Homeಮುಖಪುಟಹರಿಯಾಣಕ್ಕೆ ಒಂದು ಹನಿ ನೀರನ್ನು ಸಹ ನೀಡಲ್ಲ: ಪಂಜಾಬ್ ಸರ್ಕಾರ ತೀರ್ಮಾನ

ಹರಿಯಾಣಕ್ಕೆ ಒಂದು ಹನಿ ನೀರನ್ನು ಸಹ ನೀಡಲ್ಲ: ಪಂಜಾಬ್ ಸರ್ಕಾರ ತೀರ್ಮಾನ

- Advertisement -
- Advertisement -

ಪಂಜಾಬ್‌ನ ಆಮ್ ಆದ್ಮಿ ಪಕ್ಷದ ಸರ್ಕಾರ ಸೋಮವಾರ ವಿಧಾನಸಭೆಯಲ್ಲಿ ನೆರೆಯ ಹರಿಯಾಣಕ್ಕೆ ತನ್ನ ಕಡೆಯಿಂದ “ಒಂದು ಹನಿ ನೀರನ್ನು ಸಹ” ಬಿಡುವುದಿಲ್ಲ ಎಂದು ನಿರ್ಣಯ ಕೈಗೊಂಡಿದೆ ಎಂದು ದಿ ಹಿಂದೂ ವರದಿ ಮಾಡಿದೆ. ನೀರು ಹಂಚಿಕೆಗೆ ಸಂಬಂಧಿಸಿದಂತೆ ಎರಡು ರಾಜ್ಯಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಇದು ಪಂಜಾಬ್ ಈ ತೀರ್ಮಾನ ಮಾಡಿದೆ. ಹರಿಯಾಣಕ್ಕೆ ಒಂದು ಹನಿ

ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ ಮತ್ತು ಭಾಕ್ರಾ ಬಿಯಾಸ್ ನಿರ್ವಹಣಾ ಮಂಡಳಿಯ ಮೂಲಕ ಬಿಜೆಪಿ ಪಕ್ಷವೂ ಪಂಜಾಬ್‌ನ ಹಕ್ಕುಗಳನ್ನು “ಕಿತ್ತುಕೊಳ್ಳಲು” ಪ್ರಯತ್ನಿಸುತ್ತಿದೆ ಎಂದು ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ರಾಜ್ಯ ಜಲಸಂಪನ್ಮೂಲ ಸಚಿವ ಬರಿಂದರ್ ಕುಮಾರ್ ಗೋಯಲ್ ಮಂಡಿಸಿದ ನಿರ್ಣಯದ ವೇಳೆ ಆರೋಪಿಸಿದ್ದಾರೆ. ಹರಿಯಾಣದಲ್ಲಿ ಬಿಜೆಪಿ ಆಡಳಿತ ಪಕ್ಷವಾಗಿದೆ.

ಭಾಕ್ರಾ ನಂಗಲ್ ಮತ್ತು ಭಾಕ್ರಾ ಬಿಯಾಸ್ ಯೋಜನೆಗಳ ಆಡಳಿತ ಮತ್ತು ನಿರ್ವಹಣೆಯನ್ನು ಅದರ ಮಂಡಳಿಯು ಮಾಡುತ್ತದೆ. ಇದು ಪಂಜಾಬ್, ಹರಿಯಾಣ, ರಾಜಸ್ಥಾನ, ಹಿಮಾಚಲ ಪ್ರದೇಶ, ದೆಹಲಿ ಮತ್ತು ಚಂಡೀಗಢಕ್ಕೆ ನೀರು ಮತ್ತು ವಿದ್ಯುತ್ ಸರಬರಾಜನ್ನು ನಿಯಂತ್ರಿಸುತ್ತದೆ.

ಭಾಕ್ರಾ ನಂಗಲ್ ಯೋಜನೆಯು ಸತ್ಲೆಜ್ ನದಿಯ ಮೇಲೆ ಎರಡು ಅಣೆಕಟ್ಟುಗಳನ್ನು ಒಳಗೊಂಡಿದೆ. ಹಿಮಾಚಲ ಪ್ರದೇಶದ ಭಾಕ್ರಾ ಅಣೆಕಟ್ಟು ಮತ್ತು ಪಂಜಾಬ್‌ನ ನಂಗಲ್ ಅಣೆಕಟ್ಟು ಇದರಲ್ಲಿ ಸೇರಿವೆ. ಬಿಯಾಸ್ ಯೋಜನೆಯು ಬಿಯಾಸ್-ಸತ್ಲೆಜ್ ಲಿಂಕ್ ಕಾಲುವೆ ಮತ್ತು ಬಿಯಾಸ್ ಅಣೆಕಟ್ಟುಗಳನ್ನು ಒಳಗೊಂಡಿರುವ ಬಹುಪಯೋಗಿ ನದಿ ಕಣಿವೆ ಯೋಜನೆಯಾಗಿದೆ.

ಭಾಕ್ರಾ ನಂಗಲ್‌ನಿಂದ ನೀರು ಬಿಡುಗಡೆ ಮಾಡುವಂತೆ ಹರಿಯಾಣ ಸಲ್ಲಿಸಿದ ಮನವಿಯ ಮೇಲೆ ಪ್ರಸ್ತುತ ಗದ್ದಲ ಭುಗಿಲೆದ್ದಿದ್ದು, ಇದನ್ನು ಪಂಜಾಬ್ ವಿರೋಧಿಸಿದೆ. ಭಾಕ್ರಾ ಬಿಯಾಸ್ ನಿರ್ವಹಣಾ ಮಂಡಳಿಯು ನೀರಿನ ವಿತರಣೆಯ ಕುರಿತು ತೆಗೆದುಕೊಂಡ ನಿರ್ಧಾರಗಳನ್ನು ಪಂಜಾಬ್ ಸರ್ಕಾರ ಇನ್ನು ಮುಂದೆ ಸ್ವೀಕರಿಸುವುದಿಲ್ಲ ಎಂದು ನಿರ್ಣಯದಲ್ಲಿ ಹೇಳಲಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಪಂಜಾಬ್‌ನ ನೀರನ್ನು ಮಂಡಳಿಯು ವರ್ಷಗಳಿಂದ ಇತರ ರಾಜ್ಯಗಳಿಗೆ ತಿರುಗಿಸುತ್ತಿತ್ತು ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ವಿಧಾನಸಭೆಯಲ್ಲಿ ಹೇಳಿಕೊಂಡಿದ್ದಾರೆ. “ಈಗ ಬಿಜೆಪಿ ಸರ್ಕಾರವು ತನ್ನ ರಾಜಕೀಯ ಹಿತಾಸಕ್ತಿಗಳಿಗಾಗಿ ಈ ಮಂಡಳಿಯನ್ನು ಬಳಸಲು ಪ್ರಾರಂಭಿಸಿದೆ” ಎಂದು ಅವರು ಹೇಳಿದ್ದಾರೆ.

“ಪಂಜಾಬ್‌ನೊಂದಿಗೆ ಸಮಾಲೋಚಿಸದೆ, ಮಧ್ಯರಾತ್ರಿಯಲ್ಲಿ ಸಭೆಗಳನ್ನು ಕರೆಯಲಾಗುತ್ತಿದೆ ಮತ್ತು ಇತರ ರಾಜ್ಯಗಳ ಒತ್ತಡದ ಮೇರೆಗೆ ಪಂಜಾಬ್‌ನ ನ್ಯಾಯಯುತ ಪಾಲನ್ನು ಕಸಿದುಕೊಳ್ಳಲಾಗುತ್ತಿದೆ.” ಎಂದು ಅವರು ಹೇಳಿದ್ದಾರೆ.

ಈ ನಡೆಯನ್ನು “ಅಸಂವಿಧಾನಿಕ” ಮತ್ತು “ಕಾನೂನುಬಾಹಿರ” ಎಂದು ಕರೆದ ಮುಖ್ಯಮಂತ್ರಿ, ಪಂಜಾಬ್‌ನ ನೀರನ್ನು ಹರಿಯಾಣಕ್ಕೆ ಬಲವಂತವಾಗಿ ತಿರುಗಿಸಲು ಭಾಕ್ರಾ ಬಿಯಾಸ್ ನಿರ್ವಹಣಾ ಮಂಡಳಿ ಸಭೆಗಳನ್ನು ಕರೆಯಲಾಗುತ್ತಿದೆ ಎಂದು ಹೇಳಿದ್ದಾರೆ. ಮಾರ್ಚ್ 31 ರ ವೇಳೆಗೆ ಹರಿಯಾಣ ತನ್ನ ವಾರ್ಷಿಕ ಹಂಚಿಕೆಯ ನೀರನ್ನು ಈಗಾಗಲೇ ಬಳಸಿಕೊಂಡಿದೆ ಎಂದು ಅವರು ಹೇಳಿದ್ದಾರೆ.

ಸಟ್ಲೆಜ್ ಮತ್ತು ಬಿಯಾಸ್ ನದಿಗಳ ನೀರು ಸಂಪೂರ್ಣವಾಗಿ ಪಂಜಾಬ್‌ಗೆ ಸೇರಿತ್ತು ಎಂದು ಸಿಎಂ ಹೇಳಿದ್ದು, “ಈಗ ನಾವು ಈ ನೀರನ್ನು ಸಂಪೂರ್ಣವಾಗಿ ನಮಗಾಗಿ ಬಳಸುತ್ತೇವೆ” ಎಂದು ಅವರು ಹೇಳಿದ್ದಾರೆ. ಅಣೆಕಟ್ಟು ಸುರಕ್ಷತಾ ಕಾಯ್ದೆಯನ್ನು ಪಂಜಾಬ್ ಮತ್ತು ಅದರ ಹಕ್ಕುಗಳ ಮೇಲಿನ “ಗಂಭೀರ ದಾಳಿ” ಎಂದು ಇದೇ ವೇಳೆ ಸಿಎಂ ಕರೆದಿದ್ದಾರೆ.

ಈ ಕಾಯ್ದೆಯು ಅಣೆಕಟ್ಟುಗಳ ಕಣ್ಗಾವಲು, ಪರಿಶೀಲನೆ, ಕಾರ್ಯಾಚರಣೆ ಮತ್ತು ನಿರ್ವಹಣೆಗೆ ಒಂದು ಚೌಕಟ್ಟನ್ನು ಒದಗಿಸುತ್ತದೆ. “ಈ ಸದನವು 2021 ರ ಅಣೆಕಟ್ಟು ಸುರಕ್ಷತಾ ಕಾಯ್ದೆಯನ್ನು ಪಂಜಾಬ್‌ನ ಹಕ್ಕುಗಳ ಮೇಲಿನ ದಾಳಿ ಎಂದು ಪರಿಗಣಿಸುತ್ತದೆ” ಎಂದು ನಿರ್ಣಯವು ಹೇಳಿದೆ ಎಂದು ದಿ ಹಿಂದೂ ವರದಿ ಮಾಡಿದೆ.

“ಅಣೆಕಟ್ಟು ಸಂಪೂರ್ಣವಾಗಿ ರಾಜ್ಯದ ಗಡಿಯೊಳಗೆ ಇದ್ದರೂ ಸಹ, ರಾಜ್ಯಗಳ ನದಿಗಳು ಮತ್ತು ಅಣೆಕಟ್ಟುಗಳನ್ನು ನೇರವಾಗಿ ನಿಯಂತ್ರಿಸಲು ಕೇಂದ್ರ ಸರ್ಕಾರಕ್ಕೆ ಈ ಕಾನೂನು ಸಂಪೂರ್ಣ ಅಧಿಕಾರ ನೀಡುತ್ತದೆ. ಈ ಕಾಯ್ದೆಯು ದೇಶದ ಫೆಡರಲ್ ರಚನೆಗೆ ವಿರುದ್ಧವಾಗಿದ್ದು, ಪಂಜಾಬ್‌ನಂತಹ ರಾಜ್ಯಗಳ ನೀರಿನ ಮೇಲಿನ ಸಾರ್ವಭೌಮ ಹಕ್ಕನ್ನು ದುರ್ಬಲಗೊಳಿಸಿದೆ” ಎಂದು ನಿರ್ಣಯ ಹೇಳಿದೆ.

“ಆದ್ದರಿಂದ, ಈ ಸದನವು ಕೇಂದ್ರ ಸರ್ಕಾರದಿಂದ ಅಣೆಕಟ್ಟು ಸುರಕ್ಷತಾ ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸಬೇಕೆಂದು ಒತ್ತಾಯಿಸುತ್ತದೆ. ಪಂಜಾಬ್ ಸರ್ಕಾರವು ಈ ಕಾಯ್ದೆಯನ್ನು ಸಂಪೂರ್ಣವಾಗಿ ತಿರಸ್ಕರಿಸುತ್ತದೆ” ಎಂದು ನಿರ್ಣಯವು ಹೇಳಿದೆ.

ಪಂಜಾಬ್ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಪರ್ತಾಪ್ ಸಿಂಗ್ ಬಾಜ್ವಾ ಕೂಡ ಈ ನಿರ್ಣಯವನ್ನು ಬೆಂಬಲಿಸಿದ್ದಾರೆ. “ಒಂದು ಹನಿ ನೀರು ಕೂಡ ಬಿಡಲು ಇಲ್ಲ” ಎಂದು ಕಾಂಗ್ರೆಸ್ ನಾಯಕಿ ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ. ಹರಿಯಾಣಕ್ಕೆ ಒಂದು ಹನಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತಮಿಳುನಾಡು| ಎರಡು ಸಮುದಾಯಗಳ ನಡುವೆ ಘರ್ಷಣೆ: ದಲಿತ ಕುಟುಂಬದ ಗುಡಿಸಲಿಗೆ ಬೆಂಕಿ

ತಮಿಳುನಾಡು| ಎರಡು ಸಮುದಾಯಗಳ ನಡುವೆ ಘರ್ಷಣೆ: ದಲಿತ ಕುಟುಂಬದ ಗುಡಿಸಲಿಗೆ ಬೆಂಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...