Punjab Election Results | ಪಂಜಾಬ್ ವಿಧಾನಸಭಾ ಚುನಾವಣೆಯ ಸಂಪೂರ್ಣ ಫಲಿತಾಂಶ ಹೊರಬಿದ್ದಿದ್ದು, ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಭರ್ಜರಿ ಜಯವನ್ನು ಸಾಧಿಸಿದೆ. ಈ ಚುನಾವಣೆಯಲ್ಲಿ ಎಲ್ಲಾ ಪಕ್ಷಗಳು ತಮ್ಮ ಹೆಚ್ಚಿನ ಸ್ಥಾನಗಳನ್ನು ಕಳೆದುಕೊಂಡಿದೆ.
ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರು ತಾನು ಸ್ಪರ್ಧಿಸಿದ್ದ ಎರಡು ಕ್ಷೇತ್ರಗಳಲ್ಲೂ ಸೋಲುಂಡಿದ್ದಾರೆ. ಜೊತೆಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನವಜೊತ್ ಸಿಂಗ್ ಸಿಧು ಅವರು ಕೂಡಾ ಸೋಲುಂಡಿದ್ದಾರೆ. ಇಷ್ಟೇ ಅಲ್ಲದೆ ಕಾಂಗ್ರೆಸ್ ತೊರೆದು ಬೇರೆಯೆ ಪಕ್ಷ ಕಟ್ಟಿ ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಕೂಡಾ ಸೋಲುಂಡಿದ್ದಾರೆ. ರಾಜ್ಯದ ಮತ್ತೊಬ್ಬ ಮಾಜಿ ಮುಖ್ಯಮಂತ್ರಿ, ಶಿರೋಮಣಿ ಅಕಾಲಿ ದಳದ ನಾಯಕ ಪ್ರಕಾಶ್ ಸಿಂಗ್ ಬಾದಲ್ ಕೂಡಾ ಸೋಲುಂಡಿದ್ದಾರೆ. ಇವರು ಒಟ್ಟು ಐದು ಬಾರಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು.
ಪಂಜಾಬ್ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿದ್ದ ಒಬ್ಬ ಅಭ್ಯರ್ಥಿ ಜಯಗಳಿಸಿದ್ದಾರೆ. ಆಡಳಿತರೂಢ ಪಕ್ಷವಾದ ಕಾಂಗ್ರೆಸ್ ಕೇವಲ 18 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಕಾಂಗ್ರೆಸ್ ಈ ಹಿಂದೆ 77 ಸ್ಥಾನಗಳನ್ನು ಹೊಂದಿತ್ತು. ಕಳೆದ ಬಾರಿ 15 ಸ್ಥಾನಗಳನ್ನು ಹೊಂದಿದ್ದ ಶಿರೋಮಣಿ ಅಕಾಲಿ ದಳ ಈ ಬಾರಿ 3 ಕ್ಷೇತ್ರಗಳನ್ನಷ್ಟೆ ಗೆದ್ದುಕೊಂಡಿದೆ. ಶಿರೋಮಣಿ ಅಕಾಲಿ ದಳದೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಬಿಎಸ್‌ಪಿ ಒಂದು ಕ್ಷೇತ್ರಗಳನ್ನು ಗೆದ್ದಕೊಂಡಿದೆ.
ಇನ್ನು, ಶಿರೋಮನಿ ಅಕಾಲಿದಳ(ಸಂಯುಕ್ತ) ಮತ್ತು ಅಮರಿಂದರ್ ಸಿಂಗ್ ಅವರ ಪಂಜಾಬ್ ಲೋಕ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ ಎರಡು ಕ್ಷೇತ್ರಗಳನ್ನು ಗೆದ್ದುಕೊಂಡಿದ್ದು. ಕಳೆದ ಬಾರಿ ಬಿಜೆಪಿ ಒಟ್ಟು ಮೂರು ಸ್ಥಾನಗಳನ್ನು ಗೆದ್ದುಕೊಂಡಿತ್ತು.
ಪಂಜಾಬ್‌ನ ಸಂಪೂರ್ಣ ಫಲಿತಾಂಶ ಹೀಗಿದೆ.
ಒಟ್ಟು ಕ್ಷೇತ್ರ 117, ಬಹುಮತಕ್ಕೆ 59 ಸ್ಥಾನಗಳ ಅಗತ್ಯ
ಆಮ್ ಆದ್ಮಿ ಪಕ್ಷ – 92
ಕಾಂಗ್ರೆಸ್ – 18
ಶಿರೋಮಣಿ ಅಕಾಲಿದಳ – 3
ಬಿಎಸ್‌ಪಿ – 1
ಬಿಜೆಪಿ – 2
ಪಕ್ಷೇತರ – 1
ಇದನ್ನೂ ಓದಿ: ಪಂಜಾಬ್: ಹಾಲಿ, ಮಾಜಿ ಸಿಎಂಗಳಿಗೆಲ್ಲ ಸೋಲಿನ ರುಚಿ