Homeಮುಖಪುಟಬಿಎಸ್‌ಎಫ್‌ ಅಧಿಕಾರ ವ್ಯಾಪ್ತಿ ವಿಸ್ತರಣೆ ವಿರುದ್ಧ ಸುಪ್ರಿಂ ಮೆಟ್ಟಿಲೇರಿದ ಪಂಜಾಬ್

ಬಿಎಸ್‌ಎಫ್‌ ಅಧಿಕಾರ ವ್ಯಾಪ್ತಿ ವಿಸ್ತರಣೆ ವಿರುದ್ಧ ಸುಪ್ರಿಂ ಮೆಟ್ಟಿಲೇರಿದ ಪಂಜಾಬ್

- Advertisement -
- Advertisement -

ಗಡಿ ಭದ್ರತಾ ಪಡೆಯ ವ್ಯಾಪ್ತಿಯನ್ನು 15ರಿಂದ 50 ಕಿ.ಮೀವರೆಗೆ ವಿಸ್ತರಿಸುವ ಕೇಂದ್ರದ ಇತ್ತೀಚಿನ ಅಧಿಸೂಚನೆಯ ವಿರುದ್ಧ ಪಂಜಾಬ್ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಬಿಎಸ್‌ಎಫ್‌ ಅಧಿಕಾರ ವ್ಯಾಪ್ತಿಯ ವಿಸ್ತರಣೆಯನ್ನು ಪ್ರಶ್ನಿಸಿದ ಮೊದಲ ರಾಜ್ಯ ಪಂಜಾಬ್‌ ಎಂದು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಧು ಶ್ಲಾಘಿಸಿದ್ದಾರೆ.

“ಸಂವಿಧಾನದಲ್ಲಿ ಅಡಕವಾಗಿರುವ ತತ್ವಗಳನ್ನು ಉಳಿಸಿಕೊಳ್ಳಲು ಅಂದರೆ ಫೆಡರಲ್ ರಚನೆ, ರಾಜ್ಯಗಳ ಸ್ವಾಯತ್ತತೆಯನ್ನು ಉಳಿಸಿಕೊಳ್ಳುವ ಹೋರಾಟ ಆರಂಭವಾಗಿದೆ. ಪ್ರತಿಕ್ರಿಯೆ ನೀಡುವಂತೆ ಕೇಂದ್ರಕ್ಕೆ ನೋಟಿಸ್ ನೀಡಲಾಗಿದೆ” ಎಂದು ಸಿಧು ಟ್ವೀಟ್ ಮಾಡಿದ್ದಾರೆ.

ಅಕ್ಟೋಬರ್‌ನಲ್ಲಿ ಗೃಹ ವ್ಯವಹಾರಗಳ ಸಚಿವಾಲಯವು ಬಿಎಸ್‌ಎಫ್‌ನ ಅಧಿಕಾರ ವ್ಯಾಪ್ತಿಯನ್ನು ತಿದ್ದುಪಡಿ ಮಾಡಿತು. ಅಕ್ಟೋಬರ್ 11, 2021ರಿಂದ ಜಾರಿಗೆ ಅಧಿಸೂಚನೆ ಹೊರಡಿಸಲಾಗಿತ್ತು. “ಭಾರತ-ಪಾಕಿಸ್ತಾನ, ಭಾರತ-ಬಾಂಗ್ಲಾದೇಶ ಗಡಿಗಳ ಉದ್ದಕ್ಕೂ ಭಾರತದೊಳಗಿನ 50 ಕಿ.ಮೀ. ವ್ಯಾಪ್ತಿಯಲ್ಲಿ ಬಿಎಸ್‌ಎಫ್ ಶೋಧಗಳನ್ನು ನಡೆಸಬಹುದು, ಶಂಕಿತರನ್ನು ಬಂಧಿಸಬಹುದು” ಎಂದು ತಿದ್ದುಪಡಿ ಮಾಡಲಾಗಿತ್ತು.

ಈ ತಿದ್ದುಪಡಿಯಿಂದ ಅಧಿಕಾರ ಪಡೆದ ಬಿಎಸ್‌ಎಫ್‌ ಈಗ ಪಂಜಾಬ್, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ ತನ್ನ ಅಧಿಕಾರ ವ್ಯಾಪ್ತಿಯನ್ನು ವಿಸ್ತರಿಸಬಹುದಾಗಿದೆ. ಐದು ಈಶಾನ್ಯ ರಾಜ್ಯಗಳಲ್ಲಿ (ಮಣಿಪುರ, ಮಿಜೋರಾಂ, ತ್ರಿಪುರಾ, ನಾಗಾಲ್ಯಾಂಡ್ ಮತ್ತು ಮೇಘಾಲಯ) ಬಿಎಸ್‌ಎಫ್ ಅಧಿಕಾರ ವ್ಯಾಪ್ತಿಯನ್ನು 20 ಕಿ.ಮೀ. ಮೊಟಕುಗೊಳಿಸಲಾಗಿದೆ. ರಾಜಸ್ಥಾನದಲ್ಲಿ ಬಿಎಸ್‌ಎಫ್‌ ಅಧಿಕಾರ ವ್ಯಾಪ್ತಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

“ಕೇಂದ್ರ ಸರ್ಕಾರವು ಗಡಿ ವಿಸ್ತರಣೆಯನ್ನು ನಿರ್ದಿಷ್ಟಪಡಿಸುವ ‘ವೇಳಾಪಟ್ಟಿ’ಯನ್ನು ಪರಿಷ್ಕರಿಸಿದೆ. ಬಿಎಸ್‌ಎಫ್‌ ಪಾಸ್‌ಪೋರ್ಟ್ ಕಾಯಿದೆ, ಎನ್‌ಡಿಪಿಎಸ್‌ ಕಾಯಿದೆ, ಕಸ್ಟಮ್ಸ್ ಕಾಯಿದೆ, ಕ್ರಿಮಿನಲ್ ಪ್ರೊಸೀಜರ್ ಕೋಡ್ (CrPC) ನಂತಹ ಕಾಯಿದೆಗಳ ಅಡಿಯಲ್ಲಿ ಮಣಿಪುರ, ಮಿಜೋರಾಂ, ನಾಗಾಲ್ಯಾಂಡ್, ತ್ರಿಪುರಾ, ಮೇಘಾಲಯ, ಜಮ್ಮು ಮತ್ತು ಕಾಶ್ಮೀರ, ಲಡಾಖ್ ಹಾಗೂ ಗುಜರಾತ್, ರಾಜಸ್ಥಾನ, ಪಂಜಾಬ್, ಬಂಗಾಳ ಮತ್ತು ಅಸ್ಸಾಂ ಭಾಗಗಳು ಒಳಪಡಲಿವೆ” ಎಂದು ಗೃಹ ಸಚಿವಾಲಯ ಹೇಳಿದೆ.

ಗಡಿ ಭದ್ರತಾ ಪಡೆ ಕಾಯಿದೆ, 1968ರ ಸೆಕ್ಷನ್ 139ರ ಅಡಿಯಲ್ಲಿ, ಕಾಲಕಾಲಕ್ಕೆ ಪ್ರದೇಶ ಮತ್ತು ಪಡೆಗಳ ವ್ಯಾಪ್ತಿಯನ್ನು ತಿಳಿಸಲು ಕೇಂದ್ರ ಸರ್ಕಾರಕ್ಕೆ ಅಧಿಕಾರವಿದೆ.


ಇದನ್ನೂ ಓದಿರಿ: ಕಾಶ್ಮೀರಿ ಪಂಡಿತರಲ್ಲಿ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ ಕ್ಷಮೆಯಾಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...