Homeಮುಖಪುಟಪಂಜಾಬ್ ಚುನಾವಣೆ: ಕಾಂಗ್ರೆಸ್ ಸಿಎಂ ಅಭ್ಯರ್ಥಿ ಘೋಷಣೆ ಸಾಧ್ಯತೆ, ನಿರ್ಧಾರಕ್ಕೆ ಬದ್ಧ ಎಂದ ಸಿಧು

ಪಂಜಾಬ್ ಚುನಾವಣೆ: ಕಾಂಗ್ರೆಸ್ ಸಿಎಂ ಅಭ್ಯರ್ಥಿ ಘೋಷಣೆ ಸಾಧ್ಯತೆ, ನಿರ್ಧಾರಕ್ಕೆ ಬದ್ಧ ಎಂದ ಸಿಧು

- Advertisement -
- Advertisement -

ಪಂಜಾಬ್ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಬಗ್ಗೆ ಕಾಂಗ್ರೆಸ್ ಪಕ್ಷದ ಮುಖಂಡ ರಾಹುಲ್ ಗಾಂಧಿ ಘೋಷಿಸುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ ಎಂದು ಪಂಜಾಬ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಭಾನುವಾರ ಹೇಳಿದ್ದಾರೆ.

ಚುನಾವಣೆಗೆ ಕಾಂಗ್ರೆಸ್ ಇನ್ನು ಅಭ್ಯರ್ಥಿಯನ್ನು ಘೋಷಿಸಲಿಲ್ಲ. ಇಂದು (ಫೆ.6) ರಾಜ್ಯದಲ್ಲಿ ವರ್ಚುವಲ್ ರ್‍ಯಾಲಿ ನಡೆಸಲು ಮತ್ತು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ರಾಹುಲ್ ಗಾಂಧಿ ಲುಧಿಯಾನಕ್ಕೆ ಆಗಮಿಸಿದ್ದಾರೆ ಎಂದು ಹೇಳಲಾಗಿದೆ.

“ನಿರ್ಧಾರದ ಕ್ರಿಯೆಯಿಲ್ಲದೆ ಏನನ್ನೂ ಸಾಧಿಸಲಾಗಿಲ್ಲ. ಪಂಜಾಬ್‌ಗೆ ಸ್ಪಷ್ಟತೆ ನೀಡಲು ಬರುತ್ತಿರುವ ರಾಹುಲ್ ಜಿ ಅವರಿಗೆ ಆತ್ಮೀಯ ಸ್ವಾಗತ. ಎಲ್ಲರೂ ಅವರ ನಿರ್ಧಾರಕ್ಕೆ ಬದ್ಧರಾಗುತ್ತಾರೆ” ಎಂದು ನವಜೋತ್ ಸಿಂಗ್ ಸಿಧು ಟ್ವೀಟ್ ಮಾಡಿದ್ದಾರೆ.

ಲುಧಿಯಾನದಲ್ಲಿ ಇಂದು ನಡೆಯಲಿರುವ ತಮ್ಮ ವರ್ಚುವಲ್ ರ್‍ಯಾಲಿಯಲ್ಲಿ ರಾಹುಲ್ ಗಾಂಧಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲಿದ್ದಾರೆ ಎಂದು ಈ ಹಿಂದೆ ಕಾಂಗ್ರೆಸ್ ಪಂಜಾಬ್ ಉಸ್ತುವಾರಿ ಹರೀಶ್ ಚೌಧರಿ ಹೇಳಿದ್ದರು.

ಇದನ್ನೂ ಓದಿ: ಮೈಸೂರು: ‘ಹಿಜಾಬ್‌‌’ ವಿವಾದದ ನಡುವೆ ಮುಚ್ಚಿಹೋದ ಶತಮಾನದ ಹೆಣ್ಣು ಮಕ್ಕಳ ಶಾಲೆ!

ಮುಖ್ಯಮಂತ್ರಿ ಅಭ್ಯರ್ಥಿಗೆ ಸಿಧು ಮತ್ತು ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಪ್ರಮುಖ ಸ್ಪರ್ಧಿಗಳು. ಪಕ್ಷದ ನಿರ್ಧಾರಕ್ಕೆ ಬದ್ಧರಾಗುವುದಾಗಿ ಇಬ್ಬರೂ ಗಾಂಧಿ ಅವರಿಗೆ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಈ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ ಎಂಬ ವದಂತಿಯಿದೆ.

ಜನವರಿ 27 ರಂದು ರಾಜ್ಯಕ್ಕೆ ಭೇಟಿ ನೀಡಿದ್ದ ರಾಹುಲ್ ಗಾಂಧಿ, ಪಕ್ಷವು ಸಿಎಂ ಅಭ್ಯರ್ಥಿಯ ಘೋಷಣೆ ಮಾಡಿ ಚುನಾವಣೆಯನ್ನು ಎದುರಿಸಲಿದೆ, ಇದನ್ನು ಪಕ್ಷದ ಕಾರ್ಯಕರ್ತರನ್ನು ಸಂಪರ್ಕಿಸಿ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು. ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಯಾರನ್ನು ಆಯ್ಕೆ ಮಾಡಿದರೂ ಒಬ್ಬರು ಇನ್ನೊಬ್ಬರು ಬೆಂಬಲಿಸುತ್ತಾರೆ ಎಂದು ಇಬ್ಬರೂ ನಾಯಕರು ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದ್ದರು.

 

ಕಾಂಗ್ರೆಸ್ ತನ್ನ ನಾಯಕರು ಮತ್ತು ಕಾರ್ಯಕರ್ತರಿಂದ ಪ್ರತಿಕ್ರಿಯೆಯನ್ನು ತೆಗೆದುಕೊಳ್ಳುವುದರ ಜೊತೆಗೆ, ಫೋನ್ ಕರೆ ವ್ಯವಸ್ಥೆಯ ಮೂಲಕ ತಮ್ಮ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಬೇಕೆಂಬುದರ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯವನ್ನು ಕೇಳಿದೆ.

ಫೆಬ್ರವರಿ 20 ರಂದು 117 ಸದಸ್ಯ ಬಲದ ಪಂಜಾಬ್‌ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.


ಇದನ್ನೂ ಓದಿ: ಪಂಜಾಬ್‌‌: ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಗೆ ಜನಾಭಿಪ್ರಾಯದ ಮೊರೆ ಹೋದ ಕಾಂಗ್ರೆಸ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಣಿಪುರ ಹಿಂಸಾಚಾರಕ್ಕೆ ಬಲಿಯಾದವರ ಬಗ್ಗೆ ಮೋದಿ ಸರ್ಕಾರಕ್ಕೆ ಸ್ವಲ್ಪವೂ ಸಹಾನುಭೂತಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ

0
ಮಣಿಪುರದ ಪರಿಸ್ಥಿತಿಯ ಬಗ್ಗೆ ಮೋದಿ ಸರಕಾರ ನಿರಾಸಕ್ತಿಯನ್ನು ಹೊಂದಿದ್ದು, ಪಶ್ಚಾತ್ತಾಪವಿಲ್ಲದಂತೆ ವರ್ತಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ನಡೆಸಿದೆ. ಈ ಕುರಿತು ಎಕ್ಸ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...