Homeಚಳವಳಿಪಂಜಾಬ್: ಬಿಜೆಪಿ ಮುಖಂಡನ ಮನೆಮುಂದೆ ಸಗಣಿ ಸುರಿದ ರೈತ ಹೋರಾಟಗಾರರು!

ಪಂಜಾಬ್: ಬಿಜೆಪಿ ಮುಖಂಡನ ಮನೆಮುಂದೆ ಸಗಣಿ ಸುರಿದ ರೈತ ಹೋರಾಟಗಾರರು!

ಯಾವುದೇ ವ್ಯಕ್ತಿಗಳ ಖಾಸಗಿತನವನ್ನು ಉಲ್ಲಂಘಿಸುವುದು ಇದುವರೆಗೆ ಶಾಂತಿಯುತವಾಗಿ ನಡೆದ ರೈತರ ಪ್ರತಿಭಟನೆಗೆ ಕೆಟ್ಟ ಹೆಸರು ತರುತ್ತದೆ ಹಾಗೂ ಮೂಲ ಉದ್ದೇಶವನ್ನೇ ಸೋಲಿಸಿದಂತಾಗುತ್ತದೆ- ಮುಖ್ಯಮಂತ್ರಿ ಅಮರೀಂದರ್ ಸಿಂಗ್

- Advertisement -
- Advertisement -

ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು, ಪಂಜಾಬ್‌ನ ಬಿಜೆಪಿ ಮುಖಂಡನ ಮನೆ ಮುಂದೆ ಒಂದು ಟ್ರ್ಯಾಕ್ಟರ್‌ ಸಗಣಿ ಸುರಿದು ಪ್ರತಿಭಟಿಸಿದ್ದಾರೆ ಎಂದು ಆರೋಪಿಸಲಾಗಿದೆ.

ರೈತರು ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ಹೊಶಿಯಾರ್‌ಪುರದಲ್ಲಿ ಬಿಜೆಪಿ ಮುಖಂಡ ಹಾಗೂ ಪಂಜಾಬ್‌ನ ಮಾಜಿ ಸಚಿವ ಟಿಕ್‌ಶಾನ್ ಸೂದ್ ಮನೆಯ ಮುಂದೆ ಪ್ರತಿಭಟನೆ ನಡೆಸಿದ್ದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಹರಿಯಾಣದ ಎಲ್ಲಾ ಪೆಟ್ರೋಲ್ ಪಂಪ್‌ ಮುಚ್ಚುವ ದಿನಾಂಕ ಘೋಷಿಸುತ್ತೇವೆಂದು ಎಚ್ಚರಿಕೆ!

ಪ್ರತಿಭಟನೆಯ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ನಂತರ ಪ್ರತಿಭಟನೆ ಮಾಡುತ್ತಿದ್ದವರಲ್ಲಿ ಕೆಲವರು ಸಗಣಿ ತಂದು ಬಿಜೆಪಿ ಮುಖಂಡನ ಮನೆ ಮುಂದೆ ಸುರಿದರು ಎನ್ನಲಾಗಿದೆ. ನಂತರ ಪೊಲೀಸರು ಮಧ್ಯಪ್ರವೇಶಿಸಿ, ಪ್ರತಿಭಟನಾಕಾರರು ಮತ್ತು ಬಿಜೆಪಿ ಮುಖಂಡನ ಬೆಂಬಲಿಗರ ನಡುವಿನ ಘರ್ಷಣೆಯನ್ನು ತಡೆಯಬೇಕಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.

ಮನೆಯ ಮುಂದೆ ಸಗಣಿ ಎಸೆದ ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ ಮುಖಂಡ ಧರಣಿ ನಡೆಸಿದರು.

ಇದನ್ನೂ ಓದಿ: ತಮಿಳುನಾಡು: ಕೃಷಿ ಕಾನೂನು ವಿರುದ್ಧ ವಿಶೇಷ ಅಧಿವೇಶನ ಕರೆಯುವಂತೆ ’ಸ್ಟಾಲಿನ್’ ಪತ್ರ

ಪ್ರತಿಭಟನಾಕಾರರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ಸಂದೇಶ ರವಾನಿಸಿರುವ ಮುಖ್ಯಮಂತ್ರಿ ಅಮರೀಂದರ್ ಸಿಂಗ್, “ಯಾವುದೇ ವ್ಯಕ್ತಿಗಳ ಖಾಸಗಿತನವನ್ನು ಉಲ್ಲಂಘಿಸುವುದು ಇದುವರೆಗೆ ಶಾಂತಿಯುತವಾಗಿ ನಡೆದ ರೈತರ ಪ್ರತಿಭಟನೆಗೆ ಕೆಟ್ಟ ಹೆಸರು ತರುತ್ತದೆ ಹಾಗೂ ಮೂಲ ಉದ್ದೇಶವನ್ನೇ ಸೋಲಿಸಿದಂತಾಗುತ್ತದೆ. ಪ್ರತಿಭಟನೆ ಹೆಸರಿನಲ್ಲಿ ಜನರಿಗೆ ಕಿರುಕುಳ ನೀಡಲು ಅವಕಾಶವಿಲ್ಲ” ಎಂದು ಹೇಳಿದ್ದಾರೆ.

ಈ ಘಟನೆಯನ್ನು ಪಂಜಾಬ್ ಬಿಜೆಪಿ ಮುಖ್ಯಸ್ಥ ಅಶ್ವನಿ ಕುಮಾರ್ ಶರ್ಮಾ ಕೂಡ ಖಂಡಿಸಿದ್ದು, ಅಪರಿಚಿತ ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


ಇದನ್ನೂ ಓದಿ: ರಿಲಾಯನ್ಸ್ ಬಹಿಷ್ಕರಿಸಲು ಕರೆ: ರೈತ ಹೋರಾಟ ಬೆಂಬಲಿಸಿ ಸಿಂಧನೂರಿನಲ್ಲಿ ಪ್ರತಿಭಟನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...