Homeಚಳವಳಿಪಂಜಾಬ್: ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ ಬ್ಯಾಸ್ಕೆಟ್ ಬಾಲ್ ಆಟಗಾರ ಸತ್ನಂ ಸಿಂಗ್

ಪಂಜಾಬ್: ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ ಬ್ಯಾಸ್ಕೆಟ್ ಬಾಲ್ ಆಟಗಾರ ಸತ್ನಂ ಸಿಂಗ್

"ನಾವು ರೈತರೊಂದಿಗೆ ನಿಲ್ಲುತ್ತೇವೆ. ಅವರಿಗೆ ಸೇವೆ ಸಲ್ಲಿಸಲು ಬಂದಿದ್ದೇವೆ"

- Advertisement -
- Advertisement -

ಕೇಂದ್ರದ ಕೃಷಿ ಕಾನೂನಗಳನ್ನು ವಿರೊಧಿಸಿ ಸಿಂಘು ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರಿಗೆ ಬೆಂಬಲ ಸೂಚಿಸಿ ಬ್ಯಾಸ್ಕೆಟ್ ಬಾಲ್ ಆಟಗಾರ ಸತ್ನಂ ಸಿಂಗ್ ಹೋರಾಟಕ್ಕೆ ಸೇರಿಕೊಂಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಎಎನ್‌ಐ, “ಸಿಂಘು ಗಡಿಯಲ್ಲಿ ರೈತರ ಪ್ರತಿಭಟನೆಗೆ ಬಾಸ್ಕೆಟ್‌ಬಾಲ್ ಆಟಗಾರ ಸತ್ನಂ ಸಿಂಗ್ ಸೇರಿಕೊಂಡಿದ್ದಾರೆ. ‘ನಾವು ರೈತರೊಂದಿಗೆ ನಿಲ್ಲುತ್ತೇವೆ. ಅವರಿಗೆ ಸೇವೆ ಸಲ್ಲಿಸಲು ಬಂದಿದ್ದೇವೆ. ಆದ್ದರಿಂದ ಅವರಿಗೆ ಯಾವುದೇ ಸಮಸ್ಯೆಗಳು ಎದುರಾಗುವುದಿಲ್ಲ’ ಎಂದು ಸತ್ನಂ ಸಿಂಗ್ ಹೇಳಿದ್ದಾರೆ ಎಂಬುದಾಗಿ ವರದಿ ಮಾಡಿದೆ.

ಇದನ್ನೂ ಓದಿ: ಜಗತ್‌ ಪ್ರಸಿದ್ಧ ಪ್ರತಿರೋಧದ ಹಾಡು! – ರೈತರ ಹೋರಾಟದಲ್ಲೂ ಪ್ರತಿಧ್ವನಿಸಿದ ‘ಬೆಲ್ಲಾ ಚಾವ್’

ಇದನ್ನೂ ಓದಿ: ಐತಿಹಾಸಿಕ ರೈತ ಹೋರಾಟದೊಂದಿಗೆ ಕೈಜೋಡಿಸಿದ ದೊಡ್ಡ ಸಂಖ್ಯೆಯ ಕೃಷಿ ಕಾರ್ಮಿಕರು!

ರೈತ ಹೋರಾಟವನ್ನು ಬೆಂಬಲಿಸಿ ಈ ಹಿಂದೆ ಅಕಾಲಿ ದಳದ ಹರ್ಸಿಮೃತ್ ಕೌರ್ ಎನ್‌ಡಿಎ ಮೈತ್ರಿಕೂಟಕ್ಕೆ ಮತ್ತು ಕೇಂದ್ರ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಪಂಜಾಬಿನ ಹತ್ತಾರು ನಟರು, ಹಾಡುಗಾರರು, ಚಿತ್ರ ನಿರ್ಮಾಪಕರು, ಕ್ರೀಡಾ ಪಟುಗಳು, ಸೈನಿಕರು, ಕಾರ್ಮಿಕರು ಸೇರಿದಂತೆ ಸಾವಿರಾರು ಜನರು ಬೆಂಬಲ ಸೂಚಿಸಿದ್ದಾರೆ.

ದೆಹಲಿ ಮತ್ತು ಹರಿಯಾಣ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 29 ನೇ ದಿನಕ್ಕೆ ಕಾಲಿಟ್ಟಿದ್ದು, ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ತಮ್ಮ ವಿರೋಧವನ್ನು ಇನ್ನಷ್ಟು ತೀವ್ರಗೊಳಿಸುವ ಉದ್ದೇಶದಿಂದ ಇತ್ತೀಚೆಗೆ ದೇಶದಾದ್ಯಂತ ಉಪವಾಸಕ್ಕೆ ಕರೆ ನೀಡಿದ್ದರು.

ಇದನ್ನೂ ಓದಿ: ಕಂಪೆನಿ ಹಠಮಾರಿ ದೋರಣೆ ಕೈಬಿಡದಿದ್ದರೆ ನಾನೇ ಹೋರಾಟಕ್ಕಿಳಿಯುತ್ತೇನೆ: ಟೊಯೊಟಾ ಕಾರ್ಮಿಕರ ಬೆಂಬಲಕ್ಕೆ ಡಿಕೆ. ಸುರೇಶ್

ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಅವುಗಳೆಲ್ಲಾ ವಿಫಲವಾಗಿವೆ. ಇತ್ತೀಚೆಗೆ ಈ ವಿಷಯವನ್ನು ಕೈಗೆತ್ತಿಕೊಂಡು ಸುಪ್ರೀಂಕೋರ್ಟ್, ಈ ಕುರಿತು ಶೋಧನೆ ಮಾಡಲು ಒಂದು ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೇಂದ್ರಕ್ಕೆ ಸಲಹೆ ನೀಡಿತ್ತು.

ಜೊತೆಗೆ ರೈತರು ತಮ್ಮ ಹೋರಾಟವನ್ನು ಹಿಂತೆಗೆದುಕೊಳ್ಳಬೇಕಾಗಿಲ್ಲ. ಹೋರಾಟ ಮಾಡುವುದು ಅವರ ಹಕ್ಕು ಎಂದು ಸುಪ್ರೀಂ ಹೇಳಿತ್ತು. ಆದರೆ ಸಾರ್ವಜನಿಕ ಜೀವನಕ್ಕೆ ತೊಂದರೆಯಾಗದಂತೆ, ಶಾಂತಿಯುತವಾಗಿ ಪ್ರತಿಭಟಿಸುವಂತೆ ಹೇಳಿತ್ತು.


ಇದನ್ನೂ ಓದಿ: ಪ್ರಧಾನಿ ವಿರುದ್ಧ ದನಿಯೆತ್ತಿದರೆ ಮೋಹನ್ ಭಾಗವತ್ ಕೂಡಾ ಭಯೋತ್ಪಾದಕರೇ! – ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...