Homeಮುಖಪುಟಗುರುದ್ವಾರ: ನಿಹಾಂಗ್ ಸಿಖ್ಖರ ನಡುವೆ ಘರ್ಷಣೆ; ಪೇದೆಯನ್ನು ಗುಂಡಿಟ್ಟು ಹತ್ಯೆ

ಗುರುದ್ವಾರ: ನಿಹಾಂಗ್ ಸಿಖ್ಖರ ನಡುವೆ ಘರ್ಷಣೆ; ಪೇದೆಯನ್ನು ಗುಂಡಿಟ್ಟು ಹತ್ಯೆ

- Advertisement -
- Advertisement -

ಪಂಜಾಬ್‌ನ ಸುಲ್ತಾನ್‌ಪುರ್ ಲೋಧಿಯ ಕಪುರ್ತಲಾದಲ್ಲಿರುವ ಗುರುದ್ವಾರ ಅಕಾಲ್ ಬುಂಗಾದಲ್ಲಿ ನಿಹಾಂಗ್ ಸಿಖ್ಖರು ಮತ್ತು ಪೊಲೀಸ್ ಅಧಿಕಾರಿಗಳ ನಡುವೆ ಘರ್ಷಣೆ ಸಂಭವಿಸಿದೆ. ಘಟನೆಯಲ್ಲಿ ಪೊಲೀಸ್ ಪೇದೆಯೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಪೊಲೀಸರಿಗೆ ಗಾಯಗಳಾಗಿವೆ.

ಮೃತ ಪೇದೆಯನ್ನು ಜಸ್ಪಾಲ್ ಸಿಂಗ್ ಎಂದು ಗುರುತಿಸಲಾಗಿದೆ. ಘರ್ಷಣೆಯ ವೇಳೆ ಗಾಯಗೊಂಡ ಪೊಲೀಸ್ ಸಿಬ್ಬಂದಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಕುರಿತ ವೀಡಿಯೊವನ್ನು ಎಎನ್‌ಐ ಸುದ್ದಿ ಸಂಸ್ಥೆ ಹಂಚಿಕೊಂಡಿದೆ.

ಗುರುದ್ವಾರದ ಮಾಲೀಕತ್ವದ ಕುರಿತು 2 ನಿಹಾಂಗ್ ಗುಂಪುಗಳ ನಡುವೆ ವಿವಾದ ನಡೆಯುತ್ತಿತ್ತು. ಮುಖ್ಯ ಗುರುದ್ವಾರ ಬರ್ ಸಾಹಿಬ್ ಎದುರು ಇರುವ ಗುರುದ್ವಾರ ಅಕಾಲ್ ಬುಂಗಾದ ಮಾಲಕತ್ವಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆ ಪೊಲೀಸರು ಗುರುದ್ವಾರ ಸಂಕೀರ್ಣವನ್ನು ಖಾಲಿ ಮಾಡಲು ಹೋಗಿದ್ದರು.

ನಿಹಾಂಗ್‌ಗಳ 2 ಗುಂಪುಗಳ ನಡುವೆ 3 ದಿನಗಳ ಹಿಂದೆ ಸಂಘರ್ಷ ಪ್ರಾರಂಭವಾಯಿತು ಆದರೆ ಗುರುವಾರ ಬೆಳಿಗ್ಗೆ ಅದು ಹೆಚ್ಚು ಉಲ್ಬಣಗೊಂಡಿತ್ತು. ಮನ್ ಸಿಂಗ್ ನೇತೃತ್ವದ ನಿಹಾಂಗ್ ಗುಂಪಿಗೆ ಗುರುದ್ವಾರದ ಆವರಣವನ್ನು ಖಾಲಿ ಮಾಡಲು ಪೊಲೀಸರು ಸೂಚಿಸಿದ್ದಾರೆ. ಈ ವೇಳೆ ಗ್ಯಾಂಗ್‌ನ ಸದಸ್ಯರು ಪೊಲೀಸ್ ತಂಡದ ಮೇಲೆ ಮನಬಂದಂತೆ ಫೈರಿಂಗ್‌ ಮಾಡಿದ್ದಾರೆ. ಗುಂಡಿನ ಚಕಮಕಿಯಲ್ಲಿ ಓರ್ವ ಪೋಲೀಸ್‌ ಪೇದೆ ಮೃತಪಟ್ಟಿದ್ದಾರೆ. ಮೂವರು ಪೊಲೀಸರು ಗಾಯಗೊಂಡಿದ್ದಾರೆ.

ಬಾಬಾ ಬುದ್ಧ ದಳದ ಮುಖ್ಯಸ್ಥ ಬಾಬಾ ಬಲ್ವೀರ್ ಸಿಂಗ್ ಗುರುದ್ವಾರದ ಮುಂಭಾಗವನ್ನು ಆಕ್ರಮಿಸಿಕೊಂಡಿದ್ದರು. ಅಲ್ಲಿ ಅವರ ಸಹಾಯಕರಾದ ನಿರ್ವೈರ್ ಸಿಂಗ್ ಮತ್ತು ಜಗಜಿತ್ ಸಿಂಗ್ ಕುಳಿತಿದ್ದರು. ನ.21,2023ರಂದು ಬಾಬಾ ಬುದ್ಧ ದಳದ 2ನೇ ಬಣದ ಮುಖ್ಯಸ್ಥ ಬಾಬಾ ಮಾನ್ ಸಿಂಗ್ ವಾಲ್ಲೋ ಮತ್ತು ಇತರ 15-20 ಸಹಚರರು ಗುರುದ್ವಾರಕ್ಕೆ ಬಲವಂತವಾಗಿ ಪ್ರವೇಶಿಸಿದ್ದಾರೆ.

ಗುರುದ್ವಾರವನ್ನು ಪ್ರವೇಶಿಸಿದ ನಂತರ ಬಾಬಾ ಮಾನ್ ಸಿಂಗ್ ನೇತೃತ್ವದ ಗುಂಪು ನಿರ್ವೈರ್ ಸಿಂಗ್ ಅವರನ್ನು ಹಗ್ಗದಿಂದ ಕಟ್ಟಿಹಾಕಿದ್ದಾರೆ ಮತ್ತು ಜಗಜಿತ್ ಸಿಂಗ್ ಮೇಲೆ ಆಯುಧದಿಂದ ದಾಳಿ ಮಾಡಿದ್ದಾರೆ. ಭಾರೀ ಶಸ್ತ್ರಸಜ್ಜಿತರಾದ ನಿಹಾಂಗ್‌ಗಳು ಗುರುದ್ವಾರವನ್ನು ಒಳಗಿನಿಂದ ಲಾಕ್ ಮಾಡಿದ್ದಾರೆ.

ಈ ವೇಳೆ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿ ಗುರುದ್ವಾರ ಸಂಕೀರ್ಣವನ್ನು ಖಾಲಿ ಮಾಡಲು ಹೋಗಿದ್ದು ಈ ವೇಳೆ ಗುಂಡಿನ ದಾಳಿ ನಡೆಸಲಾಗಿದೆ. ಘಟನೆಗೆ ಸಂಬಂಧಿಸಿ ಈವರೆಗೆ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನು ಓದಿ; ಭಾರತದ ವಿರುದ್ಧ ಅಮೆರಿಕದಲ್ಲಿ ಸಿಖ್‌ ಪ್ರತ್ಯೇಕತಾವಾದಿ ನಾಯಕನ ಹತ್ಯೆಗೆ ಸಂಚು ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರದ ಅಧಿಕೃತ ದಾಖಲೆಗಳಲ್ಲಿ ‘ಹರಿಜನ-ಗಿರಿಜನ’ ಪದಗಳನ್ನು ನಿಷೇಧಿಸಿದ ಹರಿಯಾಣ ಸರ್ಕಾರ

ಹರಿಯಾಣ ಸರ್ಕಾರವು ತನ್ನ ಎಲ್ಲಾ ಅಧಿಕೃತ ಸಂವಹನಗಳಲ್ಲಿ 'ಹರಿಜನ' ಮತ್ತು 'ಗಿರಿಜನ' ಪದಗಳ ಬಳಕೆಯನ್ನು ನಿಷೇಧಿಸಿದೆ. ಇಲಾಖೆಗಳು 'ಪರಿಶಿಷ್ಟ ಜಾತಿ (ಎಸ್‌ಸಿ)' ಮತ್ತು 'ಪರಿಶಿಷ್ಟ ಪಂಗಡ (ಎಸ್‌ಟಿ)' ಅಥವಾ ಅವುಗಳ ಸಮಾನ ಪದಗಳನ್ನು...

ಐಎಎಸ್ ಅಧಿಕಾರಿ ಮಾನನಷ್ಟ ಮೊಕದ್ದಮೆ ಪ್ರಕರಣ: ಎನ್‌ಟಿವಿ ಸಂಪಾದಕ, ಇಬ್ಬರು ಪತ್ರಕರ್ತರ ಬಂಧನ

ತೆಲಂಗಾಣ ಸರ್ಕಾರದ ರಸ್ತೆ ಮತ್ತು ಕಟ್ಟಡಗಳ ಸಚಿವ ಕೋಮತಿರೆಡ್ಡಿ ವೆಂಕಟ್ ರೆಡ್ಡಿ ಹಾಗೂ ಮಹಿಳಾ ಐಎಎಸ್ ಅಧಿಕಾರಿ ಅವರ ಕುರಿತು ವಿವಾದಾತ್ಮಕ ಸುದ್ದಿ ವರದಿಗೆ ಸಂಬಂಧಿಸಿದಂತೆ, ಹೈದರಾಬಾದ್ ಕೇಂದ್ರ ಅಪರಾಧ ಠಾಣೆ...

ಇರಾನ್: ಪ್ರತಿಭಟನಾಕಾರರ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವಿನ ಸಂಖ್ಯೆ 2571ಕ್ಕೆ ಏರಿಕೆ 

ಇರಾನ್‌ನಲ್ಲಿ ಪ್ರತಿಭಟನೆಗಳ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕನಿಷ್ಠ 2,571 ಕ್ಕೆ ಏರಿದೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತರು ಬುಧವಾರ ತಿಳಿಸಿದ್ದಾರೆ. ಈ ಅಂಕಿ ಅಂಶವು ಅಮೆರಿಕ ಮೂಲದ ಮಾನವ ಹಕ್ಕುಗಳ...

ಕಾಂಗ್ರೆಸ್‌ ಮುಖಂಡನ ಗೂಂಡಾವರ್ತನೆ : ಫ್ಲೆಕ್ಸ್‌ ತೆರವುಗೊಳಿಸಿದ್ದಕ್ಕೆ ಪೌರಾಯುಕ್ತೆಗೆ ಧಮ್ಕಿ, ಅವಾಚ್ಯ ಶಬ್ದಗಳಿಂದ ನಿಂದನೆ

ಸಚಿವ ಝಮೀರ್ ಅಹ್ಮದ್ ಅವರ ಮಗ ಝೈದ್ ಖಾನ್ ನಟನೆಯ 'ಕಲ್ಟ್' ಸಿನಿಮಾದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ ವಿಚಾರವಾಗಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ. ಅಮೃತಗೌಡ ಅವರೊಂದಿಗೆ ಗೂಂಡಾವರ್ತನೆ...

ಹಿಂದಿ ಶೈಕ್ಷಣಿಕ ಪದ್ಧತಿ ಹೇರಿಕೆಯಿಂದ ಉತ್ತರದ ಜನರಿಂದ ದಕ್ಷಿಣಕ್ಕೆ ವಲಸೆ: ಮಾರನ್

ಇಂಗ್ಲಿಷ್ ಶಿಕ್ಷಣವನ್ನು ನಿರುತ್ಸಾಹಗೊಳಿಸುತ್ತಾ, ವಿದ್ಯಾರ್ಥಿಗಳು ಹಿಂದಿ ಮಾತ್ರ ಕಲಿಯಲು ಪ್ರೋತ್ಸಾಹಿಸುತ್ತಿದ್ದಾರೆ. ಉತ್ತರ ರಾಜ್ಯಗಳ ಈ ನೀತಿಗಳಿಂದ ಉದ್ಯೋಗ ಸಿಗದೆ ದಕ್ಷಿಣದ ರಾಜ್ಯಗಳಿಗೆ ವಲಸೆ ಬರುತ್ತಿದ್ದಾರೆ ಎಂದು ಡಿಎಂಕೆ ಸಂಸದ ದಯಾನಿಧಿ ಮಾರನ್ ಉತ್ತರ...

ಚಿಕ್ಕಮಗಳೂರು| ದಲಿತರ ಜಮೀನಿಗೆ ನುಗ್ಗಿ ಬೆಳೆ ನಾಶ; ಪ್ರಬಲ ಜಾತಿ ಜನರಿಂದ ವಿನಾಕಾರಣ ತೊಂದರೆ

ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹೋಬಳಿಯ ಸತ್ತಿಹಳ್ಳಿ ಗ್ರಾಮದ ದಲಿತ ಸಮುದಾಯದ ರೈತರಿಗೆ ಅದೇ ಊರಿನ ಪ್ರಬಲ ಜಾತಿಗೆ ಸೇರಿದ ಜನರು ವಿನಾಕಾರಣ ತೊಂದರೆ ನಿಡುತ್ತಿದ್ದು, ಜಮೀನಿಗೆ ನುಗ್ಗಿ ಬೆಳೆ ನಾಶ ಮಾಡಿದ್ದಾರೆ ಎಂಬ...

ಎಲ್‌ಡಿಎಫ್‌ನ ‘ಕೇರಳಂ’ ಮರುನಾಮಕರಣ ಕ್ರಮ ಬೆಂಬಲಿಸಿದ ರಾಜ್ಯ ಬಿಜೆಪಿ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಮನವಿ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೇರಳ ಘಟಕವು, ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್‌) ಸರ್ಕಾರದ 'ಕೇರಳಂ' ಮರುನಾಕರಣ ಪ್ರಸ್ತಾವನೆಯನ್ನು ಬೆಂಬಲಿಸಿದೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮಧ್ಯಸ್ಥಿಕೆ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಲ್ಲಿ...

ರಾಯಚೂರು ಕೃಷಿ ವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ತಡೆಗೆ ಸಂಚು ಆರೋಪ: ನಿಗದಿತ ದಿನಾಂಕದಂದು ಪರೀಕ್ಷೆ ನಡೆಸಲು ಒತ್ತಾಯ 

ಬೆಂಗಳೂರು: ರಾಯಚೂರು ಕೃಷಿ ವಿವಿಯಲ್ಲಿನ 75 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ನಿಗದಿತ ದಿನಾಂಕಗಳಾದ ಜನವರಿ.17 ಮತ್ತು ಜನವರಿ.18ರಂದೇ ನಡೆಸಬೇಕು. ಪಟ್ಟಭದ್ರ ಹಿತಾಸಕ್ತಿಗಳ ಒತ್ತಾಯಕ್ಕೆ ಮಣಿದು ಪರೀಕ್ಷೆಯನ್ನು ಮುಂದೂಡಬಾರದು ಎಂದು ಅಭ್ಯರ್ಥಿಗಳು...

ಸಂಭಾಲ್ ಹಿಂಸಾಚಾರ ಪ್ರಕರಣ : ಹಿರಿಯ ಅಧಿಕಾರಿಗಳು ಸೇರಿ 12 ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

2024ರ ನವೆಂಬರ್‌ನಲ್ಲಿ ಶಾಹಿ ಜಾಮಾ ಮಸೀದಿ ಬಳಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಪಾತ್ರವಿದೆ ಎಂಬ ಆರೋಪದ ಮೇಲೆ ಹಿರಿಯ ಅಧಿಕಾರಿಗಳು ಸೇರಿದಂತೆ 12 ಪೊಲೀಸ್ ಸಿಬ್ಬಂದಿಯ ವಿರುದ್ಧ ಕ್ರಿಮಿನಲ್...

ಪಿಎಂ ಕೇರ್ಸ್ ನಿಧಿಗೆ ಆರ್‌ಟಿಐ ಕಾಯ್ದೆಯಡಿ ಗೌಪ್ಯತೆಯ ಹಕ್ಕಿದೆ : ದೆಹಲಿ ಹೈಕೋರ್ಟ್

ಪಿಎಂ ಕೇರ್ಸ್ ನಿಧಿಯು ಕಾನೂನು ಅಥವಾ ಸರ್ಕಾರಿ ಘಟಕವಾಗಿದ್ದರೂ, ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಗೌಪ್ಯತೆಯ ಹಕ್ಕನ್ನು ನಿರಾಕರಿಸಲಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಮಂಗಳವಾರ (ಜ.13) ಮೌಖಿಕವಾಗಿ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಮತ್ತು...