Homeಮುಖಪುಟಪಂಜಾಬ್‌: ಹಲವಾರು ಪತ್ರಕರ್ತರು, ಬರಹಗಾರರ ಟ್ವಿಟರ್‌ ಖಾತೆಗೆ ನಿರ್ಬಂಧ

ಪಂಜಾಬ್‌: ಹಲವಾರು ಪತ್ರಕರ್ತರು, ಬರಹಗಾರರ ಟ್ವಿಟರ್‌ ಖಾತೆಗೆ ನಿರ್ಬಂಧ

- Advertisement -
- Advertisement -

ವಾರಿಸ್ ಪಂಜಾಬ್ ಡಿ ಸಂಘಟನೆಯ ಮುಖ್ಯಸ್ಥ ಅಮೃತಪಾಲ್ ಸಿಂಗ್ ಅವರನ್ನು ಬಂಧಿಸಿದ ವಿದ್ಯಮಾನದ ಹಿನ್ನೆಲೆಯಲ್ಲಿ ಪಂಜಾಬ್‌ನಲ್ಲಿ ಮಾನವ ಹಕ್ಕುಗಳ ದಮನ ಆಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಪಂಜಾಬ್‌ನಲ್ಲಿ ಇಂಟರ್ನೆಟ್ ಸ್ಥಗಿತವು ಮಧ್ಯೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಕೆಲವು ಪತ್ರಕರ್ತರು, ಬರಹಗಾರರ ಟ್ವಿಟರ್‌ ಖಾತೆಗಳನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ. ಕೆನಡಾದ ಲೇಖಕಿ ರೂಪಿ ಕೌರ್‌ಗೆ ಸೇರಿದ ಖಾತೆಯನ್ನು  ಟ್ವಿಟರ್ ಖಾತೆಗೂ ತಡೆ ನೀಡಲಾಗಿದೆ.

ಸಂಘಟನೆಗೆ ಸಂಬಂಧಿಸಿದ 100ಕ್ಕೂ ಹೆಚ್ಚು ಶಂಕಿತರನ್ನು ಇದುವರೆಗೆ ರಾಜ್ಯದಾದ್ಯಂತ ಬಂಧಿಸಲಾಗಿದೆ. ಆಮ್ ಆದ್ಮಿ ಪಕ್ಷದ ಸರ್ಕಾರವು ‘ಮುಗ್ಧ ಸಿಖ್ ಯುವಕ’ರನ್ನು ಟಾರ್ಗೆಟ್ ಮಾಡಬಾರದು ಎಂದು ಶಿರೋಮಣಿ ಗುರುದ್ವಾರ ಪರ್ಬಂಧಕ್ ಸಮಿತಿಯ ಅಧ್ಯಕ್ಷ ಹರ್ಜಿಂದರ್ ಸಿಂಗ್ ಧಾಮಿ ಒತ್ತಾಯಿಸಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ ವರದಿಗಾರ ಕಮಲ್‌ದೀಪ್ ಸಿಂಗ್ ಬ್ರಾರ್, ಪ್ರೊ ಪಂಜಾಬ್ ಟಿವಿ ಬ್ಯೂರೋ ಮುಖ್ಯಸ್ಥ ಗಗನ್‌ದೀಪ್ ಸಿಂಗ್, ಸ್ವತಂತ್ರ ಪತ್ರಕರ್ತ ಸಂದೀಪ್ ಸಿಂಗ್ ಮತ್ತು ಡಿಜಿಟಲ್ ಕಾರ್ಯಕರ್ತ ಪೀಟರ್ ಫ್ರೆಡ್ರಿಕ್ ಅವರ ಟ್ವಿಟರ್ ಖಾತೆಗಳನ್ನು ನಿರ್ಬಂಧಿಸಲಾಗಿದೆ. ಹಾಗೆಯೇ ಕೆನಡಾದ ರಾಜಕಾರಣಿ ಜಗ್ಮೀತ್ ಸಿಂಗ್ ಮತ್ತು ಎಸ್‌ಎಡಿ ಸಂಗ್ರೂರ್ ಸಂಸದ ಸಿಮ್ರಂಜೀತ್ ಸಿಂಗ್ ಮಾನ್ ಅವರ ಖಾತೆಗಳನ್ನು ತಡೆಹಿಡಿಯಲಾಗಿದೆ.

“ಈ ಖಾತೆಗಳನ್ನು ಕಾನೂನು ಪ್ರತಿಕ್ರಿಯೆಯ ಭಾಗವಾಗಿ ಭಾರತದಲ್ಲಿ ನಿರ್ಬಂಧಿಸಲಾಗಿದೆ” ಎಂದು ವಿವರಣೆಯಲ್ಲಿ ತಿಳಿಸಲಾಗಿದೆ. ಆದಾಗ್ಯೂ, ಪತ್ರಕರ್ತರಲ್ಲಿ ಒಬ್ಬರು ಮಾತ್ರ ಈ ಕ್ರಿಯೆಗೆ ಸಂಬಂಧಿಸಿದಂತೆ ಇಮೇಲ್ ಸಂದೇಶವನ್ನು ಟ್ವಿಟರ್‌ ಸಂಸ್ಥೆಯಿಂದ ಸ್ವೀಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಟ್ವಿಟರ್‌ ಸಂಸ್ಥೆಯನ್ನು ಸಂಪರ್ಕಿಸಿರುವ ‘ನ್ಯೂಸ್‌ಲಾಂಡ್ರಿ’ ಜಾಲತಾಣ, “ಕಾನೂನು ವಿಚಾರವೇನು? ಯಾರು ಅವುಗಳನ್ನು ಪ್ರಸ್ತಾಪಿಸಿದ್ದಾರೆ? ಎಷ್ಟು ಸಮಯದವರೆಗೆ ಈ ಖಾತೆಗಳನ್ನು ತಡೆಹಿಡಿಯಲಾಗುತ್ತದೆ” ಎಂದು ಪ್ರಶ್ನಿಸಿದೆ. “ಟ್ವಿಟರ್‌ನ ಪತ್ರಿಕಾ ತಂಡದಿಂದ ಇಲ್ಲಿಯವರೆಗೆ ಇಮೋಜಿಯೊಂದನ್ನು ಮಾತ್ರ ಪ್ರತಿಕ್ರಿಯೆಯಾಗಿ ಸ್ವೀಕರಿಸಿದ್ದೇವೆ. ನಿಜವಾದ ಪ್ರತಿಕ್ರಿಯೆಯನ್ನು ಸ್ವೀಕರಿಸಿದಾಗ ವರದಿಯನ್ನು ನವೀಕರಿಸುತ್ತೇವೆ” ಎಂದು ‘ನ್ಯೂಸ್‌ಲಾಂಡ್ರಿ’ ಬರೆದುಕೊಂಡಿದೆ.

ಅಮೃತಪಾಲ್ ಅವರನ್ನು ಪೊಲೀಸರು ಬೆನ್ನಟ್ಟುತ್ತಿರುವುದನ್ನು ತೋರಿಸುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕಾಗಿ ಗಗನ್‌ದೀಪ್ ಅವರ ಖಾತೆಯನ್ನು ಸೋಮವಾರ ತಡೆಹಿಡಿಯಲಾಗಿದೆ ಎಂದು ‘ನ್ಯೂಸ್‌ಲಾಂಡ್ರಿ’ ವರದಿ ಮಾಡಿದೆ. ಗಗನ್‌ದೀಪ್ ಅವರು ಹಂಚಿಕೊಳ್ಳುವ ಮುನ್ನವೇ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು.

ಒಂದು ವರದಿಯನ್ನು ಹೊರತುಪಡಿಸಿ, ಇಂಡಿಯನ್ ಎಕ್ಸ್‌ಪ್ರೆಸ್ ವರದಿಗಾರ ಕಮಲ್‌ದೀಪ್ ಅವರು ಶನಿವಾರ ಪೋಸ್ಟ್ ಮಾಡಿದ ಎಲ್ಲಾ ಟ್ವೀಟ್‌ಗಳು ಮತ್ತು ವರದಿಗಳು ಪಂಜಾಬ್‌ನಲ್ಲಿನ ವಿದ್ಯಮಾನಕ್ಕೆ ಸಂಬಂಧಿಸಿವೆ. ಅವರು ಭಾನುವಾರ ಯಾವುದೇ ಅಪ್‌ಡೇಟ್‌ ಪೋಸ್ಟ್ ಮಾಡಿಲ್ಲ.

ಪಂಜಾಬ್‌ನಲ್ಲಿ ಜಿ 20 ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡುವಾಗ ಎಸ್‌ಜಿಪಿಸಿ ಅಧ್ಯಕ್ಷ ಹರ್ಜಿಂದರ್ ಸಿಂಗ್ ಧಾಮಿ ಸಿಖ್ ಅವರು ಮಾನವ ಹಕ್ಕುಗಳ ವಿಷಯವನ್ನು ಪ್ರಸ್ತಾಪಿಸಿರುವ ವರದಿಯನ್ನು ಕಮಲ್‌ದೀಪ್‌ ಶನಿವಾರ ಟ್ವೀಟ್ ಮಾಡಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ ವರದಿಗಳೊಂದಿಗೆ ಎರಡು ಟ್ವೀಟ್‌ಗಳನ್ನು ಅವರು ಪೋಸ್ಟ್ ಮಾಡಿದ್ದಾರೆ. ಪಂಜಾಬ್‌ನಲ್ಲಿನ ಮಾನವ ಹಕ್ಕುಗಳ ದಮನಕ್ಕೆ ಸಂಬಂಧಿಸಿದ ಅವರ ವರದಿ ಹಾಗೂ ಸಂಬಂಧಿಸಿದ ಟ್ವಿಟರ್‌ ಥ್ರೆಡ್‌ಗಳನ್ನು ಶನಿವಾರ ಪೋಸ್ಟ್ ಮಾಡಿದ್ದಾರೆ.

ಭಾನುವಾರದ ಪರಿಸ್ಥಿತಿಯ ಕುರಿತು ಟ್ವೀಟ್ ಮಾಡಿದ ಡಿಜಿಟಲ್ ಕಾರ್ಯಕರ್ತ ಪೀಟರ್ ಫ್ರೆಡ್ರಿಕ್, “ನನಗೆ ಸ್ವಲ್ಪವೇ ತಿಳಿದಿರುವ ಅಮೃತಪಾಲ್ ಸಿಂಗ್ ಬಗ್ಗೆ ನಿಮ್ಮ ಅಭಿಪ್ರಾಯ ಏನೇ ಇರಲಿ, ಪಂಜಾಬ್‌ನಲ್ಲಿ ಮೂಲಭೂತ ನಾಗರಿಕ ಸ್ವಾತಂತ್ರ್ಯಗಳ ಮೇಲೆ ಸಾಮೂಹಿಕ ನಿರ್ಬಂಧ ನಿರಂಕುಶ ದುಃಸ್ವಪ್ನವಾಗಿದೆ. ಇಂಟರ್ನೆಟ್ ಮತ್ತು ಮೊಬೈಲ್ ಸೇವೆಗಳನ್ನು ನಿಷೇಧಿಸಲಾಗಿದೆ, ಅಸೆಂಬ್ಲಿಯನ್ನು ನಿಷೇಧಿಸಲಾಗಿದೆ, ಮಾಧ್ಯಮಗಳಿಗೆ ಸೆನ್ಸಾರ್‌ಶಿಪ್‌ ಅನ್ವಯಿಸಲಾಗಿದೆ. ಕಾಶ್ಮೀರದಿಂದ ಪಂಜಾಬ್‌ವರೆಗೆ ಆಜಾದಿ ಎಲ್ಲಿದೆ?” ಎಂದು ಪ್ರಶ್ನಿಸಿದ್ದಾರೆ.

ಇಂಟರ್ನೆಟ್ ಮತ್ತು ಎಸ್‌ಎಂಎಸ್ ಸೇವೆಗಳನ್ನು ಎಎಪಿ ಸರ್ಕಾರ ಶನಿವಾರ ಸ್ಥಗಿತಗೊಳಿಸಿದೆ. ಆರಂಭದಲ್ಲಿ ಸೋಮವಾರ ಮಧ್ಯಾಹ್ನದವರೆಗೆ ಮತ್ತು ಮತ್ತೆ ಮಂಗಳವಾರದವರೆಗೆ ಅಮಾನತುಗೊಳಿಸಿ ಆದೇಶಿಸಲಾಗಿದೆ.

ಸೋಮವಾರದಂದು ಇಂಟರ್ನೆಟ್ ಸೇವೆಗಳ ಮೇಲಿನ ನಿರ್ಬಂಧಗಳನ್ನು ವಿಸ್ತರಿಸುವ ಆದೇಶದಲ್ಲಿ ಗೃಹ ವ್ಯವಹಾರಗಳು ಮತ್ತು ನ್ಯಾಯ ಇಲಾಖೆಯು, “ಎಲ್ಲಾ ಮೊಬೈಲ್ ಇಂಟರ್ನೆಟ್ ಸೇವೆಗಳು, ಎಸ್‌ಎಂಎಸ್‌ ಸೇವೆಗಳು ಮತ್ತು ಮೊಬೈಲ್ ನೆಟ್‌ವರ್ಕ್‌ಗಳಲ್ಲಿನ ಎಲ್ಲಾ ಡಾಂಗಲ್ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಯಾವುದೇ ಪ್ರಚೋದನೆಯನ್ನು ತಡೆಯಲು, ಹಿಂಸಾಚಾರವನ್ನು ನಿರ್ಬಂಧಿಸಲು, ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಯಾವುದೇ ಭಂಗ ಉಂಟಾಗದಂತೆ ತಡೆಯಲು ಈ ಕ್ರಮ ಜರುಗಿಸಲಾಗಿದೆ” ಎಂದು ತಿಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...