Homeಮುಖಪುಟಪಂಜಾಬ್: ಸೋದರಳಿಯನ ಮನೆ ಮೇಲೆ ಇಡಿ ದಾಳಿ, ಪ್ರಜಾಪ್ರಭುತ್ವಕ್ಕೆ ಮಾರಕ ಎಂದ ಸಿಎಂ ಚರಣ್‌ಜಿತ್ ಸಿಂಗ್...

ಪಂಜಾಬ್: ಸೋದರಳಿಯನ ಮನೆ ಮೇಲೆ ಇಡಿ ದಾಳಿ, ಪ್ರಜಾಪ್ರಭುತ್ವಕ್ಕೆ ಮಾರಕ ಎಂದ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ

- Advertisement -
- Advertisement -

ಪಂಜಾಬ್ ಚುನಾವಣೆಗೆ ಇನ್ನೊಂದು ತಿಂಗಳು ಬಾಕಿ ಇರುವಾಗ, ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರ ಸೋದರಳಿಯ ಮತ್ತು ಇತರ ಹಲವರ ಮನೆ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.

ಲುಧಿಯಾನ, ಮೊಹಾಲಿ ಮತ್ತು ಪಠಾಣ್‌ಕೋಟ್‌ನ ಸುಮಾರು 10 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಹಲವು ತಂಡಗಳು ಏಕ ಕಾಲದಲ್ಲಿ ಮಂಗಳವಾರ ದಾಳಿ ನಡೆಸಿವೆ. ಅಕ್ರಮ ಗಣಿಗಾರಿಕೆ ವಿರುದ್ಧ 2018 ರಲ್ಲಿ ಪಂಜಾಬ್ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಈ ದಾಳಿಗಳು ನಡೆದಿವೆ.

ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರ ಸೋದರಳಿಯ ಭೂಪಿಂದರ್ ಸಿಂಗ್ ಹನಿ ಅವರ ಮನೆ ಮತ್ತು ಪಂಜಾಬ್‌ನ ಇತರ ಸ್ಥಳಗಳಲ್ಲಿ ಇಂದು ಶೋಧ ನಡೆಸಲಾಯಿತು. ದಾಳಿ ಹಿಂದೆ ರಾಜಖಿಯ ಕೈವಾಡವಿದೆ ಎಂದು ಆಕ್ಷೇಪ ವ್ಯಕ್ತಪಡಿಸಿರುವ ಸಿಎಂ, ನನ್ನನ್ನು ಗುರಿಯಾಗಿಸಿಕೊಂಡು ನನ್ನ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದಿದ್ದಾರೆ.

ಇದನ್ನೂ ಓದಿ: ಪಂಜಾಬ್ ಚುನಾವಣೆ ಫೆ.14ರ ಬದಲು ಫೆ.20ಕ್ಕೆ ಮುಂದೂಡಿಕೆ

ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿದ್ದು, ರಾಜಕೀಯ ನಂಟು ಹೊಂದಿರುವ ಹಲವರ ವಿಚಾರಣೆ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2018 ರಲ್ಲಿ ಗಣಿಗಾರಿಕೆ ಅಧಿಕಾರಿಯ ದೂರಿನ ಮೇರೆಗೆ ಪಂಜಾಬ್ ಪೊಲೀಸರು ಅಕ್ರಮ ಮರಳು ಗಣಿಗಾರಿಕೆ ಪ್ರಕರಣವನ್ನು ನವನ್‌ಶಹರ್‌ನ ರಾಹೋನ್ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದಾರೆ. ಗಣಿ ಮತ್ತು ಖನಿಜಗಳ (ಅಭಿವೃದ್ಧಿ ನಿಯಂತ್ರಣ) ಕಾಯಿದೆ, 1957 ರ ಸೆಕ್ಷನ್ 21 (1) ಮತ್ತು 4 (1) ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 379, 420, 465, 467, 468 ಮತ್ತು 471 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ 26 ಆರೋಪಿಗಳಿದ್ದು, ಅವರಲ್ಲಿ ಹೆಚ್ಚಿನವರು ಟ್ರಕ್ ಚಾಲಕರಾಗಿದ್ದಾರೆ.

“ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ದಾಳಿ ನಡೆಸಲಾಗುತ್ತಿದೆ. ನನ್ನನ್ನು ಗುರಿಯಾಗಿಸಿಕೊಂಡು ನನ್ನ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ. ಇದರ ವಿರುದ್ಧ ಹೋರಾಡಲು ನಾವು ಸಿದ್ಧರಿದ್ದೇವೆ. ಪಶ್ಚಿಮ ಬಂಗಾಳ ಚುನಾವಣೆಯಲ್ಲೂ ಇದೇ ಸಂಭವಿಸಿದೆ” ಎಂದು ಚರಣ್‌ಜಿತ್ ಸಿಂಗ್ ಚನ್ನಿ ಆರೋಪಿಸಿದ್ದಾರೆ.

ಪಂಜಾಬ್ ಚುನಾವಣಾ ಪ್ರಚಾರದಲ್ಲಿ ಕೇಳಿ ಬರುವ ಪ್ರಮುಖ ಅಂಶಗಳಲ್ಲಿ ಅಕ್ರಮ ಮರಳು ಗಣಿಗಾರಿಕೆಯು ಒಂದಾಗಿದೆ. ಸೆಪ್ಟೆಂಬರ್‌ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅಮರಿಂದರ್ ಸಿಂಗ್, ಎಲ್ಲಾ ಕಾಂಗ್ರೆಸ್ ಶಾಸಕರು ಮರಳು ಅಕ್ರಮ ದಂಧೆಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಪಂಜಾಬ್ ಚುನಾವಣೆ: ಸಂಸದ ಭಗವಂತ್ ಮಾನ್ ಆಪ್‌ನ ಮುಖ್ಯಮಂತ್ರಿ ಅಭ್ಯರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...