Homeಮುಖಪುಟಪಂಜಾಬ್ ಕೋರ್ಟ್ ಸ್ಪೋಟ ಪ್ರಕರಣಕ್ಕೆ ತಿರುವು: ಮೃತಪಟ್ಟ ಮಾಜಿ ಪೊಲೀಸ್ ಆರೋಪಿ!

ಪಂಜಾಬ್ ಕೋರ್ಟ್ ಸ್ಪೋಟ ಪ್ರಕರಣಕ್ಕೆ ತಿರುವು: ಮೃತಪಟ್ಟ ಮಾಜಿ ಪೊಲೀಸ್ ಆರೋಪಿ!

- Advertisement -
- Advertisement -

ಪಂಜಾಬ್‌ನ ಲೂಧಿಯಾನ ಕೋರ್ಟ್ ಕಾಂಪ್ಲೆಕ್ಸ್‌ನಲ್ಲಿ ಗುರುವಾರ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಮಾಜಿ ಪೊಲೀಸ್ ಒಬ್ಬ ಬಾಂಬ್ ಸ್ಪೋಟಿಸಿದ್ದು, ಅದರಲ್ಲಿ ಅತನು ಸಾವಿಗೀಡಾಗಿದ್ದಾನೆ. ಆತನ ವಿರುದ್ಧವಿದ್ದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ನಾಶಪಡಿಸುವುದಕ್ಕಾಗಿ ಈ ಕೃತ್ಯ ಎಸಗಿದ್ದಾನೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಸ್ಫೋಟದಲ್ಲಿ ಪಾಕಿಸ್ತಾನ, ಖಲಿಸ್ತಾನಿಗಳ ಕೈವಾಡವಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಅವೆಲ್ಲವೂ ಸುಳ್ಳು ಎಂದು ಸಾಬೀತಾಗಿದ್ದು, ಸ್ಪೋಟದಲ್ಲಿ ಮೃತಪಟ್ಟ ಶಂಕಿತನನ್ನು ಗಗನ್‌ದೀಪ್ ಸಿಂಗ್ ಎಂದು ಗುರುತಿಸಲಾಗಿದೆ. ಹೆಡ್ ಕಾನ್ಸ್ಟೇಬಲ್ ಆಗಿದ್ದ ಆತ ಡ್ರಗ್ಸ್ ಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಬಿದ್ದು ಹುದ್ದೆಯಿಂದ ವಜಾಗೊಳಿಸಿದ್ದಲ್ಲದೆ 2019ರಲ್ಲಿ ಎರಡು ವರ್ಷ ಜೈಲು ಶಿಕ್ಷೆ ನೀಡಲಾಗಿತ್ತು.

ಇದೇ ಸೆಪ್ಟಂಬರ್‌ನಲ್ಲಿ ಜೈಲಿನಿಂದ ಹೊರಬಂದಿದ್ದ ಆತ ತನ್ನ ವಿರುದ್ಧದ ದಾಖಲೆಗಳನ್ನು ನಾಶಪಡಿಸುವ ಉದ್ದೇಶದಿಂದ ದಾಖಲೆಗಳನ್ನು ಸಂಗ್ರಹಿಸಿದ್ದ ಕೋರ್ಟ್ ರೂಂ ಸ್ಪೋಟಿಸುವ ಉದ್ದೇಶ ಹೊಂದಿದ್ದ ಎನ್ನಲಾಗಿದೆ. ಅದಕ್ಕಾಗಿ ಪದೇ ಪದೇ ಶೌಚಾಲಯಕ್ಕೆ ಭೇಟಿ ನೀಡುತ್ತಿದ್ದ ಎನ್ನಲಾಗಿದೆ.

ಸ್ಪೋಟದ ಸಮಯದಲ್ಲಿ ನೀರಿನ ಪೈಪ್‌ಗಳು ಒಡೆದು ಚೆಲ್ಲಾಪಿಲ್ಲಿಯಾಗಿ ಆತನೂ ಸಾವಿಗೀಡಾಗಿದ್ದಾನೆ ಎನ್ನಲಾಗಿದೆ. ಅಲ್ಲಿ ವಶಪಡಿಸಿಕೊಂಡ ಸಿಮ್ ಕಾರ್ಡ್ ಮತ್ತು ಡಾಂಗಲ್ ಸಹಾಯದಿಂದ ಆತನ ಗುರುತು ಪತ್ತೆ ಹಚ್ಚಲಾಗಿದ್ದು, ಆತನ ಸಂಬಂಧಿಕರು ಕೂಡ ಗುರುತಿಸಿದ್ದಾರೆ ಎನ್ನಲಾಗಿದೆ. ಸ್ಪೋಟಕ್ಕೆ ಬೇಕಾದ ಕಚ್ಛಾ ವಸ್ತುಗಳನ್ನು ಎಲ್ಲಿಂದ ತರಲಾಗಿದೆ ಎಂಬುದರ ಬಗ್ಗೆ ತನಿಕೆ ನಡೆಯುತ್ತಿದೆ.

ಗುರುವಾರ ಮಧ್ಯಾಹ್ನ 12.22ರ ಸಮಯದಲ್ಲಿ ಕಟ್ಟಡದ ಎರಡನೇ ಮಹಡಿಯ ಶೌಚಾಲಯದಲ್ಲಿ ಸ್ಪೋಟ ಸಂಭವಿಸಿದೆ. ಸ್ಪೋಟದ ತೀವ್ರತೆಯಿಂದಾಗಿ ಶೌಚಾಲಯದ ಗೋಡೆಗಳು ಕುಸಿದಿದ್ದು, ಅಕ್ಕಪಕ್ಕದ ಕಿಟಕಿಗಳು ಪುಡಿ ಪುಡಿಯಾಗಿವೆ.


ಇದನ್ನೂ ಓದಿ: ‘ನೀವು ಬಿಜೆಪಿ ಏಜೆಂಟಾ?’- ಕನ್ಹಯ್ಯ ಪ್ರಶ್ನೆಗಳಿಗೆ ಪತ್ರಕರ್ತ ತಬ್ಬಿಬ್ಬು; ಕ್ಷಮೆಯಾಚಿಸಿದ ವರದಿಗಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ಸರ್ಕಾರ 5ಜಿ ಮೆಗಾ ಹಗರಣವನ್ನು ರೂಪಿಸುತ್ತಿದೆ: ಎಎಪಿ ಮುಖಂಡ ಸಂಜಯ್ ಸಿಂಗ್

0
2ಜಿ ಸ್ಪೆಕ್ಟ್ರಮ್ ಪ್ರಕರಣದಲ್ಲಿ 2012ರ ತೀರ್ಪನ್ನು ಮಾರ್ಪಾಡು ಮಾಡುವಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ ನಂತರ ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ಸಂಜಯ್ ಸಿಂಗ್ ಅವರು ಪ್ರಧಾನಿ ನರೇಂದ್ರ...