Homeಮುಖಪುಟಪಂಜಾಬ್ ಚುನಾವಣೆ ಫೆ.14ರ ಬದಲು ಫೆ.20ಕ್ಕೆ ಮುಂದೂಡಿಕೆ

ಪಂಜಾಬ್ ಚುನಾವಣೆ ಫೆ.14ರ ಬದಲು ಫೆ.20ಕ್ಕೆ ಮುಂದೂಡಿಕೆ

- Advertisement -
- Advertisement -

ಗುರು ರವಿದಾಸ್ ಜಯಂತಿಯ ಹಿನ್ನೆಲೆಯಲ್ಲಿ ಫೆಬ್ರವರಿ 14 ರಂದು ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯನ್ನು ಆರು ದಿನಗಳ ಕಾಲ ಮುಂದೂಡುವಂತೆ ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಸೇರಿದಂತೆ ಎಲ್ಲಾ ಪಕ್ಷಗಳ ಮನವಿಯನ್ನು ಚುನಾವಣಾ ಆಯೋಗ ಪುರಸ್ಕರಿಸಿದೆ. ಫೆ.14ರ ಬದಲು ಫೆ.20 ರಂದು ಚುನಾವಣೆ ನಡೆಸುವುದಾಗಿ ಆಯೋಗ ಘೋಷಿಸಿದೆ.

ಹೊಸ ಆದೇಶದ ಪ್ರಕಾರ ಪಂಜಾಬ್‌ನ 117 ವಿಧಾನಸಭಾ ಸ್ಥಾನಗಳಿಗೆ ಫೆಬ್ರವರಿ 20 ರಂದು ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರಿಗೆ ಪತ್ರ ಬರೆದಿದ್ದ ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ, “ರಾಜ್ಯದ ಜನಸಂಖ್ಯೆಯ ಶೇಕಡಾ 32 ರಷ್ಟಿರುವ ಪರಿಶಿಷ್ಟ ಜಾತಿಗಳ ಸಮುದಾಯದ ಜನರು ಫೆಬ್ರವರಿ 16 ರಂದು ನಡೆಯಲಿರುವ ಗುರು ರವಿದಾಸ್ ಅವರ ಜನ್ಮದಿನದಲ್ಲಿ ಭಾಗಿಯಾಗಲಿದ್ದಾರೆ. ಈ ಸಂದರ್ಭದಲ್ಲಿ, ರಾಜ್ಯದಿಂದ ಸುಮಾರು 20 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಪರಿಶಿಷ್ಟ ಜಾತಿ ಸಮುದಾಯದವರು ಫೆಬ್ರವರಿ 10 ರಿಂದ 16 ರವರೆಗೆ ಉತ್ತರ ಪ್ರದೇಶದ ಬನಾರಸ್‌ಗೆ ಭೇಟಿ ನೀಡುವ ಸಾಧ್ಯತೆಯಿದೆ. ಹೀಗಾಗಿ ಈ ಸಮುದಾಯದ ಅನೇಕ ಜನರು ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮತ ಚಲಾಯಿಸಲು ಸಾಧ್ಯವಾಗುವುದಿಲ್ಲ” ಎಂದು ದೂರಿದ್ದರು.

ಇದನ್ನೂ ಓದಿ: ಪಂಜಾಬ್‌‌ ಚುನಾವಣೆ-2022: ಕಾಂಗ್ರೆಸ್‌ನಿಂದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

“ಫೆಬ್ರವರಿ 10 ರಿಂದ ಫೆಬ್ರವರಿ 16 ರವರೆಗೆ ಬನಾರಸ್‌ಗೆ ಭೇಟಿ ನೀಡಲು ಮತ್ತು ವಿಧಾನಸಭಾ ಚುನಾವಣೆಯಲ್ಲಿ ಭಾಗವಹಿಸಲು ಸಾಧ್ಯವಾಗುವ ರೀತಿಯಲ್ಲಿ ಮತದಾನದ ದಿನಾಂಕವನ್ನು ವಿಸ್ತರಿಸಬಹುದು” ಎಂದು ಮನವಿ ಮಾಡಿದ್ದರು.

ಅದರಂತೆ ಇಂದು ಸಭೆ ಸೇರಿದ ಚುನಾವಣಾ ಆಯೋಗ ಆರು ದಿನಗಳ ಕಾಲ ಚುನಾವಣೆ ಮುಂದೂಡಿ ಫೆ.20 ರಂದು ನಡೆಸಲು ತೀರ್ಮಾನಿಸಿದೆ.


ಇದನ್ನೂ ಓದಿ: ಪಂಜಾಬ್: ನಟ ಸೋನು ಸೂದ್‌ ಸಹೋದರಿ ಮಾಳವಿಕಾ ಕಾಂಗ್ರೆಸ್ ಸೇರ್ಪಡೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆ ಬಹಿಷ್ಕರಿಸಬೇಡಿ: ಜಮ್ಮು-ಕಾಶ್ಮೀರದ ಜನತೆಗೆ ಮೆಹಬೂಬಾ ಮುಫ್ತಿ ಮನವಿ

0
'ದಕ್ಷಿಣ ಕಾಶ್ಮೀರದಲ್ಲಿ ಚುನಾವಣೆಯನ್ನು ಬಹಿಷ್ಕರಿಸಲು, ಜಮ್ಮು ಮತ್ತು ಕಾಶ್ಮೀರದ ನಿವಾಸಿಗಳನ್ನು ಬಂಧಿತ ಕಾರ್ಮಿಕರನ್ನಾಗಿ ಮಾಡಲು ಅನಾಮಧೇಯ ಶಕ್ತಿಗಳು ಪ್ರಯತ್ನಿಸುತ್ತಿವೆ' ಎಂದು ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಆತಂಕ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಕಾಶ್ಮೀರದ ಅನಂತನಾಗ್ ರಜೌರಿ...