Homeಮುಖಪುಟಪಂಜಾಬ್‌: ಅಧಿಕಾರದ ಕಿತ್ತಾಟಕ್ಕೆ ಅಂತ್ಯ; ಸಿಎಂ ಅಭ್ಯರ್ಥಿ ಘೋಷಿಸಲು ನಿರ್ಧರಿಸಿದ ಕಾಂಗ್ರೆಸ್‌

ಪಂಜಾಬ್‌: ಅಧಿಕಾರದ ಕಿತ್ತಾಟಕ್ಕೆ ಅಂತ್ಯ; ಸಿಎಂ ಅಭ್ಯರ್ಥಿ ಘೋಷಿಸಲು ನಿರ್ಧರಿಸಿದ ಕಾಂಗ್ರೆಸ್‌

- Advertisement -
- Advertisement -

ಅಧಿಕಾರದ ಕಚ್ಚಾಟಕ್ಕೆ ಅಂತ್ಯ ಹಾಡಲು ಪಂಜಾಬ್‌ನಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಮೊದಲೇ ಘೋಷಿಸಲು ಕಾಂಗ್ರೆಸ್ ನಿರ್ಧರಿಸಿದೆ. ಜಲಂಧರ್‌ನ ಆನ್‌ಲೈನ್‌ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಶೀಘ್ರದಲ್ಲೇ ಕಾರ್ಯಕರ್ತರೊಂದಿಗೆ ಚರ್ಚಿಸಿ ಪಕ್ಷವು ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತದೆ ಎಂದು ಗುರುವಾರ ಹೇಳಿದ್ದಾರೆ.

“ಸಾಮಾನ್ಯವಾಗಿ, ನಾವು ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡುವುದಿಲ್ಲ. ಆದರೆ ಪಕ್ಷ, ನಮ್ಮ ಕಾರ್ಯಕರ್ತರು ಮತ್ತು ಪಂಜಾಬ್ ಇದನ್ನು ಬಯಸಿದರೆ, ನಾವು ಸಿಎಂ ಅಭ್ಯರ್ಥಿ ಯಾರು ಎಂಬುವುದರ ಮೇಲೆ ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರವರ ಬಗ್ಗೆ ಅಪಾರ ಗೌರವ, ಅಭಿಮಾನ ಇದೆ: ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ

“ನಾವು ನಮ್ಮ ಕಾರ್ಯಕರ್ತರನ್ನು ಸಂಪರ್ಕಿಸಿ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ. ಎಲ್ಲರೂ ತಂಡವಾಗಿ ಕೆಲಸ ಮಾಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಸ್ಥಾನವನ್ನು ಘೋಷಿಸುವ ಬೇಡಿಕೆಯನ್ನು ಆದಷ್ಟು ಬೇಗ ಈಡೇರಿಸಲಾಗುವುದು ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

ನವಜೋತ್ ಸಿಧು ಮತ್ತು ಸಿಎಂ ಚರಂಜಿತ್ ಸಿಂಗ್ ಚನ್ನಿ ನಡುವೆ ಸಿಎಂ ಹುದ್ದೆಗೆ ಪೈಪೋಟಿ ಹೆಚ್ಚುತ್ತಿರುವುದನ್ನು ಅವರು ಅರಿತಿದ್ದಾರೆ. ಯಾರನ್ನೇ ಸಿಎಂ ಆಗಿ ಆಯ್ಕೆ ಮಾಡಿದರೂ ಒಬ್ಬರು ಇನ್ನೊಬ್ಬರ ಬೆಂಬಲಿಸುತ್ತಾರೆ ಎಂದು ಇಬ್ಬರು ನಾಯಕರು ಭರವಸೆ ನೀಡಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದ ಚುನಾವಣೆ; ಮುಗ್ಗರಿಸುತ್ತಿರುವ ಮೋದಿ-ಯೋಗಿ ಜೋಡಿ

ಈ ಹಿಂದೆ ಚನ್ನಿ ಮತ್ತು ಸಿದ್ದು ಜೊತೆ ನಡೆಸಿದ ಸಂವಾದವನ್ನು ಹಂಚಿಕೊಂಡ ರಾಹುಲ್ ಗಾಂಧಿ, “ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಯಾರು ಮುನ್ನಡೆಸುತ್ತಾರೆ ಎಂಬುದು ದೊಡ್ಡ ಪ್ರಶ್ನೆ ಎಂದು ಚನ್ನಿ ಮತ್ತು ಸಿದ್ದು ನನಗೆ ಕಾರಿನಲ್ಲಿ ಹೇಳಿದ್ದಾರೆ. ಪಕ್ಷವನ್ನು ಒಬ್ಬರು ಮಾತ್ರ ಮುನ್ನಡೆಸಲಿದ್ದಾರೆ, ಇಬ್ಬರೂ ನನಗೆ ಭರವಸೆ ನೀಡಿದ್ದಾರೆ.

ಈ ಬಗ್ಗೆ ಪಕ್ಷದ ಕಾರ್ಯಕರ್ತರೊಂದಿಗೆ ಮಾತನಾಡಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಇದಕ್ಕೂ ಮುನ್ನ ತಮ್ಮ ಭಾಷಣದಲ್ಲಿ, ಅಜೆಂಡಾ ಮತ್ತು ಮಾರ್ಗಸೂಚಿಯನ್ನು ಯಾರು ಕಾರ್ಯಗತಗೊಳಿಸುತ್ತಾರೆ ಎಂಬುದು ಜನರಿಗೆ ಸ್ಪಷ್ಟತೆ ಬೇಕು ಎಂದು ಸಿದ್ದು ಹೇಳಿದ್ದಾರೆ. “ನಮ್ಮ ನಡುವೆ ಯಾವುದೇ ಹೋರಾಟವಿಲ್ಲ. ಪಂಜಾಬ್ ಚುನಾವಣೆಗೆ ಮುಖ್ಯಮಂತ್ರಿ ಮುಖವನ್ನು ಘೋಷಿಸಿ, ನಾವು [ಪಂಜಾಬ್ ಕಾಂಗ್ರೆಸ್] ಒಗ್ಗಟ್ಟಾಗಿ ನಿಲ್ಲುತ್ತೇವೆ” ಎಂದು ಚನ್ನಿ ಹೇಳಿದ್ದಾರೆ.

ಇದನ್ನೂ ಓದಿ:  ಫ್ಯಾಕ್ಟ್‌‌ಚೆಕ್‌: ವಿದ್ಯಾರ್ಥಿನಿ ಸಾವಿನ ಬಗ್ಗೆ ಸುಳ್ಳು ಬರೆದು ಕೋಮುದ್ವೇಷ ಹರಡುತ್ತಿರುವ ‘ಪೋಸ್ಟ್‌ ಕಾರ್ಡ್’!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪಠ್ಯ ಪರಿಷ್ಕರಣೆ ವಿವಾದಕ್ಕೆ ಕಾರ್ಟೂನ್‌ಗಳು ಸ್ಪಂದಿಸಿದ್ದು ಹೀಗೆ…

0
ಕರ್ನಾಟಕದಲ್ಲಿ ಪಠ್ಯ ಪರಿಷ್ಕರಣೆ ವಿವಾದ ತಾರಕಕ್ಕೆರಿದೆ. ಕರ್ನಾಟಕ ಸರ್ಕಾರ ನೇಮಿಸಿದ್ದ ರೋಹಿತ್ ಚಕ್ರತೀರ್ಥ ಸಮಿತಿ ಮಾಡಿರುವ ಪರಿಷ್ಕರಣೆಗಳು ಸಂವಿಧಾನ ವಿರೋಧಿಯಾಗಿದ್ದು, ಒಂದು ಸಮುದಾಯವನ್ನು ಮಾತ್ರ ಪರಿಗಣಿಸಿವೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ ಎಳೆಯ...