Homeಮುಖಪುಟಸಾರಿಗೆ ಇಲಾಖೆಯಲ್ಲಿ 4 ಸಾವಿರ ಬಸ್ ಖರೀದಿ, 13 ಸಾವಿರ ಹುದ್ದೆ ನೇಮಕ: ಸಿಎಂ ಸಿದ್ದರಾಮಯ್ಯ

ಸಾರಿಗೆ ಇಲಾಖೆಯಲ್ಲಿ 4 ಸಾವಿರ ಬಸ್ ಖರೀದಿ, 13 ಸಾವಿರ ಹುದ್ದೆ ನೇಮಕ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ನಮ್ಮ ಸರ್ಕಾರದ ಶಕ್ತಿ ಯೋಜನೆಯನ್ನು ರಾಜ್ಯದ ಮಹಿಳೆಯರು ಖುಷಿಯಿಂದ ಸ್ವಾಗತಿಸಿದ್ದು, ಒಂದು ತಿಂಗಳಲ್ಲಿ 18 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಕೆಲವು ಕಡೆ ಬಸ್‌ಗಳ ಕೊರತೆ ಇದೆ ಎಂಬ ಮಾಹಿತಿ ಬಂದಿದೆ. ಇದಕ್ಕಾಗಿ ಸಾರಿಗೆ ಇಲಾಖೆಯಲ್ಲಿ 13 ಸಾವಿರ ಹುದ್ದೆ ನೇಮಕ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಇಂದಿನ ಕಲಾಪದಲ್ಲಿ ರಾಜ್ಯಪಾಲರ ಭಾಷಣದ ಮೇಲೆ ಉತ್ತರಿಸಿದ ಅವರು, “ಕುಮಾರಸ್ವಾಮಿ ಅವರು ಶಕ್ತಿ ಯೋಜನೆಯಿಂದಾದ ಸಮಸ್ಯೆಗಳ ಬಗ್ಗೆ ಗಮನ ಸೆಳೆದಿದ್ದಾರೆ. ಯಾರಿಗೂ ಸಮಸ್ಯೆಯಾಗಬಾರದು. ಪುರುಷ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಹೊಸದಾಗಿ ನಾಲ್ಕು ಸಾವಿರ ಬಸ್‌ಗಳ ಖರೀದಿ ಮಾಡಲು ನಿರ್ಧರಿಸಲಾಗಿದೆ” ಎಂದು ಸದನಕ್ಕೆ ಮಾಹಿತಿ ನೀಡಿದರು.

ಶಕ್ತಿ ಯೋಜನೆಯಿಂದ ಮಹಿಳೆಯರು ಹೆಚ್ಚಾಗಿ ಪ್ರಯಾಣ ಮಾಡುತ್ತಿರುವುದರಿಂದ ಎಲ್ಲಾ ಬಸ್‌ಗಳು ರಶ್ ಆಗುತ್ತಿವೆ. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗುತ್ತವೆ ಎಂಬ ದೂರುಗಳು ಕೇಳಿಬಂದಿದ್ದವು. ಇದಕ್ಕೆ ಪರಿಹಾರ ಹುಡುಕಲು ಮುಂದಾಗಿರುವ ಸರ್ಕಾರ ಹೊಸದಾಗಿ 4,000 ಬಸ್‌ಗಳ ಖರೀದಿ ಮತ್ತು ಕಾರ್ಯಾಚರಣೆಗಾಗಿ 13,000 ಸಾರಿಗೆ ಸಿಬ್ಬಂದಿಗಳ ನೇಮಕಾತಿಗೆ ಮುಂದಾಗಿದೆ.

ಸರ್ಕಾರದ ಈ ಯೋಜನೆಯಿಂದಾಗಿ ನಷ್ಟದಲ್ಲಿದ್ದ ಸಾರಿಗೆ ಸಂಸ್ಥೆಗಳು ಲಾಭದ ಹಳಿಗೆ ಮರಳಿವೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಆನ್‌ಲೈನ್ ಮೂಲಕ ಸಾಲ ಪಡೆದು ಕಿರುಕುಳ ತಾಳಲಾರದೆ ವಿದ್ಯಾರ್ಥಿ ಆತ್ಮಹತ್ಯೆ: ವಂಚಕ ಆ್ಯಪ್‌ಗಳ ಬಗ್ಗೆ ಇರಲಿ ಎಚ್ಚರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. Has anyone gone through the cAGs report on the financial status of the state run PSUs?
    If not why, if yes what dies it say please put it in public domain.

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...