Homeಮುಖಪುಟಭಗತ್‌ ಸಿಂಗ್‌‌ ಸ್ವಗ್ರಾಮದಲ್ಲಿ ಪ್ರಮಾಣ ವಚನ ಸ್ವೀಕರಿಸಲಿರುವ ಪಂಜಾಬ್ ಚುನಾಯಿತ ಮುಖ್ಯಮಂತ್ರಿ

ಭಗತ್‌ ಸಿಂಗ್‌‌ ಸ್ವಗ್ರಾಮದಲ್ಲಿ ಪ್ರಮಾಣ ವಚನ ಸ್ವೀಕರಿಸಲಿರುವ ಪಂಜಾಬ್ ಚುನಾಯಿತ ಮುಖ್ಯಮಂತ್ರಿ

- Advertisement -
- Advertisement -

ಆಮ್ ಆದ್ಮಿ ಪಕ್ಷದ ನಾಯಕ, ಪಂಜಾಬ್‌ನ ಚುನಾಯಿತ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಶನಿವಾರ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಹೊಸ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ. ಮಾರ್ಚ್ 16 ರಂದು ಮಧ್ಯಾಹ್ನ 12.30 ಕ್ಕೆ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಸ್ವಗ್ರಾಮದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಅವರು ರಾಜಭವನದ ಹೊರಗೆ ತಿಳಿಸಿದ್ದಾರೆ.

“ಪಂಜಾಬ್‌ನಾದ್ಯಂತ ಇರುವ ಮನೆಗಳಿಂದ ಜನರು ಸಮಾರಂಭಕ್ಕೆ ಬರುತ್ತಾರೆ ಮತ್ತು ಭಗತ್ ಸಿಂಗ್‌ಗೆ ಗೌರವ ಸಲ್ಲಿಸುತ್ತಾರೆ. ಉತ್ತಮ ಕ್ಯಾಬಿನೆಟ್ ಇರಲಿದ್ದು, ಹಿಂದೆಂದೂ ಮಾಡದ ಐತಿಹಾಸಿಕ ನಿರ್ಧಾರಗಳನ್ನು ಮಾಡಲಾಗುವುದು” ಎಂದು ಭಗವಂತ್‌ ಮಾನ್ ಅವರು ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ.

ಇದನ್ನೂ ಓದಿ:  Punjab Election Results | ಪಂಜಾಬ್‌‌ನಲ್ಲಿ AAP ಭರ್ಜರಿ ಜಯ; ಸಂಪೂರ್ಣ ಫಲಿತಾಂಶ ಹೀಗಿದೆ

ಶುಕ್ರವಾರ ಮೊಹಾಲಿಯಲ್ಲಿ ನಡೆದ ಪಕ್ಷದ ಶಾಸಕರ ಸಭೆಯಲ್ಲಿ ಧುರಿ ಕ್ಷೇತ್ರದಿಂದ 58,000 ಮತಗಳಿಂದ ಗೆದ್ದಿರುವ ಮಾನ್ ಅವರನ್ನು ಎಎಪಿಯ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.

ಆಮ್ ಆದ್ಮಿ ಪಕ್ಷದ ಹೊಸ ಶಾಸಕರಿಗೆ ತಮ್ಮ ಮೊದಲ ನಿರ್ದೇಶನದ ನೀಡಿದ ಮಾನ್ ಅವರು, ತಮ್ಮ ತಮ್ಮ ಕ್ಷೇತ್ರಗಳಲ್ಲಿ ಗರಿಷ್ಠ ಸಮಯವನ್ನು ಕಳೆಯಬೇಕೆ ಹೊರತು, ರಾಜಧಾನಿ ಚಂಡೀಗಡದಲ್ಲಿ ಅಲ್ಲ ಮತ್ತು ಕ್ಯಾಬಿನೆಟ್ ಸ್ಥಾನಗಳಿಗಾಗಿ ಹಾತೊರೆಯಬೇಡಿ ಎಂದು ಹೇಳಿದ್ದಾರೆ.

“ನಾವು ಮತ ​​ಕೇಳಲು ಹೋದ ಎಲ್ಲ ಸ್ಥಳಗಳಿಗೆ ಹೋಗಿ ನಾವು ಕೆಲಸ ಮಾಡಬೇಕು. ಎಲ್ಲಾ ಶಾಸಕರು ಚಂಡೀಗಢದಲ್ಲಿ ಉಳಿಯದೆ ಅವರು ಆಯ್ಕೆಯಾದ ಪ್ರದೇಶಗಳಲ್ಲಿ ಕೆಲಸ ಮಾಡಬೇಕು” ಎಂದು ಮಾನ್ ಹೇಳಿದ್ದಾರೆ.

“ಮುಖ್ಯಮಂತ್ರಿ ಹೊರತುಪಡಿಸಿ 17 ಮಂದಿ ಕ್ಯಾಬಿನೆಟ್ ಮಂತ್ರಿಗಳನ್ನು ಹೊಂದಬಹುದು. ಯಾರೂ ಅಸಮಾಧಾನಗೊಳ್ಳಬೇಕಾಗಿಲ್ಲ, ನೀವೆಲ್ಲರೂ ಕ್ಯಾಬಿನೆಟ್ ಮಂತ್ರಿಗಳೆ” ಎಂದು ಅವರು ತಮ್ಮನ್ನು ಒಳಗೊಂಡಂತೆ 92 ಶಾಸಕರ ಸಭೆಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಪಂಜಾಬ್‌ನಲ್ಲಿ ಅಭೂತಪೂರ್ವ ಜಯ ದಾಖಲಿಸಿದ ಆಪ್: ಕರ್ನಾಟಕದ ಮುಖಂಡರ ಪ್ರತಿಕ್ರಿಯೆ ಹೀಗಿದೆ 

ಪಕ್ಷಕ್ಕೆ ಮತ ಹಾಕದವರ ಪರವಾಗಿಯೂ ದುರಹಂಕಾರಕ್ಕೆ ಒಳಗಾಗದೆ ಕೆಲಸ ಮಾಡಿ ಎಂದು ಅವರು ಮನವಿ ಮಾಡಿದ್ದಾರೆ.

“ಯಾವುದೆ ದುರಹಂಕಾರ ಬೇಡ ಎಂದು ನಿಮ್ಮೆಲ್ಲರಲ್ಲಿ ಮನವಿ ಮಾಡುತ್ತೇನೆ. ನಿಮಗೆ ಮತ ಹಾಕದವರಿಗಾಗಿಯೂ ಕೆಲಸ ಮಾಡಿ, ನೀವು ಪಂಜಾಬಿಗಳ ಶಾಸಕರಾಗಿದ್ದೀರಿ” ಎಂದು ಅವರು ಹೇಳಿದ್ದಾರೆ.

117 ಸದಸ್ಯ ಬಲದ ಅಸೆಂಬ್ಲಿಯಲ್ಲಿ ಎಎಪಿ 92 ಸ್ಥಾನಗಳನ್ನು ಗಳಿಸುವ ಮೂಲಕ ಚುನಾವಣೆಯಲ್ಲಿ ಭಾರಿ ಗೆಲುವು ದಾಖಲಿಸಿದೆ.

ಹಾಲಿ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್‌ ಚನ್ನಿ, ಕಾಂಗ್ರೆಸ್‌ ರಾಜ್ಯ ಮುಖ್ಯಸ್ಥ ನವಜೋತ್‌ ಸಿಂಗ್‌ ಸಿಧು ಮತ್ತು ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಸೇರಿದಂತೆ ವಿವಿಧ ಪಕ್ಷಗಳ ಹಿರಿಯ ನಾಯಕರನ್ನು ಎಎಪಿ ಸೋಲಿಸಿದೆ. 60 ವರ್ಷಗಳ ಇತಿಹಾಸದಲ್ಲಿ ರಾಜ್ಯದಲ್ಲಿ ಒಂದು ಪಕ್ಷ ಇಷ್ಟು ಹೆಚ್ಚಿನ ಸ್ಥಾನಗಳನ್ನು ಪಡೆದಿರುವುದು ಇದುವೆ ಮೊದಲ ಬಾರಿಯಾಗಿದೆ.

ಇದನ್ನೂ ಓದಿ: ಪಂಜಾಬ್‌: ಹಾಲಿ, ಮಾಜಿ ಸಿಎಂಗಳಿಗೆಲ್ಲ ಸೋಲಿನ ರುಚಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...