Homeಮುಖಪುಟಪಂಜಾಬ್ ಚುನಾವಣೆ: ಸಂಸದ ಭಗವಂತ್ ಮಾನ್ ಆಪ್‌ನ ಮುಖ್ಯಮಂತ್ರಿ ಅಭ್ಯರ್ಥಿ

ಪಂಜಾಬ್ ಚುನಾವಣೆ: ಸಂಸದ ಭಗವಂತ್ ಮಾನ್ ಆಪ್‌ನ ಮುಖ್ಯಮಂತ್ರಿ ಅಭ್ಯರ್ಥಿ

- Advertisement -
- Advertisement -

ಮುಂದಿನ ತಿಂಗಳು ಫೆಬ್ರವರಿಯಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ಪಂಜಾಬ್ ಆಪ್ ಮುಖ್ಯಸ್ಥ ಸಂಸದ ಭಗವಂತ್ ಮಾನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.

ಪಂಜಾಬ್‌ನ ಜನರು ತಮ್ಮ ಆದ್ಯತೆಯ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಸೂಚಿಸಲು ಆಮ್ ಆದ್ಮಿ ಪಕ್ಷವು ಟೆಲಿವೋಟಿಂಗ್ ಡ್ರೈವ್‌ ನಡೆಸಿತ್ತು. ಇದರಲ್ಲಿ ಸುಮಾರು 22 ಲಕ್ಷ ಮಂದಿ ಭಾಗವಹಿಸಿದ್ದು, ಸಂಸದ ಭಗವಂತ್ ಮಾನ್ ಶೇಕಡಾ 93 ಕ್ಕಿಂತ ಹೆಚ್ಚು ಮತಗಳನ್ನು ಪಡೆದಿದ್ದಾರೆ ಎಂದು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಶೇಕಡಾ 3 ರಷ್ಟು ಮತಗಳು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರನ್ನು ಎಎಪಿಯ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೆಸರಿಸಿದ್ದಾರೆ. ಮತ್ತೆ ಕೆಲವರು ದೆಹಲಿಯ ಮುಖ್ಯಮಂತ್ರಿ ಕೇಜ್ರಿವಾಲ್ ಅವರನ್ನು ಆಯ್ಕೆ ಮಾಡಿದ್ದಾರೆ ಈ ಮತಗಳನ್ನು ಅದರಿಂಧುರಗೊಳಿಸಲಾಯಿತು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೇಜ್ರಿವಾಲ್‌‌ ಪಂಜಾಬ್‌‌ನಲ್ಲಿ ಸುಳ್ಳುಗಳ ಮಾರಾಟ ಮಾಡುತ್ತಿದ್ದಾರೆ: ನವಜೋತ್‌ ಸಿಧು

“ಎಎಪಿ ಪಂಜಾಬ್ ಚುನಾವಣೆಯಲ್ಲಿ ಗೆಲ್ಲುವುದು ಸ್ಪಷ್ಟವಾಗಿದೆ. ಒಂದು ರೀತಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆಯಾದ ವ್ಯಕ್ತಿ ಪಂಜಾಬ್‌ನ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ” ಎಂದು ಅರವಿಂದ್ ಕೇಜ್ರಿವಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

2017 ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ, ಆಮ್ ಆದ್ಮಿ ಪಕ್ಷವು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೆ ಚುನಾವಣೆಗೆ ಇಳಿದಿತ್ತು ಆದರೆ ಸರ್ಕಾರ ರಚಿಸಲು ವಿಫಲವಾಗಿತ್ತು. ಆದರೆ, 20 ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಪ್ರಮುಖ ಪ್ರತಿಪಕ್ಷವಾಯಿತು.

ಇತ್ತ ಕಾಂಗ್ರೆಸ್, ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಲಿದೆ ಎಂಬ ವದಂತಿಗಳು ಹರಿದಾಡುತ್ತಿವೆ.

ಪಂಜಾಬ್‌ನಲ್ಲಿ ಫೆಬ್ರವರಿ 20 ರಂದು ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ಪಂಜಾಬ್ ಚುನಾವಣೆ ಫೆ.14ರ ಬದಲು ಫೆ.20ಕ್ಕೆ ಮುಂದೂಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...