Homeಮುಖಪುಟಪಂಜಾಬ್ | ಪಾಲಿಕೆ ಚುನಾವಣೆಗಳಲ್ಲಿ ಎಎಪಿಗೆ ಭಾರಿ ಹಿನ್ನಡೆ

ಪಂಜಾಬ್ | ಪಾಲಿಕೆ ಚುನಾವಣೆಗಳಲ್ಲಿ ಎಎಪಿಗೆ ಭಾರಿ ಹಿನ್ನಡೆ

- Advertisement -
- Advertisement -

ಪಂಜಾಬ್‌ನಲ್ಲಿ ಶನಿವಾರ ನಡೆದ ಪಾಲಿಕೆ ಮತ್ತು ಪುರಸಭೆ ಚುನಾವಣೆಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ (ಎಎಪಿ) ಕಳಪೆ ಪ್ರದರ್ಶನ ನೀಡಿದ್ದು, ಐದರಲ್ಲಿ ಒಂದು ಪಾಲಿಕೆಯಲ್ಲಿ ಮಾತ್ರ ಸ್ಪಷ್ಟ ಬಹುಮತವನ್ನು ಪಡೆದುಕೊಂಡಿದೆ. ಜೊತೆಗೆ, 44 ಮುನ್ಸಿಪಲ್ ಮತ್ತು ನಗರ ಪಂಚಾಯತ್‌ಗಳಲ್ಲಿ ಎಎಪಿ 26 ಅನ್ನು ಅಷ್ಟೆ ಗೆದ್ದುಕೊಂಡಿದೆ. ಪಂಜಾಬ್

ಪಟಿಯಾಲ ಮುನಿಸಿಪಲ್ ಕಾರ್ಪೊರೇಶನ್ ಅನ್ನು ಎಎಪಿ ಗೆದ್ದುಕೊಂಡಿದ್ದು, ಲುಧಿಯಾನ ಮತ್ತು ಜಲಂಧರ್ ಮುನ್ಸಿಪಲ್ ಕಾರ್ಪೊರೇಶನ್‌ಗಳಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಅಮೃತಸರ ಮತ್ತು ಫಗ್ವಾರಾ ಮುನ್ಸಿಪಲ್ ಕಾರ್ಪೊರೇಶನ್‌ಗಳಲ್ಲಿ ಬಹುಮತ ಸಾಧಿಸಲು ಸೋತುಹೋಗಿದೆ. ಕಾಂಗ್ರೆಸ್ ಅಮೃತಸರ ಮುನ್ಸಿಪಲ್ ಕಾರ್ಪೋರೇಶನ್ ಅನ್ನು ಗೆದ್ದಿದ್ದು, ಫಗ್ವಾರದಲ್ಲಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 3,300 ಕ್ಕೂ ಹೆಚ್ಚು ಅಭ್ಯರ್ಥಿಗಳು ಸ್ಪರ್ಧಿಸಿದ್ದರು ಮತ್ತು ಒಟ್ಟು 37.32 ಲಕ್ಷ ಮತದಾರರು ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದರು. ಚುನಾವಣೆಯಲ್ಲಿ 65.85% ದಷ್ಟು ಮತದಾನವಾಗಿತ್ತು. ಪಂಜಾಬ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ತವರು ಕ್ಷೇತ್ರವಾದ 60 ಸದಸ್ಯ ಬಲದ ಪಟಿಯಾಲಾ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಎಎಪಿ 53 ಸ್ಥಾನಗಳಲ್ಲಿ 43 ಸ್ಥಾನಗಳನ್ನು ಗೆದ್ದುಕೊಂಡಿದೆ. ಅಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ ನಾಲ್ಕು ಸ್ಥಾನಗಳನ್ನು ಗೆದ್ದರೆ, ಎಸ್‌ಎಡಿ ಎರಡು ಸ್ಥಾನಗಳನ್ನು ಗೆದ್ದಿದೆ. ಉಳಿದಂತೆ ಪಾಲಿಕೆಯ ಏಳು ವಾರ್ಡ್‌ಗಳಿಗೆ ಚುನಾವಣೆ ಮುಂದೂಡಲಾಗಿದೆ.

ಲುಧಿಯಾನದಲ್ಲಿ ಎಎಪಿ 95 ರಲ್ಲಿ 41 ಸ್ಥಾನಗಳನ್ನು ಗೆದ್ದುಕೊಂಡಿತು, ಬಹುಮತಕ್ಕೆ ಏಳು ಸ್ಥಾನಗಳ ಕೊರತೆಯಿದೆ. ಕಾಂಗ್ರೆಸ್ 30, ಬಿಜೆಪಿ 19, ಎಸ್‌ಎಡಿ 2 ಮತ್ತು ಸ್ವತಂತ್ರ ಅಭ್ಯರ್ಥಿಗಳು 3 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದ್ದಾರೆ. ಎಎಪಿಯ ಇಬ್ಬರು ಹಾಲಿ ಶಾಸಕರ ಪತ್ನಿಯರು ಲುಧಿಯಾನ ಚುನಾವಣೆಯಲ್ಲಿ ಸೋತಿದ್ದು ಎಎಪಿಗೆ ದೊಡ್ಡ ಹಿನ್ನಡೆಯಾಗಿದೆ.  ಜೊತೆಗೆ ಕಾಂಗ್ರೆಸ್ ನ ಮಾಜಿ ಸಚಿವ ಭರತ್ ಭೂಷಣ್ ಆಶು ಅವರ ಪತ್ನಿ ಮಮತಾ ಆಶು ಕೂಡ ಸೋತಿದ್ದಾರೆ.

ಜಲಂಧರ್‌ನಲ್ಲಿ ಎಎಪಿ 85 ರಲ್ಲಿ 38 ರಲ್ಲಿ ಗೆದ್ದಿದೆ. ಇಲ್ಲಿ ಕಾಂಗ್ರೆಸ್ 25, ಬಿಜೆಪಿ 19, ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಒಂದರಲ್ಲಿ ಗೆಲುವು ಸಾಧಿಸಿದೆ. ಎರಡು ವಾರ್ಡ್‌ಗಳಲ್ಲಿ ಸ್ವತಂತ್ರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಅಮೃತಸರದಲ್ಲಿ 85 ವಾರ್ಡ್‌ಗಳಲ್ಲಿ ಕಾಂಗ್ರೆಸ್ 43, ಎಎಪಿ 24, ಬಿಜೆಪಿ ಒಂಬತ್ತು, ಎಸ್‌ಎಡಿ ನಾಲ್ಕು ಮತ್ತು ಸ್ವತಂತ್ರ ಅಭ್ಯರ್ಥಿಗಳು ಐದು ವಾರ್ಡ್‌ಗಳನ್ನು ಗೆದ್ದಿದ್ದಾರೆ.

ಫಗ್ವಾರಾದಲ್ಲಿ ಕಾಂಗ್ರೆಸ್ 22, ಎಎಪಿ 12, ಬಿಜೆಪಿ 4, ಬಿಎಸ್‌ಪಿ ಮೂರು, ಎಸ್‌ಎಡಿ ಮೂರು ಮತ್ತು ಸ್ವತಂತ್ರ ಅಭ್ಯರ್ಥಿಗಳು 6 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದ್ದಾರೆ. ಯಾವ ಪಕ್ಷವೂ ಬಹುಮತದ 26 ಸ್ಥಾನಗಳನ್ನು ಮುಟ್ಟಲಿಲ್ಲ. ಆದಾಗ್ಯೂ, ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, 50 ಸದಸ್ಯರಿರುವ ಪಾಲಿಕೆಯಲ್ಲಿ ಬಿಎಸ್ಪಿ ಕಾಂಗ್ರೆಸ್‌ ಅನ್ನು ಬೆಂಬಲಿಸುವ ಸಾಧ್ಯತೆಯಿದೆ.

ರಾಜ್ಯದ ಐದು ದೊಡ್ಡ ಮುನ್ಸಿಪಲ್ ಕಾರ್ಪೊರೇಶನ್‌ಗಳಲ್ಲಿ ನಿರೀಕ್ಷೆಗೆ ತಕ್ಕಂತೆ ಫಲಿತಾಂಶ ಸಿಗದಿದ್ದು ಮಾತ್ರವಲ್ಲದೆ, ಪಕ್ಷವು ತನ್ನ ಭದ್ರಕೋಟೆಯಾದ ಸಂಗ್ರೂರ್‌ನಲ್ಲಿ ದೊಡ್ಡ ಹಿನ್ನಡೆ ಅನುಭವಿಸಿದೆ. ಏಕೆಂದರೆ ಸ್ಥಳೀಯ ಪುರಸಭೆಯ 29 ಸ್ಥಾನಗಳಲ್ಲಿ ಏಳನ್ನು ಮಾತ್ರ ಗೆಲ್ಲಲು ಪಕ್ಷಕ್ಕೆ ಸಾಧ್ಯವಾಯಿತು. ಮುಖ್ಯಮಂತ್ರಿ ಭಗವಂತ್ ಮಾನ್, ಎಎಪಿ ಪಂಜಾಬ್ ಅಧ್ಯಕ್ಷ ಅಮನ್ ಅರೋರಾ ಮತ್ತು ರಾಜ್ಯ ಹಣಕಾಸು ಸಚಿವ ಹರ್ಪಾಲ್ ಚೀಮಾ ಅವರ ತವರು ಜಿಲ್ಲೆ ಬರ್ನಾಲಾ ವಿಧಾನಸಭಾ ಉಪಚುನಾವಣೆಯ ನಂತರ ಪಕ್ಷಕ್ಕೆ ಇದು ಸತತ ಎರಡನೇ ಸೋಲಾಗಿದೆ.

ಈ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಅಕಾಲಿದಳ ಹೀನಾಯ ಸೋಲು ಕಂಡಿವೆ. ಬಿಜೆಪಿ ಕೇವಲ 7 ಪ್ರತಿಶತದಷ್ಟು ಸ್ಥಾನಗಳನ್ನು ಗೆದ್ದಿದೆ, ಅದರ 69 ಅಭ್ಯರ್ಥಿಗಳು ವಿಜಯಶಾಲಿಯಾಗಿದ್ದಾರೆ. ಅದೇ ರೀತಿ, ಅಕಾಲಿದಳ ಕೇವಲ 3 ಪ್ರತಿಶತದಷ್ಟು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದು, ಅದರ 31 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಬಿಎಸ್ಪಿ 5 ವಿಜೇತರನ್ನು ಹೊಂದಿತ್ತು ಮತ್ತು ಕೇವಲ 0.5 ಶೇಕಡಾ ಸ್ಥಾನಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಯಿತು.

ಇದನ್ನೂ ಓದಿ: ಬ್ರಿಟಿಷರನ್ನು ಓಡಿಸಿದ್ದು ಸತ್ಯಾಗ್ರಹವಲ್ಲ, ಶಸ್ತ್ರಾಸ್ತ್ರ – ಬಿಹಾರ ರಾಜ್ಯಪಾಲ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...