Homeಮುಖಪುಟಪಂಜಾಬ್‌: ಪೊಲೀಸ್ ಪೇದೆಯನ್ನು ಥಳಿಸಿ ಕೊಲೆ

ಪಂಜಾಬ್‌: ಪೊಲೀಸ್ ಪೇದೆಯನ್ನು ಥಳಿಸಿ ಕೊಲೆ

- Advertisement -
- Advertisement -

ಜಗಳ ನಿಯಂತ್ರಿಸಲು ಹೋದ ಕರ್ತವ್ಯ ನಿರತ ಪೊಲೀಸ್ ಪೇದೆಯನ್ನೇ ಹೊಡೆದು ಮಹಡಿಯಿಂದ ತಳ್ಳಿ ಕೊಲೆ ಮಾಡಿದ ಆಘಾತಕಾರಿ ಘಟನೆ ಪಂಜಾಬ್‌ನ ಬರ್ನಾಲಾದಲ್ಲಿ ನಡೆದಿದೆ.

ಹೆಡ್ ಕಾನ್‌ಸ್ಟೆಬಲ್ ದರ್ಶನ್ ಸಿಂಗ್ ಮೃತರು. ಇವರು ಸಿಂಗ್ ಸಿಟಿ 1 ಪೊಲೀಸ್ ಠಾಣೆಯಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದರು.

ಬರ್ನಾಲಾದ ರೆಸ್ಟೋರೆಂಟ್‌ವೊಂದರಲ್ಲಿ ಆಹಾರ ಮತ್ತು ಮದ್ಯಪಾನ ಮಾಡಿದ ಬಿಲ್‌ಗಾಗಿ ರೆಸ್ಟೋರೆಂಟ್‌ನ ಮಾಲಕರು ಮತ್ತು ನಾಲ್ವರು ಕಬಡ್ಡಿ ಆಟಗಾರರ ನಡುವೆ ಜಗಳ ನಡೆದಿದೆ.

ಕಬಡ್ಡಿ ಆಟಗಾರರು ಬಿಲ್ ಪಾವತಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ರೆಸ್ಟೋರೆಂಟ್ ಮಾಲಕರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ವೇಳೆ ತೆರಳಿದ್ದ ಪೊಲೀಸ್‌ ತಂಡದಲ್ಲಿ ಹೆಡ್ ಕಾನ್‌ಸ್ಟೆಬಲ್ ದರ್ಶನ್ ಸಿಂಗ್ ಇದ್ದರು. ಪೋಲೀಸ್ ತಂಡವು ರೆಸ್ಟೋರೆಂಟ್‌ಗೆ ತೆರಳಿ ನಾಲ್ವರು ಕಬಡ್ಡಿ ಆಟಗಾರರನ್ನು ಕರೆದುಕೊಂಡು ಹೋಗುತ್ತಿದ್ದಾಗ ಅವರು ಸಿಂಗ್ ಮೇಲೆ ಹಲ್ಲೆ ನಡೆಸಿದ್ದಾರೆ.

ಈ ಕುರಿತು ಪ್ರತ್ಯಕ್ಷದರ್ಶಿ ಸರಬ್ಜಿತ್ ಸಿಂಗ್ ಮಾಹಿತಿ ನೀಡಿದ್ದು, ರಾತ್ರಿ ರೆಸ್ಟೋರೆಂಟ್‌ನಲ್ಲಿ ನಾಲ್ವರು ಕಬಡ್ಡಿ ಆಟಗಾರರು ಮದ್ಯ ಸೇವಿಸಿದ್ದಾರೆ. ನಂತರ ಅವರು ಬಿಲ್ ಪಾವತಿಸಲು ನಿರಾಕರಿಸಿದ್ದು, ಈ ವೇಳೆ ವಾಗ್ವಾದ ನಡೆದಿದೆ. ಈ ಬಗ್ಗೆ ರೆಸ್ಟೋರೆಂಟ್ ಮಾಲಕರು ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ತೆರಳಿದ ದರ್ಶನ್‌ ಸಿಂಗ್ ಮತ್ತು ಇತರ ಪೊಲೀಸ್ ಸಿಬ್ಬಂದಿ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸಿದ್ದಾರೆ.

ಆದರೆ ಕಬಡ್ಡಿ ಆಟಗಾರರು ಪೊಲೀಸರ ಮಾತಿಗೆ ಸ್ಪಂದಿಸಲು ನಿರಾಕರಿಸಿದ್ದಾರೆ.  ಪೊಲೀಸರು ಕಬಡ್ಡಿ ಆಟಗಾರರನ್ನು ಪೊಲೀಸ್ ವಾಹನಕ್ಕೆ ಏರಲು ಹೇಳಿದ್ದಾರೆ. ಈ ವೇಳೆ ಆರೋಪಿಗಳು ಸಿಂಗ್ ಮೇಲೆ ಹಲ್ಲೆ ನಡೆಸಿ ಮಹಡಿಯಿಂದ ತಳ್ಳಿದ್ದಾರೆ. ಮಹಿಡಿಯಿಂದ ಬಿದ್ದು ಪೇದೆ ಸಿಂಗ್‌ ತಲೆಗೆ ಗಂಭೀರವಾಗಿ ಗಾಯವಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.

ಇದಲ್ಲದೆ ಆರೋಪಿಗಳು ರೆಸ್ಟೋರೆಂಟ್‌ನ್ನು ಧ್ವಂಸಗೊಳಿಸಿ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಅರೋಪಿಸಲಾಗಿದೆ.

ಇದನ್ನು ಓದಿ: ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನಮಾಝ್ ಮಾಡಲು ಅವಕಾಶ ಕೊಟ್ಟ ಮುಖ್ಯ ಶಿಕ್ಷಕಿ ಅಮಾನತು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...