Homeಮುಖಪುಟಅತಿ ಹೆಚ್ಚು ಅಂಕ ಗಳಿಸಿದ 12 ನೇ ತರಗತಿ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಘೋಷಿಸಿದ ಪಂಜಾಬ್...

ಅತಿ ಹೆಚ್ಚು ಅಂಕ ಗಳಿಸಿದ 12 ನೇ ತರಗತಿ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಘೋಷಿಸಿದ ಪಂಜಾಬ್ ಸಿಎಂ!

- Advertisement -
- Advertisement -

12ನೇ ತರಗತಿ ಪರೀಕ್ಷೆಯಲ್ಲಿ ಶೇಕಡಾ 98 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಲಾ 5,100 ರೂ ನಗದು ಬಹುಮಾನ ನೀಡುವುದಾಗಿ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಘೋಷಿಸಿದ್ದಾರೆ.

ತಮ್ಮ ವಾರದ ಸಾಮಾಜಿಕ ಜಾಲತಾಣ ಸಂವಾದ ಕಾರ್ಯಕ್ರಮ ‘#AskCaptain’ ನಲ್ಲಿ ಮಾತನಾಡಿದ ಅವರು ಈ ಘೋಷಣೆ ಮಾಡಿದ್ದಾರೆ.

ಈ ವರ್ಷದ ಪಂಜಾಬ್ ಬೋರ್ಡ್ 12 ನೇ ತರಗತಿ ಪರೀಕ್ಷೆಯಲ್ಲಿ ಶೇ 98 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ 335 ವಿದ್ಯಾರ್ಥಿಗಳಿಗೆ ತಲಾ 5,100 ರೂ ನಗದು ಬಹುಮಾನ ನೀಡುವುದಾಗಿ ತಿಳಿಸಿದ್ದಾರೆ.

ರಾಜ್ಯವು 12ನೇ ತರಗತಿ ಪರೀಕ್ಷೆಯಲ್ಲಿ ಈಭಾರಿ ಅಭೂತಪೂರ್ವ ಶೇಕಡಾ 94.32 ಉತ್ತೀರ್ಣ ಸಾಧಿಸಿದೆ. ಇದಕ್ಕೆ ಕಾರಣರಾದ ಸರ್ಕಾರಿ ಶಾಲಾ ಶಿಕ್ಷಕರ ಶ್ರಮಕ್ಕೆ ಅಭಿನಂದನೆ ತಿಳಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ರಾಜ್ಯ ಸರ್ಕಾರವು ದಕ್ಷ ಶಿಕ್ಷಕರನ್ನು ನೇಮಕ ಮಾಡಿಕೊಂಡಿದೆ ಮತ್ತು ಸರ್ಕಾರಿ ಶಾಲೆಗಳನ್ನು ಸ್ಮಾರ್ಟ್ ಶಾಲೆಗಳಾಗಿ ಉನ್ನತೀಕರಣ ಮಾಡುವಾಗ ಸರಿಯಾದ ಹಾಜರಾತಿಯನ್ನು ಖಾತರಿಪಡಿಸಿದೆ ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಇದೇ ಸಮಯದಲ್ಲಿ ರಾಜ್ಯ ಸರ್ಕಾರಿ ಶಾಲೆಗಳು ಈ ವರ್ಷ ವಿದ್ಯಾರ್ಥಿಗಳಿಂದ ಪ್ರವೇಶ ಶುಲ್ಕ, ಮರು ಪ್ರವೇಶ ಶುಲ್ಕ ಮತ್ತು ಬೋಧನಾ ಶುಲ್ಕವನ್ನು ಪಡೆಯುವುದಿಲ್ಲ ಎಂದು ಪಂಜಾಬ್ ಸಿಎಂ ಪ್ರಕಟಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಲಾಕ್‍ಡೌನ್ ಎದುರಾಗಿ ಆನ್‍ಲೈನ್ ಶಿಕ್ಷಣದ ಅಪಾಯ ಮತ್ತು ಸಮಸ್ಯೆಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ರೇವಣ್ಣ ಸಹಚರ ಸತೀಶ್ ಬಾಬಣ್ಣಗೆ ನ್ಯಾಯಾಂಗ ಬಂಧನ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾದ ಬೆನ್ನಲ್ಲಿ ಮೈಸೂರಿನಲ್ಲಿ ಮಹಿಳೆಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಎರಡನೇ ಆರೋಪಿ ಸತೀಶ್ ಬಾಬಣ್ಣ ಬಂಧನವಾಗಿದ್ದು, ಅವರನ್ನು ನ್ಯಾಯಾಲಯ 14...