Homeಮುಖಪುಟಪಂಜಾಬ್‌: ಟೂರ್ನಿಯ ವೇಳೆ ಕಬಡ್ಡಿ ಆಟಗಾರನನ್ನು ಗುಂಡಿಕ್ಕಿ ಹತ್ಯೆ

ಪಂಜಾಬ್‌: ಟೂರ್ನಿಯ ವೇಳೆ ಕಬಡ್ಡಿ ಆಟಗಾರನನ್ನು ಗುಂಡಿಕ್ಕಿ ಹತ್ಯೆ

- Advertisement -
- Advertisement -

ಸೋಮವಾರ ಪಂಜಾಬ್‌ನ ಜಲಂಧರ್‌ನಲ್ಲಿ ನಡೆದ ಕಬಡ್ಡಿ ಪಂದ್ಯಾವಳಿಯ ವೇಳೆ ಅಂತಾರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ ಸಂದೀಪ್ ಸಿಂಗ್ ನಂಗಲ್ ಅಂಬಿಯಾನ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರಿಗೆ 40 ವರ್ಷ ವಯಸ್ಸಾಗಿತ್ತು.

ಘಟನೆ ನಡೆದ ಕೂಡಲೆ ಸಂದೀಪ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿನ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ.

ನಾಕೋದರ್‌ನ ಮಲ್ಲಿಯನ್ ಖುರ್ದ್ ಗ್ರಾಮದಲ್ಲಿ ಸಂದೀಪ್ ಪಂದ್ಯಾವಳಿಯ ಸ್ಥಳದಿಂದ ಹೊರಬಂದಾಗ ನಾಲ್ವರು ಅವರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಮೇಲೆ ಎಂಟರಿಂದ ಹತ್ತು ಗುಂಡುಗಳನ್ನು ಹಾರಿಸಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಹತ್ಯೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಮರಗಳ ಮರೆಯಲ್ಲಿ ನಿಂತು ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ ಎಂದು ಎನ್‌ಡಿಟಿವಿ ತನ್ನ ವರದಿಯಲ್ಲಿ ಹೇಳಿದೆ.

“ಆಟಗಾರನು ಮೂಲತಃ ಶಾಹಕೋಟ್‌ನ ನಂಗಲ್ ಅಂಬಿಯಾನ್ ಗ್ರಾಮದವರಾಗಿದ್ದಾರೆ. ಇದೀಗ ಅವರು ಇಂಗ್ಲೇಂಡ್‌ನಲ್ಲಿ ನೆಲೆಸಿದ್ದು, ಬ್ರಿಟೀಷ್‌ ಪ್ರಜೆಯಾಗಿದ್ದಾರೆ” ಎಂದು ಜಲಂಧರ್‌ನ ಗ್ರಾಮೀಣ ಪೊಲೀಸ್ ಉಪ ಅಧೀಕ್ಷಕ ಲಖ್ವಿಂದರ್ ಸಿಂಗ್ ಹೇಳಿದ್ದಾರೆ.

ಅವರು ತಮ್ಮ ಗ್ರಾಮದಲ್ಲಿ ಕಬಡ್ಡಿ ಪಂದ್ಯಾವಳಿಗಳನ್ನು ಆಯೋಜಿಸುತ್ತಿದ್ದರು ಎಂದು ವರದಿಯಾಗಿದೆ.

ಇದನ್ನೂ ಓದಿ: ಬಾಂಬೆ ಹೈಕೋರ್ಟ್‌ನ ವಿವಾದಾತ್ಮಕ ನ್ಯಾಯಮೂರ್ತಿ ಪುಷ್ಪಾ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...