Homeಮುಖಪುಟಪಂಜಾಬ್ ಚುನಾವಣೆ ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ಮನವಿ

ಪಂಜಾಬ್ ಚುನಾವಣೆ ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ಮನವಿ

- Advertisement -
- Advertisement -

ಗುರು ರವಿದಾಸ್ ಜಯಂತಿಯ ಹಿನ್ನೆಲೆಯಲ್ಲಿ ಫೆಬ್ರವರಿ 14 ರಂದು ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯನ್ನು ಆರು ದಿನಗಳ ಕಾಲ ಮುಂದೂಡುವಂತೆ ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

ಪಂಜಾಬ್‌ನ 117 ವಿಧಾನಸಭಾ ಸ್ಥಾನಗಳಿಗೆ ಫೆಬ್ರವರಿ 14 ರಂದು ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ, ರಾಜ್ಯದ ಜನಸಂಖ್ಯೆಯ ಶೇಕಡಾ 32 ರಷ್ಟಿರುವ ಪರಿಶಿಷ್ಟ ಜಾತಿಗಳ ಸಮುದಾಯದ ಜನರು ಫೆಬ್ರವರಿ 16 ರಂದು ನಡೆಯಲಿರುವ ಗುರು ರವಿದಾಸ್ ಅವರ ಜನ್ಮದಿನದಲ್ಲಿ ಭಾಗಿಯಾಗಲಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: ಪಂಜಾಬ್‌‌ ಚುನಾವಣೆ-2022: ಕಾಂಗ್ರೆಸ್‌ನಿಂದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

“ಈ ಸಂದರ್ಭದಲ್ಲಿ, ರಾಜ್ಯದಿಂದ ಸುಮಾರು 20 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಪರಿಶಿಷ್ಟ ಜಾತಿ ಸಮುದಾಯದವರು ಫೆಬ್ರವರಿ 10 ರಿಂದ 16 ರವರೆಗೆ ಉತ್ತರ ಪ್ರದೇಶದ ಬನಾರಸ್‌ಗೆ ಭೇಟಿ ನೀಡುವ ಸಾಧ್ಯತೆಯಿದೆ. ಹೀಗಾಗಿ ಈ ಸಮುದಾಯದ ಅನೇಕ ಜನರು ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮತ ಚಲಾಯಿಸಲು ಸಾಧ್ಯವಾಗುವುದಿಲ್ಲ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

“ಫೆಬ್ರವರಿ 10 ರಿಂದ ಫೆಬ್ರವರಿ 16 ರವರೆಗೆ ಬನಾರಸ್‌ಗೆ ಭೇಟಿ ನೀಡಲು ಮತ್ತು ವಿಧಾನಸಭಾ ಚುನಾವಣೆಯಲ್ಲಿ ಭಾಗವಹಿಸಲು ಸಾಧ್ಯವಾಗುವ ರೀತಿಯಲ್ಲಿ ಮತದಾನದ ದಿನಾಂಕವನ್ನು ವಿಸ್ತರಿಸಬಹುದು” ಎಂದು ಮನವಿ ಮಾಡಿದ್ದಾರೆ.

2022 ರ ಪಂಜಾಬ್ ವಿಧಾನಸಭಾ ಚುನಾವಣೆಯ ಮತದಾನದ ದಿನವನ್ನು ಕನಿಷ್ಠ ಆರು ದಿನಗಳವರೆಗೆ ಮುಂದೂಡುವುದು ನ್ಯಾಯಸಮ್ಮತ ಮತ್ತು ಸೂಕ್ತವಾಗಿದೆ. ಸುಮಾರು 20 ಲಕ್ಷ ಜನರ ಮತದಾನ ಮಾಡುವ ಸಾಂವಿಧಾನಿಕ ಹಕ್ಕನ್ನು ಬಳಸಿಕೊಳ್ಳಲು ಅನುವು ಮಾಡಿಕೊಡಬೇಕು ಎಂದು ಚನ್ನಿ ಒತ್ತಾಯಿಸಿದ್ದಾರೆ.

ಇದಕ್ಕೂ ಮುನ್ನ ಬಹುಜನ ಸಮಾಜ ಪಕ್ಷದ ಪಂಜಾಬ್ ಮುಖ್ಯಸ್ಥ ಜಸ್ವೀರ್ ಸಿಂಗ್ ಗಾರ್ಹಿ ಕೂಡ ಚುನಾವಣೆಯನ್ನು ಫೆಬ್ರವರಿ 14 ರಿಂದ ಫೆಬ್ರವರಿ 20 ಕ್ಕೆ ಮರು ನಿಗದಿಪಡಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಕೋರಿದ್ದರು.


ಇದನ್ನೂ ಓದಿ: ಪಂಚರಾಜ್ಯ ಚುನಾವಣೆ: ಜನವರಿ 22 ವರೆಗೆ ರ್‍ಯಾಲಿ ಮತ್ತು ರೋಡ್‌ಶೋಗಳು ನಿಷೇಧ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...