Homeಮುಖಪುಟಪ್ರವಾಹಕ್ಕೆ ನಲುಗಿದ ಪಂಜಾಬ್: ಇದುವರೆಗೆ 37 ಮಂದಿ ಸಾವು, ಸಂಕಷ್ಟದಲ್ಲಿ 23 ಜಿಲ್ಲೆಗಳ ಜನತೆ

ಪ್ರವಾಹಕ್ಕೆ ನಲುಗಿದ ಪಂಜಾಬ್: ಇದುವರೆಗೆ 37 ಮಂದಿ ಸಾವು, ಸಂಕಷ್ಟದಲ್ಲಿ 23 ಜಿಲ್ಲೆಗಳ ಜನತೆ

- Advertisement -
- Advertisement -

ಪಂಜಾಬ್‌ನಲ್ಲಿ ಭಾರೀ ಪ್ರವಾಹದಿಂದ ಇದುವರೆಗೆ 37 ಜನರು ಪ್ರಾಣ ಕಳೆದುಕೊಂಡಿದ್ದು, 23 ಜಿಲ್ಲೆಗಳಲ್ಲಿ ಜನ ಜೀವನ ಸಂಪೂರ್ಣ ಸಂಕಷ್ಟಕ್ಕೆ ಸಿಲುಕಿದೆ. ವರದಿಗಳ ಪ್ರಕಾರ, 1988ರ ನಂತರ ರಾಜ್ಯ ಎದುರಿಸಿದ ಅತ್ಯಂತ ಭೀಕರ ಪ್ರವಾಹ ಇದಾಗಿದೆ. ನಿರಂತರ ಸುರಿಯುತ್ತಿರುವ ಮಳೆ ಪರಿಸ್ಥಿತಿಯನ್ನು ಇನ್ನಷ್ಟು ಹದೆಗೆಡಿಸಿದೆ.

ಹಿಮಾಚಲ ಪ್ರದೇಶ ಮತ್ತು ಜಮ್ಮು ಕಾಶ್ಮೀರದ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಸಟ್ಲೆಜ್, ಬಿಯಾಸ್ ಮತ್ತು ರಾವಿ ನದಿಗಳು ಮತ್ತು ಕಾಲೋಚಿತ ಹೊಳೆಗಳು ಉಕ್ಕಿ ಹರಿದಿವೆ. ಇದರಿಂದ ಭೀಕರ ಪ್ರವಾಹ ಉಂಟಾಗಿದೆ.

ಗುರುದಾಸ್ಪುರ, ಪಠಾಣ್‌ಕೋಟ್‌ ಫಝಿಲ್ಕಾ, ಕಪುರ್ಥಲಾ, ತರಣ್ ತರಣ್, ಫಿರೋಝ್‌ಪುರ, ಹೋಶಿಯಾರ್‌ಪುರ್‌ ಮತ್ತು ಅಮೃತಸರ ಜಿಲ್ಲೆಗಳಲ್ಲಿ ಹಲವು ಗ್ರಾಮಗಳು ಮುಳುಗಡೆಯಾಗಿವೆ.

ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯ ಸುರಕ್ಷತೆ ದೃಷ್ಠಿಯಿಂದ ಸರ್ಕಾರಿ, ಅನುದಾನಿತ, ಮತ್ತು ಖಾಸಗಿ ಶಾಲಾ- ಕಾಲೇಜುಗಳು, ವಿಶ್ವವಿದ್ಯಾಲಯಗಳು ಮತ್ತು ಪಾಲಿಟೆಕ್ನಿಕ್ ಸಂಸ್ಥೆಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಸೆಪ್ಟೆಂಬರ್ 7 ರವರೆಗೆ ಮುಚ್ಚಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಪಂಜಾಬ್ ಸಚಿವ ಸಂಪುಟದ ಸಚಿವರು, ಆಮ್ ಆದ್ಮಿ ಪಕ್ಷದ (ಎಎಪಿ) ಹಿರಿಯ ನಾಯಕ ಹಾಗೂ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರೊಂದಿಗೆ ತರಣ್ ತರಣ್ ಜಿಲ್ಲೆಯಲ್ಲಿ ಬಿಯಾಸ್ ನದಿ ತೀರದ ಹಳ್ಳಿಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

ಪರಿಹಾರ ಕಾರ್ಯಗಳ ಕುರಿತು ಸ್ಥಳೀಯ ಜನರೊಂದಿಗೆ ಸಂಪುಟ ಸಚಿವರು ಮತ್ತು ಎಎಪಿ ನಾಯಕರು ಚರ್ಚೆ ನಡೆಸಿದ್ದಾರೆ.

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗುರುವಾರ ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಸಚಿವರು ಅಮೃತಸರ, ಗುರುದಾಸ್ಪುರ ಮತ್ತು ಕಪುರ್ಥಲಾ ಜಿಲ್ಲೆಗಳ ಹಳ್ಳಿಗಳಿಗೆ ಭೇಟಿ ನೀಡಿ ಸಂತ್ರಸ್ತ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ವರದಿಗಳು ತಿಳಿಸಿವೆ.

ಸಚಿವ ಚೌಹಾಣ್ ಅವರು ರಾಜ್ಯದ ಅಧಿಕಾರಿಗಳೊಂದಿಗೆ ಬೆಳೆ ಹಾನಿಯ ಪ್ರಮಾಣವನ್ನು ಪರಿಶೀಲಿಸಲಿದ್ದಾರೆ ಮತ್ತು ರೈತರಿಗೆ ನೆರವು ನೀಡಲು ಕ್ರಮಗಳನ್ನು ರೂಪಿಸಲಿದ್ದಾರೆ ಎಂದು ವರದಿಗಳು ವಿವರಿಸಿವೆ.

ಪ್ರವಾಹದಿಂದ 1.48 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಭೂಮಿಯ ಬೆಳೆಗಳು ನಾಶವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೇನಾ ತಂಡಗಳು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿವೆ. ಹಳ್ಳಿಗಳಿಗೆ ಆಹಾರ, ಮೇವನ್ನು ಸಾಗಿಸುವ ಮತ್ತು ಮತ್ತಷ್ಟು ಪ್ರವಾಹವನ್ನು ತಡೆಗಟ್ಟಲು ಪ್ರಮುಖ ನೀರಿನ ಕಾಲುವೆಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ನಿರತವಾಗಿವೆ.

ಅಂಗೋಸ್ ಮತ್ತು ಸಿಖ್ ಸಂಘಟನೆಗಳು ಅಕ್ಕಿ, ಬೇಳೆಕಾಳುಗಳು, ಸಾಸಿವೆ ಎಣ್ಣೆ, ಬಿಸ್ಕತ್ತುಗಳು, ಗೋಧಿ ಹಿಟ್ಟು, ಔಷಧಿ ಮತ್ತು ಜಾನುವಾರು ಮೇವು ಸೇರಿದಂತೆ ಒಣ ಪಡಿತರವನ್ನು ಒದಗಿಸುತ್ತಿವೆ.

ಜಿಲ್ಲಾಡಳಿತಗಳು ಸಂತ್ರಸ್ತರಿಗಾಗಿ ಪರಿಹಾರ ಶಿಬಿರಗಳನ್ನು ಸ್ಥಾಪಿಸಿದ್ದರೂ, ಅನೇಕ ಗ್ರಾಮಸ್ಥರು ತಮ್ಮ ಮನೆಗಳಲ್ಲಿಯೇ ಉಳಿಯುವ ನಿರ್ಧಾರ ಮಾಡಿಕೊಂಡಿದ್ದಾರೆ. ಜಾನುವಾರು ಆಶ್ರಯಗಳು ಪ್ರವಾಹಕ್ಕೆ ಸಿಲುಕಿರುವ ಪ್ರದೇಶಗಳಲ್ಲಿ ಜನರು ತಮ್ಮ ಮನೆಗಳ ಛಾವಣಿ ಸೇರಿದಂತೆ ಎತ್ತರದ ಪ್ರದೇಶಗಳಿಗೆ ಜಾನುವಾರುಗಳನ್ನು ಸ್ಥಳಾಂತರಿಸಿದ್ದಾರೆ.

ಪಂಜಾಬ್ ಸರ್ಕಾರವು ಹಾನಿಯನ್ನು ನಿರ್ಣಯಿಸಲು ವಿಶೇಷ ‘ಗಿರ್ದಾವರಿ’ (ನಷ್ಟದ ಮೌಲ್ಯಮಾಪನ) ಅನ್ನು ಪ್ರಾರಂಭಿಸಿದೆ ಮತ್ತು ಪ್ರತೀ ಹಾನಿಗೂ ನಷ್ಟ ಪರಿಹಾರ ನೀಡುವುದಾಗಿ ಹೇಳಿದೆ.

“ದೇಶವು ಬಿಕ್ಕಟ್ಟನ್ನು ಎದುರಿಸಿದಾಗಲೆಲ್ಲಾ, ಪಂಜಾಬ್ ದೇಶದ ಜೊತೆ ನಿಂತಿದೆ. ಅದು ಹಸಿರು ಕ್ರಾಂತಿಯ ಸಮಯವಾಗಿರಬಹುದು ಅಥವಾ ಸ್ವಾತಂತ್ರ್ಯ ಹೋರಾಟದ ಸಮಯವಾಗಿರಬಹುದು. ನಾವು ಗರಿಷ್ಠ ತ್ಯಾಗಗಳನ್ನು ಮಾಡಿದ್ದೇವೆ. ಇಂದು, ಪಂಜಾಬ್ ಬಿಕ್ಕಟ್ಟಿನಲ್ಲಿದೆ, ದೇಶವು ನಮ್ಮ ಬೆಂಬಲಕ್ಕೆ ನಿಲ್ಲುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ಫಿರೋಜ್‌ಪುರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಹೇಳಿದ್ದಾರೆ.

ಉತ್ತರಾಖಂಡ: ಮಳೆಯಿಂದ 5,000 ಕೋಟಿ ರೂ. ನಷ್ಟ, ಕೇದಾರನಾಥ ದುರಂತದ ನಂತರದ ಅತಿ ದೊಡ್ಡ ಆರ್ಥಿಕ ಹಿನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...