Homeಮುಖಪುಟಪಂಜಾಬ್ ಪ್ರವಾಹ: ಸಾವಿನ ಸಂಖ್ಯೆ 46ಕ್ಕೆ ಏರಿಕೆ, 14,000 ಕೋಟಿ ರೂ.ಗೆ ತಲುಪಿದ ನಷ್ಟದ ಪ್ರಮಾಣ

ಪಂಜಾಬ್ ಪ್ರವಾಹ: ಸಾವಿನ ಸಂಖ್ಯೆ 46ಕ್ಕೆ ಏರಿಕೆ, 14,000 ಕೋಟಿ ರೂ.ಗೆ ತಲುಪಿದ ನಷ್ಟದ ಪ್ರಮಾಣ

- Advertisement -
- Advertisement -

ಕಳೆದ ನಾಲ್ಕು ದಶಕಗಳಲ್ಲಿಯೇ ಭೀಕರ ಪ್ರವಾಹವನ್ನು ಎದುರಿಸುತ್ತಿರುವ ಪಂಜಾಬ್‌ನಲ್ಲಿ ಕಳೆದ ಒಂದು ತಿಂಗಳಿನಿಂದ ನಲವತ್ತಾರು ಜನರು ಸಾವನ್ನಪ್ಪಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಶನಿವಾರದ ದೈನಂದಿನ ಪ್ರವಾಹ ಬುಲೆಟಿನ್‌ನಲ್ಲಿ ವರದಿಯಾಗಿರುವಂತೆ, ಹೊಸದಾಗಿ ಮೂರು ಸಾವುಗಳು ದಾಖಲಾದ ನಂತರ ಸಾವಿನ ಸಂಖ್ಯೆ 46ಕ್ಕೆ ಏರಿಕೆಯಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಈ ಮಾಹಿತಿಯು ಆಗಸ್ಟ್ 1 ರಿಂದ ಸೆಪ್ಟೆಂಬರ್ 6 ರ ನಡುವಿನ ಅವಧಿಯನ್ನು ಒಳಗೊಂಡಿದೆ.

ರಾಜ್ಯ ಸರ್ಕಾರವು ಪ್ರವಾಹದಿಂದ 14,000 ಕೋಟಿ ರೂಪಾಯಿ ನಷ್ಟವನ್ನು ಅಂದಾಜಿಸಿದೆ ಎಂದು ವರದಿಯಾಗಿದೆ.

ಬುಲೆಟಿನ್ ಪ್ರಕಾರ, 1.75 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿನ ಬೆಳೆಗಳು ಹಾನಿಗೊಳಗಾಗಿದ್ದು, 1,996 ಹಳ್ಳಿಗಳ 3.87 ಲಕ್ಷಕ್ಕೂ ಹೆಚ್ಚು ಜನರ ಮೇಲೆ ಪರಿಣಾಮ ಬೀರಿದೆ.

ಪಂಜಾಬ್ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ತಕ್ಷಣಕ್ಕೆ ಆರ್ಥಿಕ ಸಹಾಯ ಕೋರಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಭಾರತೀಯ ಸೇನೆ, ಗಡಿ ಭದ್ರತಾ ಪಡೆ, ಪಂಜಾಬ್ ಪೊಲೀಸರು ಮತ್ತು ಜಿಲ್ಲಾ ಅಧಿಕಾರಿಗಳನ್ನು ಒಳಗೊಂಡ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಪಿಟಿಐಗೆ ತಿಳಿಸಿದೆ.

ಕಳೆದ ಒಂದು ತಿಂಗಳಿನಿಂದ ಪಂಜಾಬ್ ಮತ್ತು ನೆರೆಯ ಪರ್ವತ ರಾಜ್ಯಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಎಲ್ಲಾ ಜಿಲ್ಲೆಗಳಲ್ಲಿ ಸುಮಾರು 2,000 ಹಳ್ಳಿಗಳ ಮೇಲೆ ಪರಿಣಾಮ ಬೀರಿದೆ ಎಂದು ರಾಜ್ಯ ಹಣಕಾಸು ಸಚಿವ ಹರ್ಪಾಲ್ ಸಿಂಗ್ ಚೀಮಾ ಹೇಳಿದ್ದಾರೆ.

ಸುಮಾರು 200 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದ್ದು, 7,000 ಕ್ಕೂ ಹೆಚ್ಚು ನಿರಾಶ್ರಿತರಿಗೆ ಆಶ್ರಯ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದ ಉತ್ತರದಾಯಿತ್ವ ಮತ್ತು ಬೆಂಬಲದ ಅವಶ್ಯಕತೆಯಿದೆ ಎಂದು ಆಮ್ ಆದ್ಮಿ ಪಕ್ಷದ ನಾಯಕ ಹೇಳಿದ್ದಾರೆ.

ಪಂಜಾಬ್‌ನಲ್ಲಿನ ಬಿಕ್ಕಟ್ಟಿಗೆ ‘ರಾಜಕೀಯ ಅವಕಾಶವಾದ’ಕ್ಕಿಂತ ಸಹಯೋಗದ ಪ್ರತಿಕ್ರಿಯೆಯ ಅಗತ್ಯವಿದೆ ಎಂದಿದ್ದಾರೆ.

ಉತ್ತರ ಭಾರತದ ಇತರ ಭಾಗಗಳಲ್ಲಿಯೂ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಹಿಮಾಚಲ ಪ್ರದೇಶದಲ್ಲಿ ಜೂನ್ 20 ರಿಂದ ಸೆಪ್ಟೆಂಬರ್ 7 ರವರೆಗೆ ಮಳೆ ಸಂಬಂಧಿತ ಘಟನೆಗಳಲ್ಲಿ 366 ಸಾವುಗಳು ಸಂಭವಿಸಿವೆ ಮತ್ತು ಒಟ್ಟು 4,079 ಕೋಟಿ ರೂ. ನಷ್ಟವಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಇವುಗಳು ಭಾರೀ ಮಳೆಯಿಂದ ಉಂಟಾದ ಮೇಘಸ್ಪೋಟ, ದಿಢೀರ್ ಪ್ರವಾಹ ಮತ್ತು ಭೂಕುಸಿತಗಳಿಂದಾಗಿ ಸಂಭವಿಸಿವೆ.

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಯಮುನಾ ಕಣಿವೆಯಲ್ಲಿ ಶನಿವಾರ ಮೇಘಸ್ಫೋಟ ಸಂಭವಿಸಿದ್ದು, ನೌಗಾಂವ್ ಪ್ರದೇಶದಲ್ಲಿ ಭಾರಿ ಹಾನಿಯಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಯಮುನಾ ಕಣಿವೆಯ ಸಿಯೋರಿ ಫಾಲ್ ಪಟ್ಟಿ ಎಂಬಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಪ್ರವಾಹದಿಂದ ತುಂಬಿದ ಹೊಳೆಯಿಂದ ಕೆಸರು ತಗ್ಗು ಪ್ರದೇಶಗಳಿಗೆ ನುಗ್ಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರಶಾಂತ್ ಆರ್ಯ ತಿಳಿಸಿದ್ದಾರೆ.

ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ ಮತ್ತು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಇಲ್ಲಿಯವರೆಗೆ ಯಾವುದೇ ಜೀವಹಾನಿ ವರದಿಯಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.

‘ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಶೇ. 75 ರಷ್ಟು ಸುಂಕ ವಿಧಿಸಿ..’; ಪ್ರಧಾನಿ ಮೋದಿಗೆ ಕೇಜ್ರಿವಾಲ್ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...