Homeಮುಖಪುಟಪಂಜಾಬ್‌ | ಪಟಾಕಿ ಘಟಕದಲ್ಲಿ ಸ್ಫೋಟ: ಐವರು ಕಾರ್ಮಿಕರು ಸಾವು, 27 ಮಂದಿಗೆ ಗಾಯ

ಪಂಜಾಬ್‌ | ಪಟಾಕಿ ಘಟಕದಲ್ಲಿ ಸ್ಫೋಟ: ಐವರು ಕಾರ್ಮಿಕರು ಸಾವು, 27 ಮಂದಿಗೆ ಗಾಯ

- Advertisement -
- Advertisement -

ಪಂಜಾಬ್‌ನ ಮುಕ್ತಸರ್ ಜಿಲ್ಲೆಯ ಫತುಹಿವಾಲಾ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಐದು ಜನರು ಸಾವನ್ನಪ್ಪಿದ್ದು, 27 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪಂಜಾಬ್‌ | ಪಟಾಕಿ ಘಟಕದಲ್ಲಿ

ಬೆಳಗಿನ ಜಾವ 1 ಗಂಟೆ ಸುಮಾರಿಗೆ ಸುಮಾರು 40 ಕಾರ್ಮಿಕರು ಘಟಕದಲ್ಲಿದ್ದರು ಎಂದು ತಿಳಿದು ಬಂದಿದ್ದು, ಅವರಲ್ಲಿ ಹೆಚ್ಚಿನವರು ವಲಸೆ ಕಾರ್ಮಿಕರಾಗಿದ್ದಾರೆ ಎಂದು ವರದಿ ತಿಳಿಸಿದೆ. ಸ್ಫೋಟದಿಂದಾಗಿ ಕಾರ್ಖಾನೆಯ ಕಟ್ಟಡ ಸಂಪೂರ್ಣವಾಗಿ ಕುಸಿದುಬಿದ್ದಿದ್ದು, ಆ ಸಮಯದಲ್ಲಿ ಕಾರ್ಮಿಕರು ಪಟಾಕಿಗಳ ಉತ್ಪಾದನೆ ಮತ್ತು ಪ್ಯಾಕೇಜಿಂಗ್‌ನಲ್ಲಿ ತೊಡಗಿದ್ದರು.

ರಾತ್ರಿ ಪಾಳಿ ಮುಗಿಸಿದ ನಂತರ ಹೆಚ್ಚಿನವರು ವಿಶ್ರಾಂತಿ ಪಡೆಯುತ್ತಿದ್ದಾಗ ಹಠಾತ್ ಜೋರಾದ ಸ್ಫೋಟ ಸಂಭವಿಸಿ, ಹಲವಾರು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಕಾರ್ಮಿಕರೊಬ್ಬರು ಹೇಳಿದ್ದಾರೆ. ಕಟ್ಟಡ ಕುಸಿತಕ್ಕೆ ಅನಿರ್ದಿಷ್ಟ ಸ್ಫೋಟವೇ ಕಾರಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಲ್ಲಿಯವರೆಗೆ, ಅವಶೇಷಗಳಿಂದ ನಾಲ್ಕು ಶವಗಳನ್ನು ಹೊರತೆಗೆಯಲಾಗಿದೆ ಮತ್ತು 27 ಮಂದಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಬಟಿಂಡಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾರ್ಖಾನೆಯು ಪರವಾನಗಿ ಪಡೆದು ಕಾರ್ಯಚರಿಸುತ್ತಿತ್ತು ಎಂದು ಅಧಿಕಾರಿ ಹೇಳಿದ್ದು, ವಸತಿ ಪ್ರದೇಶಗಳಿಂದ ದೂರದಲ್ಲಿರುವ ಕೃಷಿ ಹೊಲಗಳ ಮಧ್ಯ ಇತ್ತು ಎಂದು ಅವರು ಹೇಳಿದ್ದಾರೆ. “ಪ್ರಕರಣವನ್ನು ಸಂಪೂರ್ಣವಾಗಿ ತನಿಖೆ ಮಾಡಲಾಗುವುದು” ಎಂದು ಅವರು ಹೇಳಿದ್ದಾರೆ.

ಘಟನೆಯ ನಂತರ ತುರ್ತು ಸೇವೆಗಳು ಮತ್ತು ರಕ್ಷಣಾ ತಂಡಗಳು ಗಂಟೆಗಟ್ಟಲೆ ಸ್ಥಳದಲ್ಲಿಯೇ ಇದ್ದು, ಅವಶೇಷಗಳನ್ನು ತೆರವುಗೊಳಿಸುವ ಮತ್ತು ಇನ್ನೂ ಸಿಕ್ಕಿಹಾಕಿಕೊಂಡಿರುವ ವ್ಯಕ್ತಿಗಳಿಗಾಗಿ ಹುಡುಕಾಟ ಮುಂದುವರಿಸಿವೆ ಎಂದು TNIE ವರದಿ ತಿಳಿಸಿದೆ.

ಮುಕ್ತ್ಸರ್‌ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಖಿಲ್ ಚೌಧರಿ, ಪ್ರಾಥಮಿಕ ಮಾಹಿತಿಯ ಪ್ರಕಾರ ಕಾರ್ಖಾನೆಯ ಪಟಾಕಿ ಉತ್ಪಾದನಾ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ ಎಂದು ಹೇಳಿದ್ದಾರೆ. “ಸ್ಫೋಟದಿಂದಾಗಿ, ಕಟ್ಟಡ ಕುಸಿದಿದೆ. ಪ್ರಾಥಮಿಕವಾಗಿ, ಬೆಂಕಿಗಿಂತ ಹೆಚ್ಚಾಗಿ ಕಟ್ಟಡದ ಹಾನಿಯಿಂದ ಸಾವು ಸಂಭವಿಸಿದೆ ಎಂದು ತೋರುತ್ತದೆ” ಎಂದು ಅವರು ಹೇಳಿದ್ದಾರೆ. ಪಂಜಾಬ್‌ | ಪಟಾಕಿ ಘಟಕದಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಹಲ್ಗಾಮ್ ದಾಳಿಗೆ ಕೋಮು ಬಣ್ಣ ಬಳಿದು ವಿವಾದ ಸೃಷ್ಟಿಸಿದ ಶಂಕಿತ ಭಯೋತ್ಪಾದಕಿ ಪ್ರಜ್ಞಾ ಸಿಂಗ್ ಠಾಕೂರ್

ಪಹಲ್ಗಾಮ್ ದಾಳಿಗೆ ಕೋಮು ಬಣ್ಣ ಬಳಿದು ವಿವಾದ ಸೃಷ್ಟಿಸಿದ ಶಂಕಿತ ಭಯೋತ್ಪಾದಕಿ ಪ್ರಜ್ಞಾ ಸಿಂಗ್ ಠಾಕೂರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...