ಪಂಜಾಬ್‌| ದಲಿತ ಯುವಕನ ‘ಲಾಕಪ್ ಡೆತ್’ ಆರೋಪ: ನ್ಯಾಯಕ್ಕೆ ಆಗ್ರಹಿಸಿ ಕುಟುಂಬಸ್ಥರ ಪ್ರತಿಭಟನೆ

ಪಂಜಾಬ್‌ನ ಫಿರೋಜ್‌ಪುರ ಜಿಲ್ಲೆಯ ಜಿರಾದಲ್ಲಿ 19 ವರ್ಷದ ಜಶನ್‌ದೀಪ್ ಎಂಬ ಯುವಕನ ಸಾವಿನ ಪ್ರಕರಣ ಉದ್ವಿಗ್ನತೆಗೆ ಕಾರಣವಾಗಿದೆ. ಪೊಲೀಸ್ ಕಸ್ಟಡಿಯಲ್ಲಿ ಹಿಂಸೆ ನೀಡಿದ್ದರಿಂದಲೇ ಯುವಕ ಮೃತಪಟ್ಟಿದ್ದಾನೆ ಎಂದು ಆರೋಪಿಸಿರುವ ಕುಟುಂಬಸ್ಥರು, ಶುಕ್ರವಾರ ಶೆರಾವಾಲಾ ಚೌಕ್‌ನಲ್ಲಿ ಮೃತದೇಹವನ್ನಿಟ್ಟು ಪ್ರತಿಭಟನೆ ನಡೆಸಿದರು. ಘಟನೆಗೆ ಸಂಬಂಧಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಸ್ಥಳೀಯ ನಿವಾಸಿಗಳು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. … Continue reading ಪಂಜಾಬ್‌| ದಲಿತ ಯುವಕನ ‘ಲಾಕಪ್ ಡೆತ್’ ಆರೋಪ: ನ್ಯಾಯಕ್ಕೆ ಆಗ್ರಹಿಸಿ ಕುಟುಂಬಸ್ಥರ ಪ್ರತಿಭಟನೆ