Homeಮುಖಪುಟಜೆಡಿಯು ನಾಯಕನ ಮಗಳಿಂದ ಬಿಹಾರದಲ್ಲಿ ಹೊಸ ಪಕ್ಷ ಘೋಷಣೆ.. ತಾನೇ ಸಿಎಂ ಅಭ್ಯರ್ಥಿ ಎಂದ ಪುಷ್ಪಮ್...

ಜೆಡಿಯು ನಾಯಕನ ಮಗಳಿಂದ ಬಿಹಾರದಲ್ಲಿ ಹೊಸ ಪಕ್ಷ ಘೋಷಣೆ.. ತಾನೇ ಸಿಎಂ ಅಭ್ಯರ್ಥಿ ಎಂದ ಪುಷ್ಪಮ್ ಪ್ರಿಯಾ ಚೌಧರಿ

- Advertisement -
- Advertisement -

ಜನತಾದಳ ಯುನೈಟೆಡ್ (ಜೆಡಿಯು) ನಾಯಕ ವಿನೋದ್ ಚೌಧರಿ ಅವರ ಪುತ್ರಿ ಪುಷ್ಪಮ್ ಪ್ರಿಯಾ ಚೌಧರಿ “ತನ್ನನ್ನು ತಾನೇ ಬಿಹಾರ 2020ರ ವಿಧಾನಸಭಾ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿ” ಎಂದು ಘೋಷಿಸಿಕೊಂಡಿದ್ದಾರೆ. ಆ ಮೂಲಕ ಬಿಹಾರ ರಾಜಕಾರಣದಲ್ಲಿ ಮತ್ತಷ್ಟು ವಿವಾದ ಹುಟ್ಟಿಸಿದ್ದಾರೆ.

ಫ್ಲುರಲ್ಸ್‌ (ಬಹುತ್ವ) ಎಂಬ ರಾಜಕೀಯ ಪಕ್ಷವನ್ನು ಹುಟ್ಟುಹಾಕಿರುವ ಅವರು “ಬಿಹಾರಕ್ಕೆ ವೇಗ ಬೇಕು, ಬಿಹಾರಕ್ಕೆ ರೆಕ್ಕೆಗಳು ಬೇಕು, ಬಿಹಾರಕ್ಕೆ ಬದಲಾವಣೆ ಬೇಕು. ಏಕೆಂದರೆ ಇದೆಲ್ಲಕ್ಕೂ ಬಿಹಾರ ಅರ್ಹವಾಗಿದೆ. ಬುಲ್ಶಿಟ್ ರಾಜಕೀಯವನ್ನು ತಿರಸ್ಕರಿಸಿ, 2020 ರಲ್ಲಿ ಬಿಹಾರವನ್ನು ಆಳಲು ಫ್ಲುರಲ್ಸ್‌ ಸೇರಿಕೊಳ್ಳಿ ಎಂದು ಆಕೆ ಕರೆ ನೀಡಿರುವ ಹೋರ್ಡಿಂಗ್‌ಗಳು ಪಾಟ್ನಾದಲ್ಲಿ ರಾರಾಜಿಸುತ್ತಿವೆ.

ಲಾಸ್ವೆಲ್ ಹೇಳಿದಂತೆ, ರಾಜಕೀಯವು ಯಾರು, ಏನನ್ನು, ಯಾವಾಗ ಮತ್ತು ಹೇಗೆ ಪಡೆಯುತ್ತದೆ ಎಂಬುದಾಗಿದೆ. ಇದನ್ನು ಅನುಸರಿಸಿ, ಬಿಹಾರಕ್ಕೆ ನೀಲನಕ್ಷೆ ಬೇಕು. ಅದಕ್ಕಾಗಿ ಫ್ಲುರಲ್ಸ್‌ 2025 ಮತ್ತು 2030 ಕ್ಕೆ ಬಿಹಾರಕ್ಕೆ ನಿರ್ದಿಷ್ಟ ಮಾರ್ಗಸೂಚಿಯನ್ನು ಹೊಂದಿವೆ ಎಂದು ಪುಷ್ಪಮ್ ಪ್ರಿಯಾ ಚೌಧರಿ ಟ್ವೀಟ್‌ ಮಾಡಿದ್ದಾರೆ.

ಈ ಕುರಿತು ಆಕೆಯ ತಂದೆ ಮತ್ತು ಜೆಡಿಯು ನಾಯಕ ವಿನೋದ್ ಚೌಧರಿ “ಅವಳೂ ವಯಸ್ಕಳು ಮತ್ತು ವಿದ್ಯಾವಂತಳು, ಇದು ಅವಳ ನಿರ್ಧಾರ. ಅವಳು ಪಕ್ಷದ ಉನ್ನತ ನಾಯಕರಿಗೆ ಸವಾಲು ಹಾಕುತ್ತಿದ್ದರೆ ಪಕ್ಷ ಅದನ್ನು ಬೆಂಬಲಿಸುವುದಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...