Homeಮುಖಪುಟಹತ್ಯೆ ಪ್ರಕರಣ: ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಹತ್ಯೆ ಪ್ರಕರಣ: ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

- Advertisement -
- Advertisement -

ರಂಜಿತ್ ಸಿಂಗ್ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಖುಲಾಸೆಗೊಳಿಸಿದೆ.

ಡೇರಾ ಮಾಜಿ ಮ್ಯಾನೇಜರ್ ರಂಜಿತ್ ಸಿಂಗ್ ಹತ್ಯೆಗೆ ಸಂಚು ರೂಪಿಸಿದ್ದಕ್ಕಾಗಿ ಹರಿಯಾಣದ ಪಂಚಕುಲದ ಸಿಬಿಐ ನ್ಯಾಯಾಲಯವು 2022ರಲ್ಲಿ ಗುರ್ಮೀತ್ ಸಿಂಗ್ ಮತ್ತು ಇತರ ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ತನ್ಮ ಮಹಿಳಾ ಅನುಯಾಯಿಗಳ ಮೇಲೆ ಗುರ್ಮೀತ್ ಸಿಂಗ್ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಆರೋಪಿಸಿದ್ದ ಪತ್ರವೊಂದು 2001ರಲ್ಲಿ ಬಯಲಾಗಿತ್ತು. ಇದರ ಹಿಂದೆ ರಂಜಿತ್ ಸಿಂಗ್ ಪಾತ್ರವಿದೆ ಎಂದು ಶಂಕಿಸಿ, ಆತನನ್ನು ಜುಲೈ 10,2002ರಂದು ಗುಂಡಿಕ್ಕಿ ಹತ್ಯೆ ಮಾಡಿದ ಅಪರಾಧವನ್ನು ಗುರ್ಮೀತ್ ವಿರುದ್ದ ಸಿಬಿಐ ತನ್ನ ಚಾರ್ಜ್‌ ಶೀಟ್‌ನಲ್ಲಿ ದಾಖಲಿಸಿತ್ತು. ಪಂಚಕುಲದ ಸಿಬಿಐ ನ್ಯಾಯಾಲಯ ಕೂಡ ಆತನನ್ನು ದೋಷಿ ಎಂದು ಘೋಷಿಸಿ ಶಿಕ್ಷೆ ಪ್ರಕಟಿಸಿತ್ತು.

ಇದರ ವಿರುದ್ದ ಗುರ್ಮೀತ್ ಸಿಂಗ್ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಸುರೇಶ್ ಠಾಕೂರ್ ಮತ್ತು ನ್ಯಾಯಮೂರ್ತಿ ಲಲಿತ್ ಬಾತ್ರಾ ಅವರ ಹೈಕೋರ್ಟ್ ವಿಭಾಗೀಯ ಪೀಠ ಐಪಿಸಿ ಸೆಕ್ಷನ್ 120-ಬಿ, 302, 506 ರ ಅಡಿಯಲ್ಲಿ ಅಂಗೀಕರಿಸಿತ್ತು.

ಗುರ್ಮೀತ್ ಮೇಲಿದೆ ಹಲವು ಪ್ರಕರಣ

ತನ್ನ ಇಬ್ಬರು ಶಿಷ್ಯಂದಿರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಡೇರಾ ಮುಖ್ಯಸ್ಥ ಈಗಾಗಲೇ 20 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾನೆ. ಪತ್ರಕರ್ತ ರಾಮ್ ಚಂದರ್ ಛತ್ರಪತಿಯನ್ನು ಹತ್ಯೆ ಮಾಡಿದ ಮತ್ತೊಂದು ಪ್ರಕರಣದಲ್ಲಿ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಈ 20 ವರ್ಷಗಳ ಅವಧಿ ಮುಗಿದ ನಂತರ ಜಾರಿಯಾಗಲಿದೆ.

ಇತ್ತೀಚೆಗೆ, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಸ್ವಯಂ ಘೋಷಿತ ದೇವಮಾನವ ರಾಮ್ ರಹೀಮ್‌ಗೆ ಶರಣಾಗುವಂತೆ ನಿರ್ದೇಶನ ನೀಡಿತ್ತು. ಹೈಕೋರ್ಟ್‌ನ ಅನುಮತಿಯಿಲ್ಲದೆ ಪೆರೋಲ್ ಮಂಜೂರು ಮಾಡದಂತೆ ಹರಿಯಾಣ ಸರ್ಕಾರಕ್ಕೆ ಸೂಚಿಸಿತ್ತು. ಈ ಆದೇಶವನ್ನು ತೆರವು ಮಾಡಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯು ಹೈಕೋರ್ಟ್‌ನಲ್ಲಿ ಪರಿಗಣನೆಗೆ ಬಾಕಿ ಇದೆ.

ಇದನ್ನೂ ಓದಿ : ಪಾಯಲ್ ಕಪಾಡಿಯಾ ಬಗ್ಗೆ ಭಾರತ ಹೆಮ್ಮೆ ಪಡುತ್ತಿದ್ದರೆ ಅವರ ಮೇಲಿನ ಕೇಸ್ ಹಿಂಪಡೆಯಿರಿ: ಶಶಿ ತರೂರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...