Homeಕರ್ನಾಟಕಖರೀದಿ ಕೇಂದ್ರಗಳ ಮೂಲಕ ಬೆಳೆ ಖರೀದಿ - ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ

ಖರೀದಿ ಕೇಂದ್ರಗಳ ಮೂಲಕ ಬೆಳೆ ಖರೀದಿ – ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ

- Advertisement -
- Advertisement -

ರಾಜ್ಯದ ಮಾರುಕಟ್ಟೆಗಳಲ್ಲಿ ಭತ್ತ, ರಾಗಿ, ಜೋಳ, ಅಡಿಕೆ ಮತ್ತು ಕೊಬ್ಬರಿ ಸೇರಿದಂತೆ ಎಲ್ಲಾ ಬೆಳೆಗಳ ಬೆಲೆ ಕುಸಿದಿದೆ. ಇಂತಹ ಸಂದರ್ಭದಲ್ಲಿ ರೈತರ ನೆರವಿಗೆ ಬರುವ ದೃಷ್ಠಿಯಿಂದ ಖರೀದಿ ಕೇಂದ್ರಗಳನ್ನು ಆರಂಭಿಸಿದ್ದು ಬೆಂಬಲ ಬೆಲೆಯಡಿ ರೈತರ ಉತ್ಪನ್ನಗಳನ್ನು ಖರೀದಿ ಮಾಡಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು.

ತುಮಕೂರಿನಲ್ಲಿ ಮಾತನಾಡಿದ ಅವರು, ಮಾರುಕಟ್ಟೆಗಳಲ್ಲಿ ಬೆಲೆ ಕುಸಿತ ಸಾಮಾನ್ಯ ಎಂದು ಒಪ್ಪಿಕೊಂಡರು. “ಇದೇ ಕಾರಣಕ್ಕಾಗಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಈ ಕೇಂದ್ರಗಳ ಮೂಲಕ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಬೆಂಬಲ ಬೆಲೆ ನೀಡಿ ರೈತರಿಂದ ಬೆಳೆಯನ್ನು ಖರೀದಿ ಮಾಡಲಾಗುತ್ತಿದೆ” ಎಂದು ಹೇಳಿದರು.

ರಾಜ್ಯದಲ್ಲಿ ಸುರಿದ ಭಾರೀ ಮಳೆಯಿಂದ ಮಹಾಪೂರ ಬಂದಿದೆ. ಅತಿವೃಷ್ಟಿಯಾಗಿ 25 ಜಿಲ್ಲೆಗಳಲ್ಲಿ ಬೆಳೆ ಹಾನಿ ಆಗಿದೆ. ಮನೆಗಳು ಬಿದ್ದುಹೋಗಿವೆ. ಸುಮಾರು 20 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ನೀರಿನಲ್ಲಿ ಮುಳುಗಡೆಯಾಗಿದೆ. ಭತ್ತ, ರಾಗಿ ಬೆಳೆಯು ನೀರಿನಲ್ಲಿ ಕೊಚ್ಚಿಹೋಗಿದ್ದರಿಂದ ಕೋಟ್ಯಂತರ ರೂಪಾಯಿ ನಷ್ಟವಾಗಿದೆ. ಆದ್ದರಿಂದ ರೈತರಿಗೆ ಶಕ್ತಿ ತುಂಬಲು ಬೆಳೆಹಾನಿಗೊಳಗಾಗಿರುವ ರೈತರಿಗೆ 5 ಸಾವಿರ ರೂಪಾಯಿ ಪರಿಹಾರ ನೀಡುತ್ತಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ಬಳ್ಳಾರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಭತ್ತವನ್ನು ಬೆಳೆಯಲಾಗುತ್ತಿದೆ. ಈ ಬಾರಿ ಮಳೆ ಸುರಿದು ಬೆಳೆಯೆಲ್ಲವೂ ನಾಶವಾಗಿದೆ. ಇಂತಹ ಸಂದರ್ಭದಲ್ಲಿ ರೈತರ ನೆರವಿಗೆ ಸರ್ಕಾರ ಧಾವಿಸಲಿದೆ. ನವೆಂಬರ್ 1 ರಿಂದ ಬೆಳೆಹಾನಿ ಕುರಿತು ನೋಂದಣಿ ಮಾಡಿಕೊಳ್ಳಲಾಗುವುದು. ಡಿಸೆಂಬರ್ 1 ರಿಂದ ಖರೀದಿ ಕೇಂದ್ರಗಳ ಮೂಲಕ ಕೇಂದ್ರ ಸರ್ಕಾರ ನಿಗದಿಪಡಿಸಿದ 1835 ರೂ ಬೆಂಬಲ ಬೆಲೆಯಲ್ಲಿ ಭತ್ತವನ್ನು ಖರೀದಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ಶೇಂಗಾ, ಸೂರ್ಯಕಾಂತಿ, ಹೆಸರು ಮೊದಲಾದ ಬೆಳೆಗಳಿಗೆ ಉತ್ತೇಜನ ನೀಡಲು ನಮ್ಮ ಸರ್ಕಾರ ಬದ್ದವಾಗಿದೆ. ಆ ಕಾರಣಕ್ಕಾಗಿಯೇ ಈ ಬೆಳೆಗಳಿಗೆ ಬೆಂಬಲ ಬೆಲೆಯನ್ನೂ ನಿಗದಿಪಡಿಸಲಾಗಿದೆ.  ಖರೀದಿ ಕೇಂದ್ರಗಳ ಮೂಲಕ ಖರೀದಿ ಮಾಡಿ ರೈತರನ್ನು ಆರ್ಥಿಕವಾಗಿ ಮೇಲೆತ್ತುವ ಕೆಲಸ ಮಾಡುತ್ತೇವೆ ಎಂದರು.

ಮಹಾಮಳೆಗೆ ಮನೆಗಳನ್ನು ಕಳೆದುಕೊಂಡಂವರಿಗೆ 5 ಲಕ್ಷ ರೂಪಾಯಿ ನೀಡಿ ಮನೆ ಕಟ್ಟಿಸಿಕೊಡುವ ಕೆಲಸ ಪ್ರಗತಿಯಲ್ಲಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಬಡವರು, ಹಿಂದುಳಿದವರು, ದೀನದಲಿತರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಹಲವು ಯೋಜನೆಗಳನ್ನು ರೂಪಿಸಿದ್ದಾರೆ. ಕೇಂದ್ರ ಸರ್ಕಾರವೂ ಕಳೆದ 6 ವರ್ಷಗಳಲ್ಲಿ ಜನಪರ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ. ಈ ಎಲ್ಲಾ ವಿಷಯಗಳನ್ನು ಜನರಿಗೆ ತಿಳಿಸಿ ಮತಯಾಚನೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ಶಿಕ್ಷಕರ ಮತ್ತು ಪದವೀಧರ ಕ್ಷೇತ್ರವೂ ಸೇರಿದಂತೆ 4 ವಿಧಾನ ಪರಿಷತ್ ಕ್ಷೇತ್ರಗಳು ಬಿಜೆಪಿ ತೆಕ್ಕೆಗೆ ಬರಲಿವೆ. ಪ್ರತಿ 10 ಮಂದಿ ಮತದಾರರಿಗೆ ಒಬ್ಬರಂತೆ ಕಾರ್ಯಕರ್ತರನ್ನು ನೇಮಕ ಮಾಡಿದೆ. ಆ ಕಾರ್ಯಕರ್ತರು ಆ ಹತ್ತು ಮತದಾರರನ್ನು ನಿತ್ಯವು ಭೇಟಿ ಮಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮನಮುಟ್ಟುವಂತೆ ಹೇಳಿ ಬಿಜೆಪಿ ಅಭ್ಯರ್ಥಿಗಳಿಗೆ ಮತಚಲಾಯಿಸುವಂತೆ ಮನವೊಲಿಕೆ ಮಾಡುತ್ತಿದ್ದಾರೆ ಎಂದರು.

ಶಿರಾ ಮತ್ತು ರಾಜರಾಜೇಶ್ವರಿ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು ವಿಧಾನ ಪರಿಷತ್ತಿನಲ್ಲಿ ನಮ್ಮ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವುದು ಅನಿವಾರ್ಯವಾಗಿದೆ. ಹಾಗಾಗಿ ನಾಲ್ಕೂ ವಿಧಾನಪರಿಷತ್ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲು ಹೆಚ್ಚು ಒತ್ತು ನೀಡಲಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಉಳಿದ ಅವಧಿಗೂ ಮುಂದುವರಿಯುತ್ತಾರೆ. ಮುಖ್ಯಮಂತ್ರಿ ಬದಲಾವಣೆಯ ವಿಷಯ ಕೇವಲ ಊಹಾಪೋಹ. ಇನ್ನುಳಿದ ಎರಡೂವರೆ ವರ್ಷವೂ ಯಡಿಯೂರಪ್ಪನವರೇ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಶಿರಾ ಉಪಚುನಾವಣೆ: ಪ್ರತಿಷ್ಠೆಯ ಜಿದ್ದಾಜಿದ್ದಿನಲ್ಲಿ ಯಾವ ಪಕ್ಷ ಮುಂದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರದಿಂದ ಬೆಂಬಲ, ಭರವಸೆ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ರಾಜ್ಯದಿಂದ ಕಾರ್ಯಸಾಧ್ಯತಾ ವರದಿ ಬಂದ ನಂತರ, ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರವು ನೀಡಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು...

ಮಧ್ಯಪ್ರದೇಶ| ಪ್ರಬಲಜಾತಿ ಗುಂಪಿನಿಂದ ಹಲ್ಲೆ-ಜಾತಿನಿಂದನೆ; ನ್ಯಾಯ ಸಿಗದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದ ದಲಿತ ಕುಟುಂಬ

ಮಧ್ಯಪ್ರದೇಶದ ನೀಮಚ್ ಜಿಲ್ಲೆಯ ದಲಿತ ಕುಟುಂಬವೊಂದರ ಮೇಲೆ ಗ್ರಾಮದ ಪ್ರಬಲಜಾತಿ ಗುಂಪೊಂದು ಜಾತಿ ಆಧಾರಿತ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ. ದೂರ ನೀಡಿದರೂ ಕ್ರಮ ತಗೆದುಕೊಂಡಿದ್ದ ಎಂದು ಆರೋಪಿಸಿರುವ ಕುಟುಂಬ, ಪೊಲೀಸರು ನಿಷ್ಕ್ರಿಯತೆ...

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಹಬ್ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ

ವಿಶ್ವದ ಅತಿದೊಡ್ಡ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (ಎಲ್‌ಎನ್‌ಜಿ) ರಫ್ತು ಕೇಂದ್ರಗಳಲ್ಲಿ ಒಂದಾದ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಅಲ್ಲಿನ ಅನಿಲ ಸೌಲಭ್ಯಗಳಲ್ಲಿ...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ....

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...