Homeಚಳವಳಿಪ್ರಧಾನಿ ಮೋದಿ, ಅಂಬಾನಿ, ಅದಾನಿ ಪ್ರತಿಮೆ ಸುಟ್ಟು ಕೃಷಿ ಮಸೂದೆಗಳಿಗೆ ರೈತರ ವಿರೋಧ!

ಪ್ರಧಾನಿ ಮೋದಿ, ಅಂಬಾನಿ, ಅದಾನಿ ಪ್ರತಿಮೆ ಸುಟ್ಟು ಕೃಷಿ ಮಸೂದೆಗಳಿಗೆ ರೈತರ ವಿರೋಧ!

ಪ್ರತಿಭಟನೆಯ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ನೆಟ್ಟಿಗರು ಕರ್ನಾಟಕದಲ್ಲೂ ಈ ರೀತಿಯ ಪ್ರತಿಭಟನೆ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. 

- Advertisement -
- Advertisement -

ಕೇಂದ್ರ ಸರ್ಕಾರ ಮತ್ತು ವಿವಾದಿತ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ರೈತ ವಿರೋಧಿ ಕಾನೂನು ಎಂದು ವಿರೋಧಿಸಿ ರೈತರು, ಕಾರ್ಮಿಕರು ಇಂದು ಪ್ರಧಾನಿ ನರೇಂದ್ರ ಮೋದಿ, ಅನಿಲ್ ಅಂಬಾನಿ ಮತ್ತು ಅದಾನಿಯ ಪ್ರತಿಮೆಗಳನ್ನು ಸುಟ್ಟು ದಸರಾ ಆಚರಿಸಿದ್ದಾರೆ.

ಪಂಜಾಬ್‌ನ 800ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಇಂದು ಈ ರೀಯಾಗಿ ಪ್ರತಿಭಟನೆ ನಡೆಸಿ ಕಾಯ್ದೆಗಳಿಗೆ ವಿರೋಧ ವ್ಯಕ್ತಪಡಿಸಲಾಗಿದೆ. ಪ್ರತಿಭಟನೆಯಲ್ಲಿ ರೈತರು, ರೈತ ಸಂಘಟನೆಗಳು ಕಾರ್ಮಿಕರು, ಹೋರಾಟಗಾಗರು ಭಾಗವಹಿಸಿದ್ದಾರೆ.

ರೈತ-ಮಜ್ದೂರ್ ಸಂಘರ್ಷ ಸಮಿತಿಯ ಅಧಿಕಾರಿಗಳಾದ ಇಂದ್ರಜಿತ್ ಸಿಂಗ್ ಬಾತ್, ಧರಂ ಸಿಂಗ್ ಸಿಧು, ಬಲ್ಜಿಂದರ್ ಸಿಂಗ್ ಮತ್ತು ನರಿಂದರ್ ಪಾಲ್ ಸಿಂಗ್ ಜಟ್ಲಾ ಅವರು, ಫಿರೋಜ್‌ಪುರದ ವಿವಿಧ ಹಳ್ಳಿಗಳಲ್ಲಿನ ರೈತ-ಕಾರ್ಮಿಕರು ಪ್ರಧಾನಿ ಮೋದಿ, ಅಂಬಾನಿ ಮತ್ತು ಅದಾನಿ ಬಗ್ಗೆ ತಿಳಿದುಕೊಂಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಕೇಂದ್ರದ ಕೃಷಿ ಕಾಯ್ದೆಗಳಿಗೆ ಸೆಡ್ಡು: ಪಂಜಾಬ್‌ ಅಸೆಂಬ್ಲಿಯಲ್ಲಿ ಮೂರು ಹೊಸ ಮಸೂದೆಗಳ ಮಂಡನೆ!

ಪ್ರತಿಭಟನಾಕಾರರು ಪ್ರಧಾನಿ ನರೇಂದ್ರ ಮೋದಿ, ಅಂಬಾನಿ ಮತ್ತು ಅದಾನಿ ಅವರ ಪ್ರತಿಮೆಗಳನ್ನು ಮಾಡಿ, ಅವುಗಳನ್ನು ಸುಟ್ಟು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ರೈತ ವಿರೋಧಿ ಕೃಷಿ ಕಾನೂನುಗಳು ಮತ್ತು ವಿದ್ಯುತ್ ತಿದ್ದುಪಡಿ ಕಾಯ್ದೆ -2020 ಅನ್ನು ತಕ್ಷಣವೇ ರದ್ದುಪಡಿಸಬೇಕು ಎಂದು ರೈತರು ಒತ್ತಾಯಿಸಿದರು.

ಪ್ರತಿಭಟನೆಯ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ನೆಟ್ಟಿಗರು ಕರ್ನಾಟಕದಲ್ಲೂ ಈ ರೀತಿಯ ಪ್ರತಿಭಟನೆ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ರೈತರ ಪ್ರತಿಭಟನೆ
PC:[email protected]

ಮತ್ತೊಬ್ಬ ಫೇಸ್‌ಬುಕ್ ಬಳಕೆದಾರರು “ಪಂಜಾಬಿನಲ್ಲಿ ಈ ಬಾರಿ ಅತ್ಯಂತ ವಿಶಿಷ್ಟ ರೀತಿಯ ದಸರಾ ಆಚರಣೆ.!!” ಎಂದು ಶೀರ್ಷಿಕೆ ನೀಡಿ, ಪ್ರತಿಭಟನೆಯ ವಿಡಿಯೋ ಹಂಚಿಕೊಂಡಿದ್ದಾರೆ.

PC: Facebook @Aditya Hegde

ಕೇಂದ್ರವು ಇತ್ತೀಚೆಗೆ ಜಾರಿಗೆ ತಂದ ಮೂರು ಕೃಷಿ ಕಾನೂನುಗಳ ವಿರುದ್ಧ ಸಾಂಕೇತಿಕ ಪ್ರತಿಭಟನೆಯಾಗಿ ದಸರಾ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಮೆಯನ್ನು ಸುಡುವುದಾಗಿ ಪಂಜಾಬ್ ಯುವ ಕಾಂಗ್ರೆಸ್ ನಿನ್ನೆ ತಿಳಿಸಿತ್ತು.


ಇದನ್ನೂ ಓದಿ: ಕೃಷಿ ಮಸೂದೆ: ಪಂಜಾಬ್‌ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಪ್ ಶಾಸಕರ ಅಹೋರಾತ್ರಿ ಪ್ರತಿಭಟನೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ ವೀಕ್ಷಿಸುತ್ತಾ ಬೀದಿಯಲ್ಲಿ ತಿರುಗಾಡುವ ಯುವಕರ ಖಾತೆಗಳಿಗೆ ಹಣ...

0
"ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ಗಳನ್ನು ಬಳಸಿಕೊಂಡು ಬೀದಿಗಳಲ್ಲಿ ತಿರುಗುತ್ತಿರುವ ನಮ್ಮ ಯುವಕರ ಬ್ಯಾಂಕ್ ಖಾತೆಗಳಿಗೆ ವಾರ್ಷಿಕ ಒಂದು ಲಕ್ಷ ರೂಪಾಯಿ ಮತ್ತು ತಿಂಗಳಿಗೆ 8,500 ರೂಪಾಯಿಗಳನ್ನು ಜಮಾ ಮಾಡಲಾಗುತ್ತದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ"...