Homeರಾಷ್ಟ್ರೀಯಪಂಜಾಬ್‌: ಸರ್ಕಾರ ಭದ್ರತೆ ಹಿಂತೆಗೆದುಕೊಂಡ ಒಂದೇ ದಿನದಲ್ಲಿ ಕಾಂಗ್ರೆಸ್‌‌ ನಾಯಕನ ಗುಂಡಿಕ್ಕಿ ಹತ್ಯೆ

ಪಂಜಾಬ್‌: ಸರ್ಕಾರ ಭದ್ರತೆ ಹಿಂತೆಗೆದುಕೊಂಡ ಒಂದೇ ದಿನದಲ್ಲಿ ಕಾಂಗ್ರೆಸ್‌‌ ನಾಯಕನ ಗುಂಡಿಕ್ಕಿ ಹತ್ಯೆ

- Advertisement -
- Advertisement -

ಕಾಂಗ್ರೆಸ್ ನಾಯಕ ಮತ್ತು ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಅಪರಿಚಿತರು ಗುಂಡಿಕ್ಕಿ ಕೊಂದಿರುವ ಘಟನೆ ಭಾನುವಾರ ಪಂಜಾಬ್‌ನ ಮಾನ್ಸಾ ಜಿಲ್ಲೆಯಲ್ಲಿ ನಡೆದಿದೆ. ಗುಂಡಿನ ದಾಳಿಯಲ್ಲಿ ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

“ಸಿಧು ಮೂಸೆವಾಲಾ ಅವರು ಮೃತಪಟ್ಟಿದ್ದಾರೆ” ಎಂದು ಮಾನ್ಸಾ ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ ರಂಜಿತ್ ರೈ ಖಚಿತಪಡಿಸಿದ್ದಾರೆ. ಪಂಜಾಬ್ ಸರ್ಕಾರ ಅವರ ಭದ್ರತೆಯನ್ನು ಹಿಂತೆಗೆದುಕೊಂಡ ಒಂದು ದಿನದ ನಂತರ ಈ ಘಟನೆ ನಡೆದಿದೆ. ಅವರ ಜೊತೆಗೆ 424 ಜನರ ಭದ್ರತೆಯನ್ನು ಪಂಜಾಬ್ ಪೊಲೀಸರು ಹಿಂತೆಗೆದುಕೊಂಡಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಿಧು ಮೂಸೆವಾಲಾ ಈ ವರ್ಷದ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಮಾನಸಾದಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿ, ಎಎಪಿ ಅಭ್ಯರ್ಥಿ ವಿಜಯ್ ಸಿಂಗ್ಲಾ ವಿರುದ್ಧ 63,000 ಮತಗಳ ಭಾರೀ ಅಂತರದಿಂದ ಪರಾಭವಗೊಂಡಿದ್ದರು. ಪಂಜಾಬ್‌‌ ಸರ್ಕಾರವು ಭ್ರಷ್ಟಾಚಾರದ ಆರೋಪದ ಮೇಲೆ ವಿಜಯ್ ಸಿಂಗ್ಲಾ ಅವರನ್ನು ಇತ್ತೀಚೆಗೆ ಸಚಿವ ಸಂಪುಟದಿಂದ ಸಿಎಂ ಭಗವಂತ್ ಮಾನ್ ವಜಾಗೊಳಿಸಿದ್ದರು.

ಇದನ್ನೂ ಓದಿ: 1% ಕಮಿಷನ್‌‌‌ ಲಂಚ ಆರೋಪ: ಆರೋಗ್ಯ ಸಚಿವನನ್ನು ವಜಾಗೊಳಿಸಿದ ಪಂಜಾಬ್ ಸಿಎಂ!

ಕಳೆದ ತಿಂಗಳು, ಸಿಧು ಮೂಸೆ ವಾಲಾ ಅವರು ತಮ್ಮ ‘ಬಲಿಪಶು'(‘Scapegoat’) ಎಂಬ ಹಾಡಿನಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಅದರ ಬೆಂಬಲಿಗರನ್ನು ಗುರಿಯಾಗಿಸಿ ವಿವಾದ ಎಬ್ಬಿಸಿದ್ದರು. ಗಾಯಕ ತನ್ನ ಹಾಡಿನಲ್ಲಿ ಎಎಪಿ ಬೆಂಬಲಿಗರನ್ನು ‘ಗದ್ದರ್’ (ದೇಶದ್ರೋಹಿ) ಎಂದು ಕರೆದಿದ್ದರು.

ತಮ್ಮ ಪಕ್ಷದ ನಾಯಕನ ಸಾವಿಗೆ ಸಂತಾಪ ಸೂಚಿಸಿರುವ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ, “ಸಿಧು ಮೂಸೆವಾಲಾ ಅವರನ್ನು ಹಾಡಹಗಲೇ ಹತ್ಯೆ ಮಾಡಿರುವುದು ತೀವ್ರ ಆಘಾತವಾಗಿದೆ. ಪ್ರಪಂಚದಾದ್ಯಂತ ಇರುವ ಪಂಜಾಬಿಗಳು, ಪಂಜಾಬ್‌ ಜನರ ನಾಡಿಮಿಡಿತ ತಿಳಿದಿರುವ ಪ್ರತಿಭಾವಂತ ಕಲಾವಿದನನ್ನು ಕಳೆದುಕೊಂಡಿದ್ದಾರೆ. ಪ್ರಪಂಚದಾದ್ಯಂತ ಇರುವ ಅವರ ಪ್ರೀತಿಪಾತ್ರರಿಗೆ ಮತ್ತು ಅಭಿಮಾನಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...