳಿದುಬಂದಿದೆ. ಮುಂದಿನ ವಾರದಿಂದ ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಈ...