HomeಮುಖಪುಟPunjab Election Results | ಪಂಜಾಬ್‌‌ನಲ್ಲಿ AAP ಭರ್ಜರಿ ಜಯ; ಸಂಪೂರ್ಣ ಫಲಿತಾಂಶ ಹೀಗಿದೆ

Punjab Election Results | ಪಂಜಾಬ್‌‌ನಲ್ಲಿ AAP ಭರ್ಜರಿ ಜಯ; ಸಂಪೂರ್ಣ ಫಲಿತಾಂಶ ಹೀಗಿದೆ

- Advertisement -
- Advertisement -

Punjab Election Results | ಪಂಜಾಬ್‌ ವಿಧಾನಸಭಾ ಚುನಾವಣೆಯ ಸಂಪೂರ್ಣ ಫಲಿತಾಂಶ ಹೊರಬಿದ್ದಿದ್ದು, ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್‌ ಆದ್ಮಿ ಪಕ್ಷ ಭರ್ಜರಿ ಜಯವನ್ನು ಸಾಧಿಸಿದೆ. ಈ ಚುನಾವಣೆಯಲ್ಲಿ ಎಲ್ಲಾ ಪಕ್ಷಗಳು ತಮ್ಮ ಹೆಚ್ಚಿನ ಸ್ಥಾನಗಳನ್ನು ಕಳೆದುಕೊಂಡಿದೆ.

ಪಂಜಾಬ್‌ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್ ಚನ್ನಿ ಅವರು ತಾನು ಸ್ಪರ್ಧಿಸಿದ್ದ ಎರಡು ಕ್ಷೇತ್ರಗಳಲ್ಲೂ ಸೋಲುಂಡಿದ್ದಾರೆ. ಜೊತೆಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನವಜೊತ್‌ ಸಿಂಗ್ ಸಿಧು ಅವರು ಕೂಡಾ ಸೋಲುಂಡಿದ್ದಾರೆ. ಇಷ್ಟೇ ಅಲ್ಲದೆ ಕಾಂಗ್ರೆಸ್ ತೊರೆದು ಬೇರೆಯೆ ಪಕ್ಷ ಕಟ್ಟಿ ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್ ಅವರು ಕೂಡಾ ಸೋಲುಂಡಿದ್ದಾರೆ. ರಾಜ್ಯದ ಮತ್ತೊಬ್ಬ ಮಾಜಿ ಮುಖ್ಯಮಂತ್ರಿ, ಶಿರೋಮಣಿ ಅಕಾಲಿ ದಳದ ನಾಯಕ ಪ್ರಕಾಶ್ ಸಿಂಗ್ ಬಾದಲ್ ಕೂಡಾ ಸೋಲುಂಡಿದ್ದಾರೆ. ಇವರು ಒಟ್ಟು ಐದು ಬಾರಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು.

ಪಂಜಾಬ್‌ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿದ್ದ ಒಬ್ಬ ಅಭ್ಯರ್ಥಿ ಜಯಗಳಿಸಿದ್ದಾರೆ. ಆಡಳಿತರೂಢ ಪಕ್ಷವಾದ ಕಾಂಗ್ರೆಸ್‌ ಕೇವಲ 18 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಕಾಂಗ್ರೆಸ್‌‌ ಈ ಹಿಂದೆ 77 ಸ್ಥಾನಗಳನ್ನು ಹೊಂದಿತ್ತು. ಕಳೆದ ಬಾರಿ 15 ಸ್ಥಾನಗಳನ್ನು ಹೊಂದಿದ್ದ ಶಿರೋಮಣಿ ಅಕಾಲಿ ದಳ ಈ ಬಾರಿ 3 ಕ್ಷೇತ್ರಗಳನ್ನಷ್ಟೆ ಗೆದ್ದುಕೊಂಡಿದೆ. ಶಿರೋಮಣಿ ಅಕಾಲಿ ದಳದೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಬಿಎಸ್‌ಪಿ ಒಂದು ಕ್ಷೇತ್ರಗಳನ್ನು ಗೆದ್ದಕೊಂಡಿದೆ.

ಇನ್ನು, ಶಿರೋಮನಿ ಅಕಾಲಿದಳ(ಸಂಯುಕ್ತ) ಮತ್ತು ಅಮರಿಂದರ್‌ ಸಿಂಗ್ ಅವರ ಪಂಜಾಬ್‌ ಲೋಕ ಕಾಂಗ್ರೆಸ್‌ ಜೊತೆಗೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ ಎರಡು ಕ್ಷೇತ್ರಗಳನ್ನು ಗೆದ್ದುಕೊಂಡಿದ್ದು. ಕಳೆದ ಬಾರಿ ಬಿಜೆಪಿ ಒಟ್ಟು ಮೂರು ಸ್ಥಾನಗಳನ್ನು ಗೆದ್ದುಕೊಂಡಿತ್ತು.

ಪಂಜಾಬ್‌ನ ಸಂಪೂರ್ಣ ಫಲಿತಾಂಶ ಹೀಗಿದೆ.

ಒಟ್ಟು ಕ್ಷೇತ್ರ 117, ಬಹುಮತಕ್ಕೆ 59 ಸ್ಥಾನಗಳ ಅಗತ್ಯ

ಆಮ್‌ ಆದ್ಮಿ ಪಕ್ಷ – 92
ಕಾಂಗ್ರೆಸ್‌ – 18
ಶಿರೋಮಣಿ ಅಕಾಲಿದಳ – 3
ಬಿಎಸ್‌ಪಿ – 1
ಬಿಜೆಪಿ – 2
ಪಕ್ಷೇತರ – 1

ಇದನ್ನೂ ಓದಿ: ಪಂಜಾಬ್‌: ಹಾಲಿ, ಮಾಜಿ ಸಿಎಂಗಳಿಗೆಲ್ಲ ಸೋಲಿನ ರುಚಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...