Homeಮುಖಪುಟಪಂಜಾಬ್: ರೈತರ ಮಹಾರ್‍ಯಾಲಿಯಲ್ಲಿ ಮಿಂದೆದ್ದ ಬರ್ನಾಲಾ ಜಿಲ್ಲೆ!

ಪಂಜಾಬ್: ರೈತರ ಮಹಾರ್‍ಯಾಲಿಯಲ್ಲಿ ಮಿಂದೆದ್ದ ಬರ್ನಾಲಾ ಜಿಲ್ಲೆ!

"ಫ್ಯಾಸಿಸ್ಟ್ ಮತ್ತು ಕೋಮುವಾದಿ ಸರ್ಕಾರ"ಕ್ಕೆ ಭಾರತದ ಜನರು ಸವಾಲು ಹಾಕಿದ ಮೊದಲ ಪ್ರತಿಭಟನೆ ಈ ರೈತ ಹೋರಾಟ- ಜೋಗಿಂದರ್ ಸಿಂಗ್ ಉಗ್ರಾಹನ್

- Advertisement -
- Advertisement -

ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಯುತ್ತಿರುವ ರೈತ ಹೋರಾಟಕ್ಕೆ 89 ದಿನಗಳು ತುಂಬಿವೆ. ರೈತರ ಕಿಸಾನ್ ಮಹಾಪಂಚಾಯತ್‌ಗಳು ಕೇಂದ್ರ ಸರ್ಕಾರದ ನಿದ್ದೆಕೆಡಿಸಿವೆ. ಇವುಗಳ ಜೊತೆಗೆ ಕಿಸಾನ್‌ ರ್‍ಯಾಲಿಗಳು ಆರಂಭವಾಗಿದ್ದು, ಬರ್ನಾಲಾ ಜಿಲ್ಲೆಯಲ್ಲಿ ನಡೆದ ಮಹಾರ್‍ಯಾಲಿಯಲ್ಲಿ ಸುಮಾರು ಎರಡೂವರೆ ಲಕ್ಷ ರೈತರು ಭಾಗಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ (ಉಗ್ರಾಹಾನ್) ಮತ್ತು ಪಂಜಾಬ್ ಖೇತ್ ಮಜ್ದೂರ್ ಒಕ್ಕೂಟವು ಬರ್ನಾಲಾ ಜಿಲ್ಲೆಯ ಧಾನ್ಯ ಮಾರುಕಟ್ಟೆಯಲ್ಲಿ ಆಯೋಜಿಸಿದ್ದ ಕಿಸಾನ್ ಮಜ್ದೂರ್‌ ಮಹಾರ್‍ಯಾಲಿ ದೆಹಲಿಯ ಗಡಿಗಳನ್ನು ಹೊರತುಪಡಿಸಿ ಪಂಜಾಬಿನಲ್ಲಿ ನಡೆದ ಅತಿ ದೊಡ್ಡ ರ್‍ಯಾಲಿಯಾಗಿದೆ.

ಮಹಾರ್‍ಯಾಲಿ ಉದ್ದೇಶಿಸಿ ಮಾತನಾಡಿದ ಬಿಕೆಯು (ಉಗ್ರಾಹಾನ್) ಅಧ್ಯಕ್ಷ ಜೋಗಿಂದರ್ ಸಿಂಗ್ ಉಗ್ರಾಹನ್, “ಫ್ಯಾಸಿಸ್ಟ್ ಮತ್ತು ಕೋಮುವಾದಿ ಸರ್ಕಾರ”ಕ್ಕೆ ಭಾರತದ ಜನರು ಸವಾಲು ಹಾಕಿದ ಮೊದಲ ಪ್ರತಿಭಟನೆ ಈ ರೈತ ಹೋರಾಟ’ ಎಂದಿದ್ದಾರೆ.

ಇದನ್ನೂ ಓದಿ: ಬೆಲೆ ಏರಿಕೆ: ಮದುಮಕ್ಕಳಿಗೆ ಪೆಟ್ರೋಲ್, ಗ್ಯಾಸ್ ಸಿಲಿಂಡರ್, ಈರುಳ್ಳಿ ಉಡುಗೊರೆ!

ಈ ಮಹಾರ್‍ಯಾಲಿಗಾಗಿ ಬರ್ನಾಲಾ ಜಿಲ್ಲೆಯಲ್ಲಿ ಶನಿವಾರ ಭಾರಿ ಸಿದ್ಧತೆ ಮಾಡಿಕೊಳ್ಳಲಾಗಿತ್ತು. “ಒಬ್ಬ ವ್ಯಕ್ತಿಗೆ ಕನಿಷ್ಠ ನಾಲ್ಕು ಚದರ ಅಡಿ ಬೇಕು, ಆದ್ದರಿಂದ ನಾವು ಒಂಬತ್ತು ಲಕ್ಷ ಚದರ ಅಡಿಗಳಲ್ಲಿ ಚಾಪೆಗಳನ್ನು ಹಾಕಿದ್ದೇವೆ” ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುಖದೇವ್ ಸಿಂಗ್ ಕೊಕ್ರಿ ಮಾಹಿತಿ ನೀಡಿದ್ದರು.

ವಾಹನಗಳು ಮತ್ತು ಪಾರ್ಕಿಂಗ್‌ನ ಸುಗಮ ಸಂಚಾರಕ್ಕಾಗಿ ಸುಮಾರು 300 ಸ್ವಯಂಸೇವಕರನ್ನು ನಿಯೋಜಿಸಲಾಗಿತ್ತು. ವೇದಿಕೆಯನ್ನು ಭದ್ರಪಡಿಸಿಕೊಳ್ಳಲು ಮತ್ತು ರ್‍ಯಾಲಿಯಲ್ಲಿ ಪಾಲ್ಗೊಳ್ಳುವವರಿಗೆ ನೀರು ಮತ್ತು ಚಹಾವನ್ನು ಪೂರೈಸಲು 400 ಸ್ವಯಂಸೇವಕರನ್ನು ನಿಯೋಜಿಸಲಾಗಿತ್ತು.


ಇದನ್ನೂ ಓದಿ: ರೈತ ಹೋರಾಟಗಾರರನ್ನು ಕಿಡಿಗೇಡಿಗಳು ಎಂದು ಕರೆದು ಪ್ರಶ್ನೆ ಕೇಳಿದ ಚೆನ್ನೈನ CBSE ಶಾಲೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...