Homeಮುಖಪುಟರೈತರ ಪರ ಮಾತನಾಡಿದ್ದಕ್ಕೆ ಮಾಜಿ ಸಚಿವನನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ

ರೈತರ ಪರ ಮಾತನಾಡಿದ್ದಕ್ಕೆ ಮಾಜಿ ಸಚಿವನನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ

- Advertisement -
- Advertisement -

ರೈತರ ವಿಚಾರದಲ್ಲಿ ಬಿಜೆಪಿಯ ಕೇಂದ್ರ ನಾಯಕತ್ವವನ್ನು ಪ್ರಶ್ನಿಸಿದ ಸುಮಾರು ಒಂದು ತಿಂಗಳ ನಂತರ, ಪಂಜಾಬ್ ಬಿಜೆಪಿ ಘಟಕವು ಮಾಜಿ ಸಚಿವ ಅನಿಲ್ ಜೋಶಿಯನ್ನು ಪಕ್ಷ ವಿರೋಧಿ ಪ್ರತಿಪಾದನೆಗಾಗಿ ಹೊರಹಾಕಿದೆ ಎಂದು ವರದಿಯಾಗಿದೆ. ಪಕ್ಷದ ಹೇಳಿಕೆಯ ಪ್ರಕಾರ, ಜೋಶಿಯನ್ನು ರಾಜ್ಯ ಘಟಕದ ಮುಖ್ಯಸ್ಥ ಅಶ್ವನಿ ಶರ್ಮಾ ಅವರ ನಿರ್ದೇಶನದ ಮೇರೆಗೆ ಹೊರಹಾಕಲಾಯಿದೆ.

ಅನಿಲ್‌ ಜೋಶಿ ಅವರು ಪಕ್ಷದ ವಿರುದ್ದದ ನಡೆಯನ್ನು ಬಿಡದೆ ಇರುವುದರಿಂದ, ಶಿಸ್ತು ಸಮಿತಿಯ ಶಿಫಾರಸುಗಳ ಮೇರೆಗೆ ರಾಜ್ಯ ಬಿಜೆಪಿ ಮುಖ್ಯಸ್ಥ ಅಶ್ವನಿ ಶರ್ಮಾ, ಅವರನ್ನು ಆರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಹೊರಹಾಕಿದರು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: 8ನೇ ತಿಂಗಳಿಗೆ ಕಾಲಿಟ್ಟ ರೈತ ಹೋರಾಟ: ಪ್ರತಿಭಟನೆ ಕೈಬಿಡುವಂತೆ ಕೇಂದ್ರ ಕೃಷಿ ಮಂತ್ರಿ ಮನವಿ

ಒಕ್ಕೂಟ ಸರ್ಕಾರದ ನೀತಿಗಳ ವಿರುದ್ಧ ನೀಡಿದ್ದ ತನ್ನ ಇತ್ತೀಚಿನ ಹೇಳಿಕೆಗಳ ಕುರಿತು ವಿವರಣೆ ನೀಡಲು ಪಕ್ಷವು ಅವರಿಗೆ ಶೋಕಾಸ್ ನೋಟಿಸ್ ನೀಡಿತ್ತು. ವಿಶೇಷವಾಗಿ, ಅವರು ಮೂರು ಕೃಷಿ ಕಾನೂನುಗಳ ವಿರುದ್ದ ಪ್ರತಿಭಟಿಸುತ್ತಿರುವ ರೈತರ ಬಗ್ಗೆ ಮಾತನಾಡಿದ್ದರು.

ಅನಿಲ್‌ ಜೋಶಿ ಅವರು ಒಕ್ಕೂಟ ಸರ್ಕಾರ, ಪಕ್ಷದ ಕೇಂದ್ರ ನಾಯಕತ್ವ ಮತ್ತು ನೀತಿಗಳ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ ಎಂದು ನೋಟಿಸ್ ಉಲ್ಲೇಖಿಸಿತ್ತು.

ಶೋಕಾಸ್ ನೋಟಿಸ್‌ಗೆ ಅನಿಲ್‌ ಜೋಶಿ ಎರಡು ಪುಟಗಳ ಉತ್ತರ ನೀಡಿದ್ದು, ಅವರಲ್ಲಿ “ತಾನು ಎಂದಿಗೂ ಒಕ್ಕೂಟ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ಮಾತನಾಡಿಲ್ಲ. ರೈತರ ಬಗ್ಗೆ ವಿವೇಚನೆಯಿಲ್ಲದೆ ಮಾತನಾಡುವ ಪಕ್ಷದ ರಾಜ್ಯ ಮುಖ್ಯಸ್ಥರನ್ನು ಕೇಳಿದ್ದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಯುದ್ಧವಿಲ್ಲದೆ ವಿಜಯವಿಲ್ಲ!’ – 8 ನೇ ತಿಂಗಳಿಗೆ ಕಾಲಿಟ್ಟ ರೈತ ಹೋರಾಟ

ಉತ್ತರ ಅಮೃತಸರದ ಮಾಜಿ ಶಾಸಕರೂ ಆಗಿರುವ ಅನಿಲ್ ಜೋಶಿ, ತಾನು ಯಾವಾಗಲೂ ಪಕ್ಷದ ಹಿತಾಸಕ್ತಿಗಳ ಬಗ್ಗೆ ಮಾತನಾಡುತ್ತೇನೆ ಎಂದು ಪ್ರತಿಪಾದಿಸಿದ್ದಾರೆ. “ನಾನು ಒಕ್ಕೂಟ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ಅಥವಾ ಕೇಂದ್ರ ನಾಯಕರ ವಿರುದ್ಧ ಮಾತನಾಡಲಿಲ್ಲ” ಎಂದು ಉತ್ತರದಲ್ಲಿ ಹೇಳಿದ್ದಾರೆ.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳ ವಿರುದ್ದ ಕಳೆದ ಎಂಟು ತಿಂಗಳಿನಿಂದ ದೆಹಲಿಯ ಗಡಿಗಳಲ್ಲಿ ರೈತರು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ರೈತರನ್ನು ಬೆಂಬಲಿಸಿ ಈಗಾಗಲೆ ಬಿಜೆಪಿಗೆ ಹಲವಾರು ನಾಯಕರು, ಸಚಿವರು, ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆ.

ಕೃಷಿ ಕಾನೂನ್ನು ವಾಪಾಸು ಪಡೆಯುವವರೆಗೂ ತಮ್ಮ ಹೋರಾಟವನ್ನು ವಾಪಾಸು ಪಡೆಯುವುದಿಲ್ಲ ಎಂದು ರೈತರು ತೀರ್ಮಾನಿಸಿದ್ದಾರೆ. ಈ ಮಧ್ಯೆ ರೈತರು ಹೋರಾಟವನ್ನು ತೀವ್ರಗೊಳಿಸಲು ತೀರ್ಮಾನಿಸಿದ್ದು, ಸಂಸತ್‌ ಅಧಿವೇಶನದ ಸಮಯದಲ್ಲಿ 200 ರೈತರು ಸಂಸತ್‌ನ ಸಮೀಪ ಧರಣಿ ನಡೆಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರ ಸೂಚನೆ: ರೈತ ಹೋರಾಟ ಬೆಂಬಲಿಸಿದ ನಾಲ್ಕು ಟ್ವಿಟರ್‌ ಖಾತೆಗಳಿಗೆ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....