Homeಮುಖಪುಟಪಂಜಾಬ್ ಚುನಾವಣೆ: ನನ್ನ ಕುಟುಂಬದವರ ಮತವೇ ನನಗೆ ಬಿದ್ದಿಲ್ಲ ಎಂದ ಬಿಜೆಪಿ ಅಭ್ಯರ್ಥಿ!

ಪಂಜಾಬ್ ಚುನಾವಣೆ: ನನ್ನ ಕುಟುಂಬದವರ ಮತವೇ ನನಗೆ ಬಿದ್ದಿಲ್ಲ ಎಂದ ಬಿಜೆಪಿ ಅಭ್ಯರ್ಥಿ!

"ಇದು ಕೃಷಿ ಕಾನೂನುಗಳ ಪರಿಣಾಮ. ಹಾಗಾಗಿ ಯಾವೊಬ್ಬ ವ್ಯಕ್ತಿಯೂ ಬಿಜೆಪಿಯ ಪರವಾಗಿದ್ದರೆ, ಆ ವ್ಯಕ್ತಿಯ ಕುಟುಂಬಸ್ಥರೇ ಅವರನ್ನು ನಿರಾಕರಿಸುತ್ತಾರೆ ಎಂಬುದಕ್ಕೆ ಇದು ಉದಾಹರಣೆ" ಎಂದು ಕೆಲವರು ಹೇಳಿದ್ದಾರೆ.

- Advertisement -
- Advertisement -

“ನನ್ನ ಕುಟುಂಬದಲ್ಲಿ 15-20 ಜನರಿದ್ದಾರೆ. ಆದರೆ ಚುನಾವಣೆಯಲ್ಲಿ ನನಗೆ ಕೇವಲ 9 ಮತಗಳು ಮಾತ್ರ ಸಿಕ್ಕಿವೆ”- ಇದು ಪಂಜಾಬ್ ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಿಜೆಪಿಯ ಅಭ್ಯರ್ಥಿ ಕಿರಣ್ ಕೌರ್ ಅವರ ಅಳಲು.

ಪಂಜಾಬ್‌ನಲ್ಲಿ ಫೆಬ್ರವರಿ 14 ರಂದು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತದಾನ ನಡೆದಿತ್ತು. ಇದರ ಫಲಿತಾಂಶ ನಿನ್ನೆ (ಫೆ. 17) ಹೊರಬಿದ್ದಿತ್ತು. ಈ ಫಲಿತಾಂಶದಿಂದ ಗುರುದಾಸ್‌ಪುರ ಮುನ್ಸಿಪಲ್ ಕೌನ್ಸಿಲ್‌ನ 12 ನೇ ವಾರ್ಡ್‌ನ ಬಿಜೆಪಿ ಕಿರಣ್ ಕೌರ್ ಆಘಾತಕ್ಕೊಳಗಾಗಿದ್ದು, ಚುನಾವಣೆಯ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

“ನನ್ನ ಕುಟುಂಬದ 15-20 ಜನರು ನನಗೆ ಮತ ಚಲಾಯಿಸಿದ್ದಾರೆ. ಆದರೆ ನನಗೆ ಕೇವಲ 9 ಮತಗಳು ಮಾತ್ರ ಬಿದ್ದಿವೆ. ಮತ ಚಲಾವಣೆಯ ನಂತರ ಕಾಂಗ್ರೆಸ್ ಕಾರ್ಯಕರ್ತರು ಇವಿಎಂ ಅನ್ನು ಬದಲಾಯಿಸಿದ್ದಾರೆ. ನನ್ನ ಏರಿಯಾದ ಜನರೆಲ್ಲಾ ನನಗೆ ಭರವಸೆ ನೀಡಿದ್ದರು. ನಾನು ಚುನಾವಣೆಯಲ್ಲಿ ಗೆದ್ದಿದ್ದೇನೆ. ಆದರೆ ಅವರ ಮತಗಳು ನನಗೆ ಬಿದ್ದಿಲ್ಲ. ಕಾಂಗ್ರೆಸ್ ನನಗೆ ದ್ರೋಹ ಬಗೆದಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟದ ಆಕ್ರೋಶ: ಪಂಜಾಬ್‌ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಧೂಳಿಪಟ

ಈ ಕುರಿತು ಕಿರಣ್ ಕೌರ್ ಮಾತನಾಡಿರುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಅದರಲ್ಲಿ, “ಕಾಂಗ್ರೆಸ್ ಪಕ್ಷವು ಚುನಾವಣೆಯಲ್ಲಿ ಜಾಣತನದಿಂದ ಕೆಲಸ ಮಾಡಿದೆ. ಇತರೆ ಅಭ್ಯರ್ಥಿಗಳಿಗೆ ಕಿರುಕುಳ ನೀಡುತ್ತಿದೆ. ಇವಿಎಂ ಯಂತ್ರಗಳನ್ನು ಬದಲಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

“ಈ ಹಿಂದೆ ಹಲವು ಬಾರಿ 12 ನೇ ವಾರ್ಡ್‌ನಿಂದ ಗೆದ್ದಿದ್ದರೂ ಸಹ, ಈ ಬಾರಿ ಕೇವಲ ಒಂಬತ್ತು ಮತಗಳನ್ನು ಪಡೆದಿದ್ದೇನೆ. ಇದನ್ನು ನಂಬಲು ಸಾಧ್ಯವಿಲ್ಲ. ನಮಗೆ ಕಾಂಗ್ರೆಸ್ ಸಾಕಷ್ಟು ಕಿರುಕುಳ ನೀಡಿದೆ. ನಾನು ಪಾಠ ಮಾಡುತ್ತಿದ್ದ ಶಾಲೆ ನನ್ನನ್ನು ಕೆಲಸದಿಂದ ತೆಗೆದಿದೆ” ಎಂದು ಮುಂತಾದ ಆರೋಪಗಳನ್ನು ಮಾಡಿರುವುದನ್ನು ವೀಡಿಯೋದಲ್ಲಿ ಕಾಣಬಹುದು.

ಆದರೆ ಸಾಮಾಜಿಕ ಮಾಧ್ಯಮಗಳಲ್ಲಿ ಇವರ ಆರೋಪವನ್ನು ಕೆಲವರು ಅಲ್ಲಗಳೆದಿದ್ದಾರೆ. “ಇದು ಕೃಷಿ ಕಾನೂನುಗಳ ಪರಿಣಾಮ. ಹಾಗಾಗಿ ಯಾವೊಬ್ಬ ವ್ಯಕ್ತಿಯೂ ಬಿಜೆಪಿಯ ಪರವಾಗಿದ್ದರೆ, ಆ ವ್ಯಕ್ತಿಯ ಕುಟುಂಬಸ್ಥರೇ ಅವರನ್ನು ನಿರಾಕರಿಸುತ್ತಾರೆ ಎಂಬುದಕ್ಕೆ ಇದು ಉದಾಹರಣೆ” ಎಂದಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ಧ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಹೋರಾಟ ಮಾಡುತ್ತಿದ್ದಾರೆ. ಇವರಲ್ಲಿ ಬಹುಪಾಲು ರೈತರು ಪಂಜಾಬ್ ಮತ್ತು ಹರಿಯಾಣದವರಾಗಿದ್ದಾರೆ. ಹಾಗಾಗಿ ಈ ಎರಡೂ ರಾಜ್ಯಗಳಲ್ಲಿ ಬಿಜೆಪಿಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಇದರ ನಡುವೆಯೇ ಪಂಜಾಬ್‌ ನಲ್ಲಿ ಸ್ಥಳೀಯ ಚುನಾವಣೆ ನಡೆದಿದೆ. 8 ಕ್ಕೆ 8 ಮುನಿಸಿಪಲ್ ಕಾರ್ಪೋರೇಷನ್‌ಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಅಲ್ಲದೆ 109 ಮುನಿಸಿಪಲ್ ಕೌನ್ಸಿಲ್‌ಗಳಲ್ಲಿ‌ ಬಹುತೇಕ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆದ್ದಿದೆ. ಬಿಜೆಪಿಗೆ ಹೀನಾಯ ಸೋಲುಂಟಾಗಿದೆ. ಇದು ರೈತರ ಆಕ್ರೋಶಕ್ಕೆ ಸ್ಪಷ್ಟ ಉದಾಹರಣೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಗ್ರೌಂಡ್ ರಿಪೋರ್ಟ್: ರೈತಹೋರಾಟದ ತವರು ಪಂಜಾಬ್‌ನಲ್ಲಿ ತೀವ್ರಗೊಳ್ಳುತ್ತಿರುವ ಚಳವಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...