Homeಮುಖಪುಟಹೊಸ ಯೋಜನೆಯಡಿ ಉಚಿತ ‘ಸ್ಯಾನಿಟರಿ ಪ್ಯಾಡ್‌‌’ ಒದಗಿಸಲಿರುವ ಪಂಜಾಬ್

ಹೊಸ ಯೋಜನೆಯಡಿ ಉಚಿತ ‘ಸ್ಯಾನಿಟರಿ ಪ್ಯಾಡ್‌‌’ ಒದಗಿಸಲಿರುವ ಪಂಜಾಬ್

- Advertisement -
- Advertisement -

‘ಅಂತರರಾಷ್ಟ್ರೀಯ ಮುಟ್ಟಿನ ನೈರ್ಮಲ್ಯ ದಿನಾಚರಣೆ’ಯ ಸಂದರ್ಭದಲ್ಲಿ ಪಂಜಾಬ್ ಸರ್ಕಾರವು ರಾಜ್ಯದಾದ್ಯಂತ ಅಗತ್ಯವಿರುವ ಹೆಣ್ಣುಮಕ್ಕಳಿಗೆ ಮತ್ತು ಮಹಿಳೆಯರಿಗೆ ಉಚಿತ ‘ಸ್ಯಾನಿಟರಿ ನ್ಯಾಪ್‌ಕಿನ್‌’ ನೀಡುವ ಯೋಜನೆಯನ್ನು ಶುಕ್ರವಾರ ಪ್ರಾರಂಭಿಸಿತು.

‘ಉದಾನ್’ ಎಂದು ಕರೆಯಲ್ಪಡುವ ಈ ಯೋಜನೆಗೆ ವರ್ಷಕ್ಕೆ 40.55 ಕೋಟಿ ರೂ ಬೇಕಾಗುತ್ತದೆ ಎಂದು ಪಂಜಾಬ್ ಸಾಮಾಜಿಕ ಭದ್ರತೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅರುಣಾ ಚೌಧರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಸಿಎಂ ಮತ್ತು ಅವರ ಪುತ್ರನ ಕಾಲು ಹಿಡಿದು ಸಿ.ಪಿ. ಯೋಗೇಶ್ವರ್‌‌ ಸಚಿವರಾಗಿದ್ದು: ರೇಣುಕಾಚಾರ್ಯ

ಹೊಸ ಯೋಜನೆಯು ಶಾಲೆಯಿಂದ ಹೊರಗುಳಿಯುವ ಹುಡುಗಿಯರು, ಕಾಲೇಜಿಗೆ ಹಾಜರಾಗದ ಯುವತಿಯರು, ಬಿಪಿಎಲ್ ಕುಟುಂಬಗಳ ಮಹಿಳೆಯರು, ಮನೆಯಿಲ್ಲದ ಮಹಿಳೆಯರು, ಕೊಳೆಗೇರಿ ಪ್ರದೇಶದ ನಿವಾಸಿಗಳು ಮತ್ತು ಇತರ ಇಲಾಖೆಗಳ ಯಾವುದೇ ಯೋಜನೆಯಡಿ ಉಚಿತ ಅಥವಾ ಸಬ್ಸಿಡಿಯ ರೂಪದಲ್ಲಿ ಸ್ಯಾನಿಟರಿ ಪ್ಯಾಡ್‌‌‌‌ಗಳನ್ನು ಪಡೆಯದವರನ್ನು ಒಳಗೊಳ್ಳುತ್ತದೆ ಅವರು ಹೇಳಿದ್ದಾರೆ.

ಪ್ರತಿ ಫಲಾನುಭವಿಗೆ ತಿಂಗಳಿಗೆ ಗರಿಷ್ಠ ಒಂಬತ್ತು ಪ್ಯಾಡ್‌ಗಳನ್ನು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಮೊದಲ ಹಂತದಲ್ಲಿ ಒಟ್ಟು 1,22,91,300 ಸ್ಯಾನಿಟರಿ ಪ್ಯಾಡ್‌ಗಳನ್ನು 13,65,700 ಫಲಾನುಭವಿಗಳಿಗೆ 27,314 ಅಂಗನವಾಡಿ ಕೇಂದ್ರಗಳ ಕಾರ್ಯಕರ್ತರು ಮತ್ತು ಸಹಾಯಕರ ಮೂಲಕ ವಿತರಿಸಲಾಗುವುದು ಎಂದು ಅರುಣಾ ಹೇಳಿದ್ದಾರೆ.

ಮುಟ್ಟಿನ ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸುವುದು, ಮೂಲಭೂತ ಉತ್ಪನ್ನಗಳ ಲಭ್ಯತೆಯನ್ನು ಸುಧಾರಿಸುವುದು, ಉತ್ತಮ ಜೀವನ ಮಟ್ಟವನ್ನು ಉತ್ತೇಜಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ತಾತಾ, ನೀವು ಎಂದಾದರೂ ಮಾಂಸ ತಿಂದಿದ್ದೀರಾ ಎಂಬ ಪ್ರಶ್ನೆಗೆ ದೊರೆಸ್ವಾಮಿಯವರ ಉತ್ತರವೇನು ಗೊತ್ತೆ?

ಮಹಿಳಾ ಆಧಾರಿತ ಯೋಜನೆಯು ಅವರ ಜೀವನದ ಗುಣಮಟ್ಟವನ್ನು ಸುಧಾರಿಸುವುದು, ಅವರ ಸ್ವಾಭಿಮಾನವನ್ನು ಹೆಚ್ಚಿಸುವುದು ಮತ್ತು ಸ್ಯಾನಿಟರಿ ಪ್ಯಾಡ್‌ಗಳ ಸುರಕ್ಷಿತವಾಗಿ ವಿಲೇವಾರಿ ಮಾಡುವುದನ್ನು ಖಚಿತಪಡಿಸಿಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ.

ಯೋಜನೆಯ ಉಧ್ಘಾಟನಾ ಸಮಾರಂಭದಲ್ಲಿ 1,500 ಸ್ಥಳಗಳಲ್ಲಿ ಮತ್ತು ರಾಜ್ಯದ ಇತರ ಅಂಗನವಾಡಿ ಕೇಂದ್ರಗಳಲ್ಲಿ ಒಂದು ಲಕ್ಷ ಪ್ಯಾಕೆಟ್ ಸ್ಯಾನಿಟರಿ ಪ್ಯಾಡ್‌ಗಳನ್ನು ವಿತರಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಯೋಜನೆಯ ಒಟ್ಟಾರೆ ಪ್ರಗತಿ ಮತ್ತು ಸುಗಮ ಅನುಷ್ಠಾನದ ಮೇಲ್ವಿಚಾರಣೆಗಾಗಿ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳನ್ನು ಒಳಗೊಂಡ ರಾಜ್ಯ ಕಾರ್ಯಪಡೆ ರಚಿಸಲಾಗಿದೆ ಎಂದು ಸಚಿವೆ ಹೇಳಿದ್ದಾರೆ.

ಪ್ರತಿ ತಿಂಗಳು, ಸರ್ಕಾರದಿಂದ ಅನುಮೋದಿತ ಎಂಪನೇಲ್ಡ್ ಪ್ರಯೋಗಾಲಯಗಳು ಸ್ಯಾನಿಟರಿ ಪ್ಯಾಡ್‌‌ ಗುಣಮಟ್ಟದ ಪರೀಕ್ಷೆಯನ್ನು ನಡೆಸುತ್ತವೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸುದ್ದಿಯೇನೇ ಮನೋಲ್ಲಾಸಿನಿ: ಮಾಧ್ಯಮ ನಲ್ಲರು ಮತ್ತು ವಿಕೇಂದ್ರೀಕರಣ ಭಾಗ-1

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...