Homeಮುಖಪುಟಏಕಕಾಲದಲ್ಲಿ 10 ಸಾವಿರ ಪೊಲೀಸರ ವರ್ಗಾವಣೆ ಮಾಡಿದ ಪಂಜಾಬ್ ಮುಖ್ಯಮಂತ್ರಿ ಮಾನ್

ಏಕಕಾಲದಲ್ಲಿ 10 ಸಾವಿರ ಪೊಲೀಸರ ವರ್ಗಾವಣೆ ಮಾಡಿದ ಪಂಜಾಬ್ ಮುಖ್ಯಮಂತ್ರಿ ಮಾನ್

- Advertisement -
- Advertisement -

ಪಂಜಾಬ್ ಪೊಲೀಸ್‌ ಇಲಾಖೆಯಲ್ಲಿ 10,000 ಕ್ಕೂ ಹೆಚ್ಚು ಪೊಲೀಸರನ್ನು ಏಕಕಾದಲ್ಲಿ ವರ್ಗಾವಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ಮಂಗಳವಾರ ರಾಜ್ಯದ ಉನ್ನತ ಪೊಲೀಸರೊಂದಿಗೆ ಸಭೆ ನಡೆಸಿದ ನಂತರ ಘೋಷಿಸಿದರು.

“ಜಿಲ್ಲೆಯಲ್ಲಿ ಯಾವುದೇ ಅಧಿಕಾರಿಗಳು ಭ್ರಷ್ಟ ಅಥವಾ ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿರುವುದು ಕಂಡುಬಂದರೆ ಆ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿಯನ್ನು ಹೊಣೆಗಾರರನ್ನಾಗಿ ಮಾಡಲಾಗುವುದು” ಎಂದು ಮಾನ್ ಇದೆ ಸಂದರ್ಭದಲ್ಲಿ ಹೇಳಿದರು.

“ಮುಖ್ಯಮಂತ್ರಿಯಾಗಿರುವ ನಾನು ಯಾವುದೇ ಜಿಲ್ಲೆಯಲ್ಲಿ ಯಾವುದೇ ಕಾಮಗಾರಿಗೆ ಹಣ ಅಥವಾ ಕಮಿಷನ್‌ಗೆ ಬೇಡಿಕೆ ಇಟ್ಟರೆ, ಯಾವುದೇ ಜಿಲ್ಲೆಯಲ್ಲಿ ಅಕ್ರಮ ಎಸಗಿದರೆ ಅದಕ್ಕೆ ಜಿಲ್ಲಾಧಿಕಾರಿ ಮತ್ತು ಎಸ್‌ಎಸ್‌ಪಿಯನ್ನೇ ಹೊಣೆ ಮಾಡಲಾಗುವುದು. ಅದರ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದೇನೆ” ಎಂದು ಅವರು ಹೇಳಿದರು.

ರಾಜ್ಯದಲ್ಲಿ ಪೊಲೀಸ್ ಪಡೆಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು; ಮುಂದಿನ ದಿನಗಳಲ್ಲಿ ಪಂಜಾಬ್ ಪೊಲೀಸರು ವಿವಿಧ ಹಂತಗಳಲ್ಲಿ 10,000 ಹೊಸ ನೇಮಕಾತಿಗಳನ್ನು ಮಾಡಲಿದ್ದೇವೆ ಎಂದು ಅವರು ಹೇಳಿದರು.

ಇನ್ನೂ ಕೆಳಮಟ್ಟದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕೆಲವು ಸ್ಥಳಗಳಿಂದ ದೂರುಗಳು ಬಂದಿವೆ. ಉನ್ನತ ಮಟ್ಟದ ಎಮ್ಮ ‘ಮುನ್ಷಿಗಳು ಮತ್ತು ಹವಾಲ್ದಾರ್‌’ಗಳನ್ನು ಬದಲಾಯಿಸಲು ಡಿಪಿಜಿಯನ್ನು ಕೇಳಲಾಗಿದೆ ಎಂದು ಅವರು ಹೇಳಿದರು.

ಡ್ರಗ್ ಡೀಲರ್ ಸಿಕ್ಕಿಬಿದ್ದರೆ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಹೇಳಿದ ಮುಖ್ಯಮಂತ್ರಿ, ಇದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಆದೇಶ ನೀಡಲಾಗಿದೆ ಎಂದು ಹೇಳಿದರು.

“ಪಂಜಾಬ್‌ನಿಂದ ಮಾದಕ ವ್ಯಸನದ ಸಮಸ್ಯೆಯನ್ನು ತೊಡೆದುಹಾಕಲು ಪಂಜಾಬ್ ಪೊಲೀಸರಿಗೆ ಆದೇಶಗಳನ್ನು ನೀಡಲಾಗಿದೆ, ಇದನ್ನು ಒಂದು ಮಿಷನ್ ಆಗಿ ಮಾಡಲಾಗುತ್ತದೆ ಮತ್ತು ಯುದ್ಧದ ಆಧಾರದ ಮೇಲೆ ಕೆಲಸ ಮಾಡಲಾಗುತ್ತದೆ” ಎಂದು ಮಾನ್ ಹೇಳಿದರು.

ಸಾರ್ವಜನಿಕರಿಗೆ ಪಾರದರ್ಶಕ, ಸ್ಪಂದಿಸುವ ಮತ್ತು ಪರಿಣಾಮಕಾರಿ ಆಡಳಿತ ನೀಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಭಗವಂತ್ ಮಾನ್ ಹೇಳಿದರು.

ಇದನ್ನೂ ಓದಿ; ಇಸ್ರೇಲಿ ಪಡೆಗಳಿಂದ ರಾಫಾ ಮೇಲೆ ಆಕ್ರಮಣ; ನಿರಾಶ್ರಿತರ ಶಿಬಿರಗಳಲ್ಲಿ ತಂಗಿದ್ದ 17 ಜನರ ದುರ್ಮರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...