Homeಮುಖಪುಟಮತದಾರರನ್ನು ಇವಿಎಂ ಬಳಿ ತೆರಳಲೇ ಬಿಡುತ್ತಿರಲಿಲ್ಲ! ಬೀಡ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮದ ಆರೋಪ

ಮತದಾರರನ್ನು ಇವಿಎಂ ಬಳಿ ತೆರಳಲೇ ಬಿಡುತ್ತಿರಲಿಲ್ಲ! ಬೀಡ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮದ ಆರೋಪ

- Advertisement -
- Advertisement -

ಮಹಾರಾಷ್ಟ್ರದ ಬೀಡ್‌ ಲೋಕಸಭೆ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದ್ದು, ನಮ್ಮನ್ನು ಎನ್‌ಡಿಎ ಅಭ್ಯರ್ಥಿಗಳ ಪರ ಗುಂಪು ಇವಿಎಂ ಬಳಿ ತೆರಳದಂತೆ ತಡೆದಿದ್ದಾರೆ ಎಂದು ಮತದಾರರು ಆರೋಪಿಸಿದ್ದಾರೆ. ಈ ರೀತಿಯ ಆರೋಪ ಬೀಡ್‌ ಲೋಕಸಭೆ ಕ್ಷೇತ್ರದ ವಿವಿಧ ಮತಗಟ್ಟೆಯಲ್ಲಿ ಕೇಳಿಬಂದಿದ್ದು, ಈ ಕುರಿತು ಪ್ರತಿಪಕ್ಷಗಳು ಚು.ಆಯೋಗಕ್ಕೆ ದೂರು ನೀಡಿದೆ.

ಮಹಾರಾಷ್ಟ್ರದ ಪರ್ಲಿ ನಗರದಲ್ಲಿ ವಾಸಿಸುವ ರೈತ ನಾನಾ ನೌಕರೆ, ಮೇ 13ರಂದು ಶಾರದಾ ನಗರದ ವಿವೇಕ ವರ್ಧಿನಿ ಪ್ರಾಥಮಿಕ ಶಾಲೆಯಲ್ಲಿರುವ ಮತಗಟ್ಟೆಗೆ ಮತ ಚಲಾಯಿಸಲು ಹೋಗಿದ್ದರು. ಮತಗಟ್ಟೆಯಲ್ಲಿ ಅವರ ಬೆರಳಿಗೆ ಶಾಯಿ ಹಾಕಲಾಗಿದೆ ಆದರೆ ಅವರು ಮತಯಂತ್ರದ ಬಳಿ ಮತ ಚಲಾಯಿಸಲು ಹೋದಾಗ ಅಲ್ಲಿದ್ದ ಕೆಲವರು ಅವರನ್ನು ಮತಗಟ್ಟೆಯಿಂದ ಹೊರಗೆ ಹೋಗುವಂತೆ ಆಗ್ರಹಿಸಿ ಕೊನೆಗೆ ಮತಗಟ್ಟೆಯಿಂದ ಹೊರಕ್ಕೆ ತಳ್ಳಿದ್ದಾರೆ ಎಂದು ಆರೋಪಿಸಿದ್ದಾರೆ.

ನನ್ನ ಕುಟುಂಬದ ಸುರಕ್ಷತೆಯ ಕಾರಣದಿಂದ ಹೆದರಿ ಮತಯಂತ್ರದ ಬಳಿ ಹೋಗುವ ಹೆಚ್ಚಿನ ಪ್ರಯತ್ನಗಳನ್ನು ನಾನು ಮಾಡಲಿಲ್ಲ ಎಂದು ನೌಕರೆ ಹೇಳಿದ್ದಾರೆ. ಮತದಾನ ಮಾಡದಂತೆ ನಮಗೆ ನಿರ್ಬಂಧಿಸಿದಾಗ ನಾನು ಮತ್ತು ನನ್ನ ಕುಟುಂಬ ಸ್ಥಳದಿಂದ ಹೊರಟೆವು, ಚುನಾವಣಾ ಅಧಿಕಾರಿಯೊಬ್ಬರು ಸ್ಥಳದಲ್ಲಿಯೇ ಇದ್ದರು ಆದರೆ ಅವರಿಂದ ಏನೂ ಮಾಡಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.

ಬೀಡ್ ಲೋಕಸಭಾ ಕ್ಷೇತ್ರದ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಒಂದಾದ ಪರ್ಲಿಯಾದ್ಯಂತ ಹಲವಾರು ಮತದಾರರು ‘ನಮ್ಮ ಮತದಾನದ ಹಕ್ಕನ್ನು ನಿರಾಕರಿಸಲಾಗಿದೆ’ ಎಂದು ಇದೇ ರೀತಿಯ ಆರೋಪವನ್ನು ಮಾಡಿದ್ದಾರೆ. ಬಿಜೆಪಿ ಮತ್ತು ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮಹಾಯುತಿ ಮೈತ್ರಿಕೂಟದ ಕಾರ್ಯಕರ್ತರು ಮತದಾರರಿಗೆ ಬೆದರಿಕೆ ಹಾಕಿದ್ದಾರೆ ಎಂದು ವಿರೋಧ ಪಕ್ಷದ ಕಾರ್ಯಕರ್ತರು ಆರೋಪಿಸಿದ್ದಾರೆ.

ಈ ಕುರಿತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣ) ನಾಯಕ ಬಜರಂಗ್ ಸೋನಾವಾನೆ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಮತದಾರರ ಕೈಗಳಿಗೆ ಶಾಯಿ ಹಾಕಿ ವಾಪಾಸ್ಸು ಕಳುಹಿಸಿ ಮತದಾನದ ಹಕ್ಕನ್ನು ಕಸಿದುಕೊಂಡು ನಕಲಿ ಮತದಾನವನ್ನು ಮಾಡಲಾಗಿದೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.

ನಾನು ಧರ್ಮಪುರಿಯಲ್ಲಿ ಬೆಳಿಗ್ಗೆ 9 ಗಂಟೆಗೆ ಮುಸ್ಲಿಂ ಮಹಿಳೆಯಿಂದ ಈ ಕುರಿತ ಮೊದಲ ದೂರು ಸ್ವೀಕರಿಸಿದೆ. ಮಹಿಳೆಯು, ನನ್ನ ಬೆರಳುಗಳಿಗೆ ಶಾಯಿ ಹಾಕಲಾಗಿದೆ, ಆದರೆ ಮತದಾನಕ್ಕೆ ಅವಕಾಶ ಕೊಡದೆ ಬೇರೆಯವರು ಮತದಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಧರ್ಮಪುರಿಯಲ್ಲಿ ಸುಮಾರು 1,000 ಮುಸ್ಲಿಂ ಮತದಾರರಿದ್ದರು ಎಂದು ಬಜರಂಗ್ ಸೋನಾವಾನೆ ಹೇಳಿದ್ದಾರೆ.

ಪರ್ಲಿಯಿಂದ ಈ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಬಜರಂಗ್ ಸೋನಾವಾನೆ ಮತ್ತು ಬಿಜೆಪಿಯ ಮಾಜಿ ಶಾಸಕಿ ಪಂಕಜಾ ಮುಂಡೆ ಕಣದಲ್ಲಿದ್ದಾರೆ. ಮೇ 13ರಂದು ಸೋನಾವಾನೆ ಚುನಾವಣಾ ಆಯೋಗಕ್ಕೆ ಈ ಕುರಿತು ದೂರು ಸಲ್ಲಿಸಿದ್ದು, ಪರ್ಲಿ, ಮಜಲ್ಗಾಂವ್ ಮತ್ತು ಕೈಜ್‌ನ ಕೆಲವು ಬೂತ್‌ಗಳಲ್ಲಿ ಮರು ಮತದಾನಕ್ಕೆ ಒತ್ತಾಯಿಸಿದ್ದಾರೆ. ಧರ್ಮಪುರಿ ಗ್ರಾಮದಲ್ಲಿ ಮುಸ್ಲಿಮರು ಹಾಗೂ ಜಿರೇವಾಡಿ ಗ್ರಾಮದಲ್ಲಿ ಹಿಂದುಳಿದ ವರ್ಗದ ಮತದಾರರಿಗೆ ಮತದಾನ ಮಾಡಲು ಅವಕಾಶವನ್ನು ನೀಡಲಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು 48 ಗಂಟೆಗಳ ಒಳಗೆ ವರದಿ ಸಲ್ಲಿಸುವಂತೆ ಮಹಾರಾಷ್ಟ್ರ ಮುಖ್ಯ ಚುನಾವಣಾ ಆಯುಕ್ತರು ಜಿಲ್ಲಾ ಚುನಾವಣಾಧಿಕಾರಿಗೆ ಸೂಚಿಸಿದ್ದಾರೆ. ಸೋನಾವಾನೆ ಅವರು ಚುನಾವಣಾ ಆಯೋಗಕ್ಕೆ ಈ ಕುರಿತು ಹತ್ತಾರು ವಿಡಿಯೋಗಳನ್ನು ಪುರಾವೆಯಾಗಿ ಸಲ್ಲಿಸಿದ್ದಾರೆ ಎಂದು ಹೇಳಿದ್ದಾರೆ. ಆದರೆ ಜಿಲ್ಲಾ ಚುನಾವಣಾಧಿಕಾರಿ  ಮರುಮತದಾನ ಅಗತ್ಯವಿಲ್ಲ ಎಂದು ಚುನಾವಣಾ ಆಯೋಗಕ್ಕೆ ವರದಿಯನ್ನು ಕಳುಹಿಸಿದ್ದಾರೆ ಎನ್ನಲಾಗಿದೆ.

ನಮಗೆ ಸಲ್ಲಿಸಿದ ಯಾವುದೇ ವೀಡಿಯೊಗಳಲ್ಲಿ ಚುನಾವಣಾ ಅಕ್ರಮ ನಡೆದಿರುವುದು ಸೆರೆಯಾಗಿಲ್ಲ, ಕೆಲವು ಬೂತ್‌ಗಳಲ್ಲಿ ಜನಸಂದಣಿಯನ್ನು ಮಾತ್ರ ತೋರಿಸುತ್ತದೆ. ಈ ಕುರಿತು ಮತಗಟ್ಟೆ ಅಧಿಕಾರಿಗಳನ್ನು ಕೂಡ ವಿಚಾರಣೆ ನಡೆಸಲಾಗಿದೆ. ಈ ವೇಳೆ ಯಾವುದೇ ಅವ್ಯವಹಾರ ನಡೆದಿರುವುದು ಕಂಡು ಬಂದಿಲ್ಲ ಎಂದು  ಜಿಲ್ಲಾಧಿಕಾರಿ ದೀಪಾ ಮುಂಡೆ ಹೇಳಿದ್ದಾರೆ.

ಬೀಡ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಆಡಳಿತ ವಿರೋಧಿ ಭಾವನೆಯನ್ನು ಎದುರಿಸುತ್ತಿದೆ ಎಂದು ವಿರೋಧ ಪಕ್ಷದ ನಾಯಕರು ಹೇಳಿದ್ದಾರೆ. ಬಿಜೆಪಿ ಪಕ್ಷವು 1996ರಿಂದ ಎಲ್ಲಾ ಲೋಕಸಭಾ ಚುನಾವಣೆಗಳಲ್ಲಿ ಈ ಕ್ಷೇತ್ರವನ್ನು ಮರಾಠರು ಮತ್ತು ಒಬಿಸಿಗಳ ಬೆಂಬಲದೊಂದಿಗೆ ಗೆದ್ದಿದೆ. ಆದರೆ ಈ ಬಾರಿ ಮರಾಠ ಮೀಸಲಾತಿಯ ಬೇಡಿಕೆ, ಇತರ ಹಿಂದುಳಿದ ವರ್ಗಗಳಲ್ಲಿ ಮರಾಠರಿಗೆ ಮರಾಠ ಕೋಟಾವನ್ನು ನೀಡುವ ಕುರಿತು ವಿರೋಧವಿದೆ. ಬೀಡ್‌ನಲ್ಲಿ ಸುಮಾರು 1.15 ಲಕ್ಷ ಒಬಿಸಿ ಮತದಾರರು, ಒಂದು ಲಕ್ಷಕ್ಕೂ ಹೆಚ್ಚು ಮರಾಠರು, ಸುಮಾರು 31,000 ದಲಿತರು ಮತ್ತು 43,000 ಮುಸ್ಲಿಮರು ಇದ್ದಾರೆ. 64,000 ಮತದಾರರನ್ನು ಹೊಂದಿರುವ ಪಂಕಜಾ ಮುಂಡೆ ಸೇರಿರುವ ಒಬಿಸಿ ಗುಂಪಿನ ವಂಜಾರಿ ಸಮುದಾಯವು ಇಲ್ಲಿದೆ. ಬೀಡಿನಲ್ಲಿ ಇರುವ ಹಲವಾರು ಅಧಿಕಾರಿಗಳು ಈ ಸಮುದಾಯದಿಂದ ಬಂದವರಾಗಿದ್ದಾರೆ. ಒಂದು ಕುಟುಂಬವು ಹಲವು ವರ್ಷಗಳಿಂದ ಇಲ್ಲಿ ಅಧಿಕಾರದಲ್ಲಿದ್ದು, ಜನರಿಗೆ ಏನೂ ಮಾಡಿಲ್ಲವಾದ್ದರಿಂದ ಬಿಜೆಪಿಯ ಮತ ಹಂಚಿಕೆಯು ಬೀಡಿನಲ್ಲಿ ಕುಸಿಯುತ್ತದೆ. ಆದ್ದರಿಂದ ಹಿಂಬಾಗಿಲ ಮೂಲಕ ಮತವನ್ನು ಪಡೆಯಲು ಈ ರೀತಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನು ಓದಿ: ದಲಿತ ಸಮುದಾಯದ ಮೆರವಣಿಗೆಯಲ್ಲಿ ಭಾಗವಹಿಸಿದ್ದಕ್ಕೆ ಅಗ್ನಿಪರೀಕ್ಷೆ ಎದುರಿಸಿದ ಫ್ರೆಂಚ್‌ ನಿರ್ದೇಶಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...