Homeಚಳವಳಿಪಂಜಾಬ್: 1500 ಕ್ಕೂ ಹೆಚ್ಚು ಜಿಯೋ ಟವರ್‌ಗಳಿಗೆ ಹಾನಿ ಮಾಡಿದ ರೈತ ಹೋರಾಟಗಾರರು

ಪಂಜಾಬ್: 1500 ಕ್ಕೂ ಹೆಚ್ಚು ಜಿಯೋ ಟವರ್‌ಗಳಿಗೆ ಹಾನಿ ಮಾಡಿದ ರೈತ ಹೋರಾಟಗಾರರು

"ಭಾನುವಾರದವರೆಗೆ 1,411 ಟೆಲಿಕಾಂ ಟವರ್‌ಗಳಿಗೆ ಹಾನಿಯಾಗಿದೆ. ಸೋಮವಾರ ಈ ಸಂಖ್ಯೆ 1,500ನ್ನು ದಾಟಿದೆ. ಜಲಂಧರ್‌ನಲ್ಲಿ ಜಿಯೊ ಸಂಸ್ಥೆಗೆ ಸೇರಿದ ಕೇಬಲ್‌ಗಳ ಮೂಟೆಗೆ ಬೆಂಕಿ ಹಚ್ಚಲಾಗಿದೆ"

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಪಂಜಾಬ್‌ನಲ್ಲಿ 1,500ಕ್ಕೂ ಅಧಿಕ ಜಿಯೋ ಟೆಲಿಕಾಂ ಟವರ್‌ಗಳಿಗೆ ಹಾನಿ ಮಾಡಿದ್ದು, ಇದರಿಂದ ಕೆಲವು ಪ್ರದೇಶಗಳಲ್ಲಿ ಸಂಪರ್ಕ ಸೇವೆಗೆ ತೊಡಕಾಗಿದೆ. ಈ ಮೂಲಕ ರೈತರು ತಮ್ಮ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುತ್ತಿದ್ದಾರೆ.

ಟೆಲಿಕಾಂ ಸೇವೆಯ ಟವರ್‌ಗಳಿಗೆ ವಿದ್ಯುತ್ ಸಂಪರ್ಕವನ್ನು ಕಡಿತ ಮಾಡುವುದರ ಮೂಲಕ ಮುಖೇಶ್ ಅಂಬಾನಿಯವರ ಜಿಯೋ ಸಂಸ್ಥೆ ಹಾಗೂ ಉದ್ಯಮಿ ಗೌತಮ್ ಅದಾನಿಗೆ ಸೇರಿದ ಸಂಸ್ಥೆಗಳ ಮೂಲಸೌಕರ್ಯಕ್ಕೆ ತೊಂದರೆಯುಂಟುಮಾಡಲಾಗಿದೆ.

ಭಾನುವಾರದವರೆಗೆ 1,411 ಟೆಲಿಕಾಂ ಟವರ್‌ಗಳಿಗೆ ಹಾನಿಯಾಗಿದೆ. ಸೋಮವಾರ ಈ ಸಂಖ್ಯೆ 1,500ನ್ನು ದಾಟಿದೆ. ಜಲಂಧರ್‌ನಲ್ಲಿ ಜಿಯೊ ಸಂಸ್ಥೆಗೆ ಸೇರಿದ ಕೇಬಲ್‌ಗಳ ಮೂಟೆಗೆ ಬೆಂಕಿ ಹಚ್ಚಲಾಗಿದೆ. ಪಂಜಾಬ್‌ನಲ್ಲಿ ಜಿಯೋ ಮೊಬೈಲ್ ಸಂಸ್ಥೆಯ 9,000ಕ್ಕೂ ಅಧಿಕ ಟವರ್‌ಗಳಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: TRP ಹಗರಣ: ಅರ್ನಾಬ್ ಲಕ್ಷಗಟ್ಟಲೆ ಲಂಚ ನೀಡಿದ್ದರು ಎಂದು ಒಪ್ಪಿಕೊಂಡ ಬಾರ್ಕ್ ಮಾಜಿ ಮುಖ್ಯಸ್ಥ

ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿಯಂತಹ ಕಾರ್ಪೊರೇಟ್ ಕಂಪನಿಗಳ ಪರವಾಗಿವೆ ಎಂದು ಆರೋಪಿಸಿರುವ ರೈತರು, ಅವರ ಎಲ್ಲಾ ಉತ್ಪನ್ನಗಳನ್ನು ಬಹಿಷ್ಕಾರ ಮಾಡಿದ್ದಾರೆ. ಇದು ದೇಶಾದ್ಯಂತ ವ್ಯಾಪಕ ಮೆಚ್ಚುಗೆ ಗಳಿಸಿ ಜಿಯೋ ಕಂಪನಿಗೆ ಹೊಡೆತ ಕೊಟ್ಟಿತ್ತು.

ಸೋಮವಾರ (ಡಿ.28) ಅದೇ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಆಂದೋಲನ ಆರಂಭವಾಗಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷರಾದ ಎಚ್.ಆರ್ ಬಸವರಾಜಪ್ಪನವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಸಾಮೂಹಿಕವಾಗಿ ಜಿಯೋ ಸಿಮ್‌ನಿಂದ ಏರ್‌ಟೆಲ್‌ ಸಿಮ್‌ಗೆ ಪೋರ್ಟ್ ಆಗಿದ್ದಾರೆ.

ಇದನ್ನೂ ಓದಿ: ನಾನು ದನದ ಮಾಂಸ ತಿನ್ನುತ್ತೇನೆ, ನೀನು ಯಾವನಯ್ಯ ನನ್ನನ್ನು ಕೇಳೋಕೆ: ಸಿದ್ದರಾಮಯ್ಯ

ಈಗಾಗಲೇ ಕಳೆದೊಂದು ತಿಂಗಳಿನಿಂದ #BoycottJio ಅಭಿಯಾನ ನಡೆಯುತ್ತಿದ್ದು ಲಕ್ಷಾಂತರ ರೈತರು-ಯುವಜನರು ಜಿಯೋದಿಂದ ಹೊರಬಂದಿದ್ದಾರೆ. ಡಿಸೆಂಬರ್ ಎರಡನೇ ವಾರದಲ್ಲಿ ಬರೋಬ್ಬರಿ 26 ಲಕ್ಷ ಜನ ಜಿಯೋ ಸಿಮ್‌ನಿಂದ ಪೋರ್ಟ್ ಆಗಿದ್ದರು. ಹಾಗಾಗಿ ಜಿಯೋ ಕಂಪನಿ ಏರ್‌ಟೆಲ್ ಮತ್ತು ವೋಡೋಪೋನ್ ಐಡಿಯಾ ವಿರುದ್ಧ ಟ್ರಾಯ್ (Telecom Regulator Authority of India) ಬಳಿ ದೂರು ನೀಡಿ, ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತರು ಕರೆ ನೀಡಿರುವ ‘ಬಾಯ್ಕಾಟ್ ಜಿಯೋ’ ಹಿಂದೆ ಈ ಕಂಪನಿಗಳ ಪಿತೂರಿಯಿದೆ ಎಂದು ಆರೋಪಿಸಿತ್ತು.

ಈಗ ಹೊರಬಿದ್ದಿರುವ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿನ ಸಕ್ರಿಯ ಬಳಕೆದಾರರ ವಿಭಾಗದಲ್ಲಿ ಏರ್‌ಟೆಲ್ ಜಿಯೋವನ್ನು ಹಿಂದಿಕ್ಕಿದೆ. ಏರ್‌ಟೆಲ್‌ಗೆ ಒಟ್ಟು 33.3% ಸಕ್ರಿಯ ಬಳಕೆದಾರರಿದ್ದರೆ ಜಿಯೋಗೆ 33.2% ಸಕ್ರಿಯ ಬಳಕೆದಾರರಿದ್ದಾರೆ. ಅಲ್ಲದೇ ನಿರಂತರವಾಗಿ ಜಿಯೋದಿಂದ ಏರ್‌ಟೆಲ್‌ಗೆ ಪೋರ್ಟ್‌ ಆಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇದು ಜಿಯೋವನ್ನು ಆತಂಕಕ್ಕೆ ದೂಡಿದೆ. ಇಂತಹ ಸಂದರ್ಭದಲ್ಲಿ ಮತ್ತಷ್ಟು ಜನರು ಜಿಯೋದಿಂದ ಪೋರ್ಟ್ ಆಗಲು ಸಿದ್ದರಾಗಿದ್ದಾರೆ.


ಇದನ್ನೂ ಓದಿ: ಕಳಚಿಕೊಳ್ಳುತ್ತಿದೆ NDA ನ ಒಂದೊಂದೇ ಕೊಂಡಿ – BJP ಗೆ ಆಘಾತ ನೀಡಿದ ತಮಿಳುನಾಡು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...