Homeಮುಖಪುಟಪಂಜಾಬ್ | ರೈತ ನಾಯಕರನ್ನು ಬಂಧಿಸಿದ ಪೊಲೀಸರು; ಶಂಭು-ಖಾನೌರಿ ಗಡಿಗಳಲ್ಲಿ ಪ್ರತಿಭಟನಾ ಸ್ಥಳ ತೆರವು

ಪಂಜಾಬ್ | ರೈತ ನಾಯಕರನ್ನು ಬಂಧಿಸಿದ ಪೊಲೀಸರು; ಶಂಭು-ಖಾನೌರಿ ಗಡಿಗಳಲ್ಲಿ ಪ್ರತಿಭಟನಾ ಸ್ಥಳ ತೆರವು

- Advertisement -
- Advertisement -

ಎಂಎಸ್‌ಪಿಗೆ ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪಂಜಾಬ್- ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಬುಧವಾರ (ಮಾ.19) ತಡರಾತ್ರಿ ಪೊಲೀಸರು ತೆರವುಗೊಳಿಸಿದ್ದಾರೆ.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ರೈತ ನಾಯಕರಾದ ಕಿಸಾನ್ ಮಜ್ದೂರ್ ಮೋರ್ಚಾದ (ಕೆಎಂಎಂ) ಸರ್ವಾನ್ ಸಿಂಗ್ ಪಂಧೇರ್ ಮತ್ತು ಸಂಯುಕ್ತ ಕಿಸಾನ್ ಮೋರ್ಚಾದ (ರಾಜಕೀಯೇತರ) ಜಗಜಿತ್ ಸಿಂಗ್ ದಲ್ಲೆವಾಲ್ ಕೇಂದ್ರ ಸರ್ಕಾರದ ಜೊತೆ ಏಳನೇ ಸುತ್ತಿನ ಮಾತುಕತೆ ನಡೆಸಿ ಶಂಭು, ಖಾನೌರಿ ಗಡಿಗಳಿಗೆ ವಾಪಾಸ್ಸಾಗುವಾಗ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆ ಬಳಿಕ ಪ್ರತಿಭಟನಾ ಸ್ಥಳದಲ್ಲಿ ರೈತರು ನಿರ್ಮಿಸಿಕೊಂಡಿದ್ದ ತಾತ್ಕಾಲಿಕ ವೇದಿಕೆಗಳನ್ನು ಕೆಡವಿದ್ದಾರೆ. ಟ್ರ್ಯಾಕ್ಟರ್ ಸೇರಿದಂತೆ ಇತರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ರೈತ ನಾಯಕರ ಬಂಧನ ಬಳಿಕ ಶಂಭು ಗಡಿಯ ಪ್ರತಿಭಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಆಗಮಿಸಿದ ಪೊಲೀಸರು, ರೈತರನ್ನು ವಶಕ್ಕೆ ಪಡೆದು ತಮ್ಮ ವಾಹನಗಳಲ್ಲಿ ಕುಳಿತುಕೊಳ್ಳುವಂತೆ ಸೂಚಿಸಿದ್ದಾರೆ. ಖಾನೌರಿ ಗಡಿಯಲ್ಲಿ ರೈತರು ವಿರೋಧ ವ್ಯಕ್ತಪಡಿಸಿದ ಕಾರಣ ಪೊಲೀಸರು ಬಲ ಪ್ರಯೋಗಿಸಿದ್ದಾರೆ. ನಂತರ ಎರಡೂ ಕಡೆಗಳಲ್ಲಿ ಜೆಸಿಬಿಗಳ ಸಹಾಯದಿಂದ ರೈತರ ತಾತ್ಕಾಲಿಕ ಪ್ರತಿಭಟನಾ ವೇದಿಕೆ ಮತ್ತು ಡೇರೆಗಳನ್ನು ತೆರವುಗೊಳಿಸಿ, ಅವರ ಟ್ರ್ಯಾಕ್ಟರ್‌ಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಗಳು ಹೇಳಿವೆ.

ರೈತ ನಾಯಕರು ಮತ್ತು ಕೇಂದ್ರ ಸರ್ಕಾರದ ನಡುವಿನ 7ನೇ ಸುತ್ತಿನ ಮಾತುಕತೆಯೂ ವಿಫಲವಾಗಿದೆ ಎನ್ನಲಾಗಿದೆ. ಈ ಬೆನ್ನಲ್ಲೇ ಪ್ರತಿಭಟನಾ ಸ್ಥಳವನ್ನು ತೆರವುಗೊಳಿಸಲಾಗಿದೆ.

ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕಳೆದ ವರ್ಷದ ಫೆಬ್ರವರಿ 13ರಿಂದ ರೈತರು ಶಂಭು, ಖಾನೌರಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ನವೆಂಬರ್‌ನಿಂದ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.

ರೈತರನ್ನು ತೆರವುಗೊಳಿಸಿದ ಬಳಿಕವೂ ಬ್ಯಾರಿಕೇಡ್‌ ಮತ್ತು ಇತರ ವಸ್ತುಗಳಿಂದ ಗಡಿಗಳನ್ನು ಮುಚ್ಚಿರುವ ಪೊಲೀಸರು, ರೈತರು ದೆಹಲಿ ಕಡೆ ಹೋಗದಂತೆ ನಿಗಾ ಇಟ್ಟಿದ್ದಾರೆ.

ಬಂಧನದ ಬಳಿಕ ಸರ್ವಾನ್ ಸಿಂಗ್ ಪಂಧೇರ್‌ ಅವರನ್ನು ಪಟಿಯಾಲಾದ ಬಹದ್ದೂರ್‌ಗಢ ಫೋರ್ಟ್ ಕಮಾಂಡೋ ಪೊಲೀಸ್ ತರಬೇತಿ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಇದನ್ನು ತಾತ್ಕಾಲಿಕ ಬಂಧನ ಕೇಂದ್ರವಾಗಿ ಪರಿವರ್ತಿಸಲಾಗಿದ್ದು, ದಲ್ಲೆವಾಲ್ ಹೊರತುಪಡಿಸಿ ಹೆಚ್ಚಿನ ರೈತ ಮುಖಂಡರು ಮತ್ತು ಪ್ರತಿಭಟನಾ ನಿರತ ರೈತರನ್ನು ಅಲ್ಲಿಗೆ ಕರೆದೊಯ್ಯಲಾಗಿದೆ.

ಖಾನೌರಿಯಲ್ಲಿ ಸುಮಾರು 200 ರೈತರನ್ನು ಮತ್ತು ಶಂಭುವಿನಲ್ಲಿ ಸುಮಾರು 40 ರೈತರನ್ನು ಬಂಧಿಸಲಾಗಿದೆ. ಶಂಭು ಗಡಿಯ ಸುತ್ತಮುತ್ತಲಿನ ಅನೇಕ ಪ್ರದೇಶಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಹತ್ತಿರದ ಹಳ್ಳಿಗಳಲ್ಲಿ ಭಾರೀ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.

ಪ್ರತಿಭಟನೆಗಳಿಂದ ಗಣನೀಯ ವೆಚ್ಚವಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ ಎಎಪಿಯ ಉನ್ನತ ಪದಾಧಿಕಾರಿಗಳು ಮತ್ತು ಕೈಗಾರಿಕೋದ್ಯಮಿಗಳ ನಡುವಿನ ಸಭೆಯ ನಂತರ, ಪ್ರತಿಭಟನಾ ನಿರತ ರೈತ ಸಂಘಗಳ ವಿರುದ್ಧ ಕ್ರಮ ಕೈಗೊಳ್ಳುವ ನಿರ್ಧಾರವನ್ನು ಮಂಗಳವಾರ ರಾತ್ರಿ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ.

ರಾಜ್ಯದ ಆರ್ಥಿಕ ಬೆಳವಣಿಗೆಗೆ ಈ ಕ್ರಮ ಅಗತ್ಯವಾಗಿತ್ತು ಎಂದು ಪಂಜಾಬ್ ಹಣಕಾಸು ಸಚಿವ ಹರ್ಪಾಲ್ ಸಿಂಗ್ ಚೀಮಾ ಹೇಳಿದ್ದಾರೆ.

ಖಾನೌರಿ ಗಡಿಯಲ್ಲಿದ್ದ ಪೊಲೀಸ್ ಉಪ ನಿರೀಕ್ಷಕ (ಪಟಿಯಾಲ ವಲಯ) ಮಂದೀಪ್ ಸಿಂಗ್ ಸಿಧು ಮತ್ತು ಶಂಭು ಗಡಿಯಲ್ಲಿದ್ದ ಪಟಿಯಾಲದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ನಾನಕ್ ಸಿಂಗ್ ಅವರು, “ನಮ್ಮೊಂದಿಗೆ ಸಹಕರಿಸಲು ಮತ್ತು ರಸ್ತೆಯನ್ನು ತೆರವುಗೊಳಿಸಲು ವಿನಂತಿಸಲಾಗಿದೆ” ಎಂದು ಹೇಳಿದ್ದಾರೆ.

“ತಮ್ಮ ಸ್ವಂತ ಸ್ಥಳಗಳಿಗೆ ಹೋಗಲು ಇಚ್ಛಿಸುವ ರೈತರನ್ನು ಕಳುಹಿಸಲಾಗಿದೆ” ಎಂದು ನಾನಕ್ ಸಿಂಗ್ ತಿಳಿಸಿದ್ದು, ರಸ್ತೆಯನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದಿದ್ದಾರೆ.

“ನಾವೆಲ್ಲರೂ ರೈತರ ಮಕ್ಕಳು, ಪ್ರತಿಭಟನಾ ಸ್ಥಳಗಳನ್ನು ತೆರವುಗೊಳಿಸಲು ಸಹಕರಿಸುವಂತೆ ಅವರಿಗೆ ಹೇಳಿದ್ದೇವೆ” ಎಂದು ಸಿಧು ತಿಳಿಸಿದ್ದಾರೆ.

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಳೆದ ವರ್ಷದ ಫೆಬ್ರವರಿ 13ರಂದು ರೈತರು ದೆಹಲಿ ಚಲೋ ಹೆಸರಿನಲ್ಲಿ ದೆಹಲಿಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದರು. ಅದನ್ನು ಭದ್ರತಾ ಪಡೆಗಳು ವಿಫಲಗೊಳಿಸಿದಾಗಿನಿಂದ ರೈತರು ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು (ಶಂಭು-ಅಂಬಾಲಾ) ಮತ್ತು ಖಾನೌರಿ (ಸಂಗ್ರೂರ್-ಜಿಂದ್) ಗಡಿ ಬಿಂದುಗಳಲ್ಲಿ ಮೊಕ್ಕಾಂ ಹೂಡಿದ್ದರು.

ರೈತರನ್ನು ಬಂಧಿಸಿ, ಪ್ರತಿಭಟನಾ ಸ್ಥಳವನ್ನು ತೆರವುಗೊಳಿಸಿದ ಪೊಲೀಸರ ಕ್ರಮವನ್ನು ಖಂಡಿಸಿರುವ ಪಂಜಾಬ್‌ನ ವಿರೋಧ ಪಕ್ಷದ ನಾಯಕರು, ಎಎಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರೈತರ ಮೇಲಿನ ಪೊಲೀಸ್ ದೌರ್ಜನ್ಯವನ್ನು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ರವನೀತ್ ಬಿಟ್ಟು ತೀವ್ರವಾಗಿ ಖಂಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಚರಣ್‌ಜಿತ್ ಸಿಂಗ್ ಚನ್ನಿ, ಎಎಪಿ ಸರ್ಕಾರ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ರೈತರ ವಿರುದ್ಧ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.

ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರು ಕೇಂದ್ರ ಬಿಜೆಪಿ ಸರ್ಕಾರ ಮತ್ತು ರಾಜ್ಯದ ಎಎಪಿ ಸರ್ಕಾರಗಳ ವಿರುದ್ದ ವಾಗ್ದಾಳಿ ನಡೆಸಿದ್ದು, “ಅವರು ರೈತರಿಗೆ ದ್ರೋಹ ಬಗೆದು ಬೆನ್ನಿಗೆ ಇರಿದಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಕೇಂದ್ರ ಸರ್ಕಾರ ಮತ್ತು ರೈತರ ನಡುವೆ ಈಗಾಗಲೇ ಮಾತುಕತೆ ನಡೆಯುತ್ತಿರುವಾಗ ಪಂಜಾಬ್ ಪೊಲೀಸರು ರೈತ ನಾಯಕರನ್ನು ಬಂಧಿಸುವ ಅಗತ್ಯವೇನಿತ್ತು ಎಂದು ಅವರು ಪ್ರಶ್ನಿಸಿದ್ದಾರೆ.

ನಿಂದನೀಯ ಪದ ಬಳಕೆ | ಗ್ರೋಕ್ ಎಐಯನ್ನು ಪರಿಶೀಲಿಸುತ್ತಿರುವ ಕೇಂದ್ರ ಐಟಿ ಸಚಿವಾಲಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...