Homeಮುಖಪುಟಜುಲೈ 12ಕ್ಕೆ ಪುರಿ ಜಗನ್ನಾಥ ರಥಯಾತ್ರೆ: ಸೀಮಿತ ಭಕ್ತರಿಗೆ ಅವಕಾಶ

ಜುಲೈ 12ಕ್ಕೆ ಪುರಿ ಜಗನ್ನಾಥ ರಥಯಾತ್ರೆ: ಸೀಮಿತ ಭಕ್ತರಿಗೆ ಅವಕಾಶ

- Advertisement -
- Advertisement -

ದೊಡ್ಡ ಸಭೆ, ಸಮಾರಂಭಗಳು ಕೊರೊನಾ ಸೋಂಕಿನ ಹರಡುವಿಕೆಯನ್ನು ಮತ್ತಷ್ಟು ಹೆಚ್ಚಿಸುತ್ತವೆ ಎಂದು ತಿಳಿದಿದ್ದರೂ ಕೂಡ, ಒಡಿಶಾ ಸರ್ಕಾರ ಜುಲೈ 12 ರಂದು ಪುರಿಯಲ್ಲಿ ಜಗನ್ನಾಥ ರಥಯಾತ್ರೆ ನಿಗದಿಯಂತೆ ನಡೆಯಲಿದೆ ಎಂದು ಘೋಷಿಸಿದೆ.

ಪ್ರತಿ ವರ್ಷ ರಥಯಾತ್ರೆ ನಡೆಯಲಿದ್ದು, ಭಗವಾನ್ ಜಗನ್ನಾಥ, ಭಗವಾನ್ ಬಾಲಭದ್ರ ಮತ್ತು ದೇವಿ ಸುಭದ್ರಾ ರಥಗಳನ್ನು ಸಾವಿರಾರು ಭಕ್ತರು ಎಳೆಯುತ್ತಾರೆ. ಕೊರೊನಾ ಕಾರಣದಿಂದ ಕಳೆದ ಬಾರಿಯು ಸೀಮಿತ ಜನರಿಗೆ ಅವಕಾಶ ನೀಡಲಾಗಿತ್ತು. ಈ ಬಾರಿಯು ಸೀಮಿತ 500 ಮಂದಿಗೆ ಅವಕಾಶ ನೀಡಲಾಗಿದೆ.

ಜುಲೈ 12 ರಂದು ನಡೆಯಲಿರುವ ರಥಯಾತ್ರೆಯಲ್ಲಿ ಭಕ್ತರು ಭಾಗವಹಿಸದಂತೆ ಪುರಿ ಜಿಲ್ಲಾಡಳಿತ ಕರ್ಫ್ಯೂ ವಿಧಿಸಲಿದೆ ಎಂದು ವಿಶೇಷ ಪರಿಹಾರ ಆಯುಕ್ತ ಪಿ.ಕೆ.ಜೆನಾ ಹೇಳಿದ್ದಾರೆ. ಪುರಿ ಬಿಟ್ಟು ಬೇರೆ ಯಾವುದೇ ಸ್ಥಳದಲ್ಲಿ ಯಾತ್ರೆ ನಡೆಯುವುದಿಲ್ಲ. ಆದರೆ, ದೇವಾಲಯದ ಆವರಣದಲ್ಲಿ ರಥಯಾತ್ರೆಗೆ ಸಂಬಂಧಿಸಿದ ಆಚರಣೆಗಳು ನಡೆಯಲಿವೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ಅಂಬೇಡ್ಕರ್‌ ಪೋಸ್ಟರ್‌ ತೆರವಿಗೆ ಆಕ್ಷೇಪಿಸಿದ ದಲಿತ ಯುವಕನ ಹತ್ಯೆ

“ಈ ವರ್ಷ ರಥಯಾತ್ರೆಯನ್ನು ಜಗನ್ನಾಥ ದೇವಸ್ಥಾನದ ಮುಂಭಾಗದ ಭವ್ಯವಾದ ರಸ್ತೆಯಾದ ಬಾದದಂಡದಲ್ಲಿ ನಡೆಸಲಾಗುತ್ತದೆ. ಕಳೆದ ವರ್ಷ ಮಾಡಿದಂತೆ ರಾಜ್ಯದಲ್ಲಿ ಬೇರೆಲ್ಲಿಯೂ ಯಾತ್ರೆ ನಡೆಸಲಾಗುವುದಿಲ್ಲ. ಆದಾಗ್ಯೂ, ರಥಯಾತ್ರೆಗೆ ಸಂಬಂಧಿಸಿದ ಆಚರಣೆಗಳನ್ನು ಆವರಣದೊಳಗಿನ ದೇವಾಲಯಗಳಲ್ಲಿ ಮಾಡಬಹುದು. ಪುರಿಯನ್ನು ಹೊರತುಪಡಿಸಿ ಒಡಿಶಾದ ಸ್ಥಳಗಳಲ್ಲಿ ಅಥವಾ ದೇವಾಲಯಗಳಲ್ಲಿ ಯಾವುದೇ ರಥಗಳನ್ನು ಎಳೆಯಲಾಗುವುದಿಲ್ಲ” ಎಂದು ಅಧಿಕಾರಿ ತಿಳಿಸಿದ್ದಾರೆ.

“ಭಗವಾನ್ ಜಗನ್ನಾಥನ ಪುರೋಹಿತರಿಗೆ ಮಾತ್ರ ಆಚರಣೆಗಳಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ಅಂತಿಮ ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ಹೊಂದಿರುವವರು ಅಥವಾ ರಥಯಾತ್ರೆಗೆ ಮುನ್ನ 48 ಗಂಟೆಗಳ ಒಳಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಿಸಿ, ನೆಗೆಟಿವ್ ಪ್ರಮಾಣ ಪತ್ರ ತಂದವರಿಗೆ ಮಾತ್ರ ಆಚರಣೆಗಳಲ್ಲಿ ಭಾಗವಹಿಸಲು ಅನುಮತಿ ನೀಡಲಾಗುತ್ತದೆ. ರಥಯಾತ್ರೆಯಲ್ಲಿ 500 ಕ್ಕಿಂತ ಹೆಚ್ಚು ಜನರಿಗೆ ಅವಕಾಶ ನೀಡುವುದಿಲ್ಲ” ಎಂದು ಹೇಳಿದ್ದಾರೆ.

ರಥಯಾತ್ರೆಯಲ್ಲಿ ರೈಲುಗಳು, ಬಸ್ಸುಗಳು ಮತ್ತು ಖಾಸಗಿ ವಾಹನಗಳನ್ನು ಪುರಿ ಪಟ್ಟಣಕ್ಕೆ ಪ್ರವೇಶಿಸಲು ಅನುಮತಿಸುವುದಿಲ್ಲ. ಕೊರೊನಾ ಮಾನದಂಡಗಳನ್ನು ಪಾಲಿಸಿಕೊಂಡೇ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಗುತ್ತದೆ ಎಂದು ಸರ್ಕಾರ ಹೇಳಿದೆ. ಕೊರೊನಾ ಸೋಂಕು ಕಾಣಿಸಿಕೊಳ್ಳುವ ಮೊದಲು ಪುರಿ ಜಗನ್ನಾಥ ಯಾತ್ರೆಯಲ್ಲಿ ದಿನಕ್ಕೆ ಸುಮಾರು 8 ಲಕ್ಷ ಭಕ್ತರು ಸೇರುತ್ತಿದ್ದರು ಎನ್ನಲಾಗಿದೆ.


ಇದನ್ನೂ ಓದಿ: ಕುಂಭಮೇಳದಿಂದ ಬಂದ ವ್ಯಕ್ತಿಯಿಂದ ಬೆಂಗಳೂರಿನ 33 ಜನರಿಗೆ ಕೊರೋನಾ: ಕುಂಭಯಾತ್ರಿಗಳೇ ಸುಪರ್-ಸ್ಪ್ರೆಡರ್ಸ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ, ತಮಿಳುನಾಡು, ಪ. ಬಂಗಾಳದ 32 ಮಂದಿಗೆ ‘ಪದ್ಮ’ ಪ್ರಶಸ್ತಿ : ವಿಧಾನಸಭೆ ಚುನಾವಣೆ ಮೇಲೆ ಬಿಜೆಪಿ ಕಣ್ಣು?

ಗಣರಾಜ್ಯೋತ್ಸವದ ಮುನ್ನಾದಿನದಂದು ಘೋಷಿಸಲಾದ 131 'ಪದ್ಮ ಪ್ರಶಸ್ತಿ'ಗಳಲ್ಲಿ, 38 ಪ್ರಶಸ್ತಿಗಳು ಈ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿಯ ಪಾಲಾಗಿವೆ. ದೇಶದ ಎರಡನೇ ಅತ್ಯುನ್ನತ...

‘ಏಕರೂಪ ಭಾರತವನ್ನಲ್ಲ, ಏಕೀಕೃತ ಭಾರತವನ್ನ ಸಂಭ್ರಮಿಸೋಣ’: ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ 

ಚೆನ್ನೈ: ಗಣರಾಜ್ಯೋತ್ಸವವನ್ನು ಏಕರೂಪ ಭಾರತದಂತಲ್ಲದೇ ಏಕೀಕೃತ ಭಾರತವಾಗಿ ಆಚರಿಸಬೇಕೆಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ ನೀಡಿದ್ದಾರೆ.  ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಸ್ಟಾಲಿನ್, "ಏಕರೂಪದ ಭಾರತವಲ್ಲ, ಏಕೀಕೃತ ಭಾರತವನ್ನು...

ಗಣರಾಜ್ಯೋತ್ಸವ ಪರೇಡ್ : ಸಿಆರ್‌ಪಿಎಫ್ ಪುರುಷರ ತುಕಡಿ ಮುನ್ನಡೆಸಿ ಗಮನಸೆಳೆದ ಮಹಿಳಾ ಅಧಿಕಾರಿ ಸಿಮ್ರಾನ್ ಬಾಲಾ

ದೆಹಲಿಯ ಕರ್ತವ್ಯ ಪಥದಲ್ಲಿ ನಡೆದ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಸಿಆರ್‌ಪಿಎಫ್ ಸಹಾಯಕ ಕಮಾಂಡೆಂಟ್ ಸಿಮ್ರಾನ್ ಬಾಲಾ ಅವರು ಅರೆಸೈನಿಕ ಪಡೆಯ ಸಂಪೂರ್ಣ ಪುರುಷರ ತುಕಡಿಯನ್ನು ಮುನ್ನಡೆಸುವ ಮೂಲಕ ಇತಿಹಾಸ ನಿರ್ಮಿಸಿದರು. ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯವರಾದ...

ಉತ್ತರಾಖಂಡ: ಸೂಫಿ ಕವಿ ಬಾಬಾ ಬುಲ್ಲೆ ಶಾ ಅವರ ಮಂದಿರವನ್ನು ಧ್ವಂಸಗೊಳಿಸಿದ ಹಿಂದೂ ರಕ್ಷಣಾ ದಳದ ದುಷ್ಕರ್ಮಿಗಳು

ಉತ್ತರಾಖಂಡದ ಮಸ್ಸೂರಿಯಲ್ಲಿರುವ 18 ನೇ ಶತಮಾನದ ಸೂಫಿ ಕವಿ ಬಾಬಾ ಬುಲ್ಲೆಹ್ ಷಾ ಅವರ ದೇವಾಲಯವನ್ನು ಶುಕ್ರವಾರ ಹಿಂದೂ ರಕ್ಷಾ ದಳದೊಂದಿಗೆ ಸಂಪರ್ಕ ಹೊಂದಿರುವವರು ಧ್ವಂಸಗೊಳಿಸಿದ್ದಾರೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ. "ಜೈ...

ಅಕ್ಷರಧಾಮ ದೇವಾಲಯ ದಾಳಿ ಪ್ರಕರಣ: 6 ವರ್ಷಗಳ ನಂತರ ಮೂವರ ಮುಸ್ಲಿಂ ವ್ಯಕ್ತಿಗಳನ್ನು ಖುಲಾಸೆಗೊಳಿಸಿದ ಅಹಮದಾಬಾದ್ ಪೋಟಾ ನ್ಯಾಯಾಲಯ

ಅಕ್ಷರಧಾಮ ದೇವಾಲಯದ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಮೂವರು ಮುಸ್ಲಿಂ ಪುರುಷರನ್ನು ಕಳೆದ ವಾರ ಅಹಮದಾಬಾದ್‌ನ ವಿಶೇಷ ಭಯೋತ್ಪಾದನಾ ತಡೆ ಕಾಯ್ದೆ (ಪೋಟಾ) ನ್ಯಾಯಾಲಯವು ಖುಲಾಸೆಗೊಳಿಸಿದ್ದು, ವರ್ಷಗಳ ಕಾನೂನು ಪ್ರಕ್ರಿಯೆಗಳ ನಂತರ...

ಡಿಜಿ-ಐಜಿಪಿ ಎಂ.ಎ ಸಲೀಂ ವಿರುದ್ಧ ಸುಳ್ಳಾರೋಪ : ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಮಹಾನಿರೀಕ್ಷಕ (ಡಿಜಿ-ಐಜಿಪಿ) ಎಂ.ಎ ಸಲೀಂ ಅವರ ವಿರುದ್ಧ ಸುಳ್ಳು ಮಾಹಿತಿ ಹರಡಿದ ಆರೋಪದ ಮೇಲೆ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ದ ಬೆಂಗಳೂರಿನ ಸೈಬರ್ ಅಪರಾಧ ಪೊಲೀಸರು...

ಭಾರತ-ಯುರೋಪ್ ಒಕ್ಕೂಟ ವ್ಯಾಪಾರ ಒಪ್ಪಂದ: ಬಿಎಂಡಬ್ಲ್ಯು, ವೋಕ್ಸ್‌ವ್ಯಾಗನ್, ಮರ್ಸಿಡಿಸ್ ಬೆಂಜ್ ಮೇಲಿನ ಸುಂಕ ಶೇ. 110 ರಿಂದ ಶೇ. 40ಕ್ಕೆ ಇಳಿಕೆಯಾಗುವ ಸಾಧ್ಯತೆ

ಯುರೋಪಿಯನ್ ಒಕ್ಕೂಟದಿಂದ ಆಮದು ಮಾಡಿಕೊಳ್ಳುವ ಕಾರುಗಳ ಮೇಲಿನ ಸುಂಕವನ್ನು ಪ್ರಸ್ತುತ ಶೇ. 110 ರಿಂದ ಶೇ. 40 ಕ್ಕೆ ಇಳಿಸಲು ಭಾರತ ಯೋಜಿಸಿದೆ, ಇದು ದೇಶದ ವಿಶಾಲ ಮಾರುಕಟ್ಟೆಯಲ್ಲಿ ಇದುವರೆಗಿನ ಅತಿದೊಡ್ಡ ಆರಂಭವಾಗಿದೆ,...

ಗಣರಾಜ್ಯೋತ್ಸವ : ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣ ಯಥಾವತ್ ಓದಿದ ರಾಜ್ಯಪಾಲ ಗೆಹ್ಲೋಟ್

ಸಂವಿಧಾನವು ತನ್ನ ಮೊದಲ ಅನುಚ್ಛೇದದಲ್ಲಿಯೇ ಭಾರತವನ್ನು ಒಂದು ರಾಜ್ಯಗಳ ಒಕ್ಕೂಟ ಎಂದು ಘೋಷಿಸುತ್ತದೆ. ಸಶಕ್ತ ರಾಜ್ಯಗಳ ಮೂಲಕ ಸಶಕ್ತ ಭಾರತ ನಿರ್ಮಿಸುವುದು ನಮ್ಮ ಸಂವಿಧಾನದ ನಿರ್ಮಾತೃಗಳ ಕನಸಾಗಿತ್ತು. ಆ ಕನಸಿಗೆ ಕುಂದುಂಟಾಗದಂತೆ ನಮ್ಮ...

‘ಪುಸ್ತಕ ಮನೆʼಯ ಅಂಕೇಗೌಡ ಸೇರಿ ರಾಜ್ಯದ ಮೂವರಿಗೆ ಪದ್ಮಶ್ರೀ ಪ್ರಶಸ್ತಿ

ಕರ್ನಾಟಕದ ಮೂವರು ಸೇರಿದಂತೆ ದೇಶದ ಒಟ್ಟು 45 ಸಾಧಕರನ್ನು 2026ನೇ ಸಾಲಿನ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ. ಮಂಡ್ಯ ಮೂಲದ ಪುಸ್ತಕ ಪ್ರೇಮಿ ಅಂಕೇಗೌಡ, ದಾವಣಗೆರೆಯ ಹಿಮೋಫಿಲಿಯಾ ಸೊಸೈಟಿಯ ವೈದ್ಯ...

ದೆಹಲಿ ಲೆಫ್ಟಿನೆಂಟ್ ಗವರ್ನರ್ ಮಾನನಷ್ಟ ಪ್ರಕರಣ : ಹೋರಾಟಗಾರ್ತಿ ಮೇಧಾ ಪಾಟ್ಕರ್ ಖುಲಾಸೆ

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು 20 ವರ್ಷಗಳ ಹಿಂದಿನ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಪರಿಸರ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರನ್ನು ದೆಹಲಿ ನ್ಯಾಯಾಲಯ ಶನಿವಾರ (ಜ.24) ಖುಲಾಸೆಗೊಳಿಸಿದೆ ಎಂದು ಬಾರ್...